ಬಾನು ಮುಷ್ತಾಕ್‌ ದಸರಾ ಉದ್ಘಾಟಿಸದಂತೆ ತಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ, ನಾಳೆ ವಿಚಾರಣೆ

Date:

ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್‌ ಅಂಗಳಕ್ಕೂ ತಲುಪಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಹೆಚ್‌ ಎಸ್‌ ಗೌರವ್‌ ಎಂಬವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ದಸರಾ ಹಬ್ಬ ಸೆಪ್ಟೆಂಬರ್ 22ರಿಂದ ಪ್ರಾರಂಭಗೊಳ್ಳಲಿದ್ದು, ಅರ್ಜಿಯ ತುರ್ತು ವಿಚಾರಣೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾ. ಕೆ.ವಿನೋದ್ ಚಂದ್ರನ್ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ಅರ್ಜಿದಾರರ ಪರ ವಕೀಲು ಮನವಿ ಮಾಡಿದ್ದಾರೆ. ಅರ್ಜಿಯನ್ನು ಮಾನ್ಯ ಮಾಡಿದ ಕೋರ್ಟ್ ಶುಕ್ರವಾರ (ಸೆ.19) ವಿಚಾರಣೆ ನಡೆಸುವುದಾಗಿ ಹೇಳಿದೆ.

ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿಗಳನ್ನು ಸೆ.15 ರಂದು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ನೇತೃತ್ವದ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ, “ರಾಜ್ಯ ಸರ್ಕಾರ ಆಯೋಜಿಸುವ ಕಾರ್ಯಕ್ರಮದಲ್ಲಿ ಭಿನ್ನ ಧರ್ಮದ ವ್ಯಕ್ತಿ ಭಾಗಿಯಾಗುವುದು, ಅರ್ಜಿದಾರರ ಯಾವುದೇ ಕಾನೂನು ಅಥವಾ ಸಾಂವಿಧಾನಿಕ ಹಕ್ಕನ್ನು ಹೇಗೆ ಉಲ್ಲಂಘಿಸುತ್ತದೆ? ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳಿಗೆ ವಿರುದ್ಧ ಹೇಗೆ ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...