ಬಿಹಾರ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು. ಆದರೆ ಬಿಹಾರದಲ್ಲೂ ಮತಗಳ ಕಳುವು ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಎನ್‌ಡಿಎ ಮೈತ್ರಿಯು ದೊಡ್ಡ ಗೆಲುವಿನತ್ತ ದಾಪುಗಾಲು ಇಟ್ಟಿದೆ. ಕಾಂಗ್ರೆಸ್‌ನ ಮಹಾಘಟಬಂಧನ ಮೈತ್ರಿಕೂಟವು ಕಳಪೆ ಸಾಧನೆ ಮಾಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಶುಕ್ರವಾರ ವಿಧಾನಸೌಧ ಆವರಣಲದಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಬಾಗಲಕೋಟೆಯಲ್ಲಿ ಕಬ್ಬಿಗೆ ಬೆಂಕಿ ಪ್ರಕರಣ : ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ
ಬಾಗಲಕೋಟೆ ಕಬ್ಬು ಬೆಳೆಗಾರರು ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿರುವ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿ, “ರೈತರು ಅದಕ್ಕೆ ಕಾರಣರಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಸರ್ಕಾರ 3300 ರೂ.ಗಳ ದರ ನಿಗದಿ ಮಾಡಿದ್ದು, ಮುಧೋಳದ ರೈತರು ಅದಕ್ಕೆ ಒಪ್ಪಿಗೆ ನೀಡಿ ಚಳವಳಿಯನ್ನು ವಾಪಸ್ಸು ಪಡೆಯಬೇಕು” ಎಂದು ಮನವಿ ಮಾಡಿದರು.





