ವಿಮಾನ ದುರಂತ | ನಾವು ಬಿಜೆಪಿ, ಜೆಡಿಎಸ್ ಥರ ನೀಚ ರಾಜಕೀಯ ಮಾಡಲ್ಲ: ಡಿಸಿಎಂ ಡಿ ಕೆ ಶಿವಕುಮಾರ್‌ ಕಿಡಿ

Date:

ನಾವು ಅಹಮದಾಬಾದ್ ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡೋದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಏನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹರಿಹಾಯ್ದರು.

ಸದಾಶಿವನಗರ ನಿವಾಸದ ಬಳಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ, “ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟುಹೋಗಿದ್ದಾರೆ. ಆ ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತದೆ” ಎಂದರು.

“ಅಕಸ್ಮಾತ್ 500 ಮೀಟರ್ ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಮಂದಿಯ ಜೀವಹಾನಿಯಾಗುತ್ತಿತ್ತು. ಈಗ ವೈದ್ಯಕೀಯ ಹಾಸ್ಟೆಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿ ಮಾತನಾಡಿದೆವು. ಈ ಅಪಘಾತ ಕುರಿತು ಬ್ಲಾಕ್ ಬಾಕ್ಸ್ ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಅಲ್ಲಿ ಹೋಗಿ ಸಾಂತ್ವನ ಹೇಳಿದ್ದೇವೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆ ನಂತರ ವಿಮಾನಯಾನ ಸಚಿವರ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡುತ್ತಿವೆ ಎಂದು ಕೇಳಿದಾಗ, “ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಹೆಣದ ಮೇಲೆ ರಾಜಕೀಯ ಮಾಡುವುದೇ ಕೆಲಸ. ನಾವು ಹಳೇ ಪ್ರಕರಣ ಹಾಗೂ ಈ ಪ್ರಕರಣವನ್ನು ಮುಂದಿಟ್ಟುಕೊಂಡು ಟೀಕೆ ಮಾಡಬಹುದು. ಆದರೆ ನಾವು ಅವರ ಮಟ್ಟಕ್ಕೆ ಇಳಿಯುವುದಿಲ್ಲ. ಈ ವಿಚಾರದಲ್ಲಿ ಅನೇಕ ತಾಂತ್ರಿಕ ಅಂಶಗಳಿವೆ. ನಾನು ಅವುಗಳ ತಜ್ಞನಲ್ಲ. ಈ ಎಲ್ಲಾ ವಿಚಾರವಾಗಿ ಚರ್ಚೆ ಆಗುತ್ತಿದೆ. ಆದರೆ ಈ ವಿಚಾರವನ್ನು ರಾಜಕೀಯಗೊಳಿಸುವ ವ್ಯಕ್ತಿ ನಾನಲ್ಲ. ಈ ಸಮಯದಲ್ಲಿ ಕೇಂದ್ರ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಇದು ದೇಶದ ಗಂಭೀರ ವಿಚಾರ” ಎಂದು ತಿಳಿಸಿದರು.

ರಾಜ್ಯ ಸರ್ಕಾರ ವಸೂಲಿ ಮಾಡುತ್ತಿರುವ ತೆರಿಗೆ ನೋಡಿದರೆ ನನ್ನ ಸರ್ಕಾರ ಇದ್ದಿದ್ದರೆ ಗೃಹಲಕ್ಷ್ಮಿಗೆ 5 ಸಾವಿರ ಕೊಡುತ್ತಿದ್ದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಅವರು ಚೆನ್ನಾಗಿ ಆರೋಗ್ಯಕರವಾಗಿರಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...