ಪ್ರಧಾನಿ, ಎನ್‌ಸಿಬಿಸಿ ಅಧ್ಯಕ್ಷರಿಂದ ಹಿಂದುಳಿದ ವರ್ಗಗಳನ್ನು ದಿಕ್ಕು ತಪ್ಪಿಸುವ ಕೆಲಸ: ದ್ವಾರಕಾನಾಥ್

Date:

ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಹಂಸರಾಜ್ ಗಂಗಾರಾಮ್ ಅಹಿರ್ ಅವರು ಹಿಂದುಳಿದ ವರ್ಗಗಳನ್ನು ದಿಕ್ಕು ತಪ್ಪಿಸುವ ಹೇಯ ಕೆಲಸ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಸಿ.ಎಸ್. ದ್ವಾರಕಾನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಚುನಾವಣಾ ಭಾಷಣ ಮಾಡುತ್ತಾ ‘ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಒಬಿಸಿಗಳ ಪಟ್ಟಿಯಲ್ಲೇ ಮುಸ್ಲಿಮರ ಜಾತಿಗಳಿಗೂ ಮೀಸಲಾತಿ ಕಲ್ಪಿಸುವ ಮೂಲಕ ಹಿಂದುಳಿದವರ ಮೀಸಲಾತಿಯನ್ನು ಕಡಿತಗೊಳಿಸಿತ್ತು. ಅದನ್ನು ದೇಶದಾದ್ಯಂತ ವಿಸ್ತರಿಸಲೂ ಯೋಚಿಸಿತ್ತು’ ಎಂದು ಹೇಳಿದ್ದಾರೆ. ಇದಕ್ಕೆ ಪೂರಕವಾಗಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅದ್ಯಕ್ಷರಾದ  ಹಂಸರಾಜ್ ಗಂಗಾರಾಮ್ ಅಹಿರ್ ಕೂಡ ಒಂದು ಪತ್ರಿಕಾ ಹೇಳಿಕೆ ನೀಡಿ ಮೋದಿ ಹೇಳಿಕೆಯನ್ನೇ ಪುನರುಚ್ಚರಿಸಿರುವುದು ಹಿಂದುಳಿದ ವರ್ಗಗಳನ್ನು ದಿಕ್ಕು ತಪ್ಪಿಸುವ ಕೆಲಸ” ಎಂದು ದ್ವಾರಕಾನಾಥ್ ತಿಳಿಸಿದ್ದಾರೆ.

“ವಿಪರ್ಯಾಸವೆಂದರೆ ಪ್ರಧಾನಿ ಮತ್ತು ಅಹಿರ್ ಇಬ್ಬರೂ ಕರ್ನಾಟಕದ ಹಿಂದುಳಿದ ವರ್ಗಗಳ ಮೀಸಲಾತಿ ಕುರಿತು ಕನಿಷ್ಠ ಅರಿವಿಲ್ಲದೆ ಅತ್ಯಂತ ಅಜ್ಞಾನದಿಂದ ಮಾತಾಡಿ ಹಿಂದುಳಿದವರನ್ನು ಮುಸ್ಲಿಮರ ಮೇಲೆ ಎತ್ತಿಕಟ್ಟುವ ಆತುರದಲ್ಲಿ ತಮ್ಮ ಸ್ಮೃತಿಗಳನ್ನೇ ಕಳೆದುಕೊಂಡು ಬೇಕಾಬಿಟ್ಟಿ ಸುಳ್ಳು ಹೇಳಿದ್ದಾರೆ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಮುಖ್ಯ ಕಾರ್ಯದರ್ಶಿಗೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಸಮನ್ಸ್

“ಸ್ವಾತಂತ್ರ್ಯ ಪೂರ್ವದ ನಾಲ್ವಡಿ ಕೃಷ್ಣರಾಜ ಒಡೆಯರ್ ನೇಮಿಸಿದ ‘ಮಿಲ್ಲರ್ ಆಯೋಗ’ದಿಂದ ಹಿಡಿದು ಸ್ವಾತಂತ್ರಾ ನಂತರದ ಚಿನ್ನಪ್ಪರೆಡ್ಡಿ ಆಯೋಗ, ವೆಂಕಟಸ್ವಾಮಿ ಆಯೋಗದ ಆದಿಯಾಗಿ ಇಂದಿನ ಎಲ್ಲ ಆಯೋಗಗಳು ಮುಸ್ಲಿಮರನ್ನು “ಹಿಂದುಳಿದ ವರ್ಗಗಳು” ಎಂದೇ ಕರ್ನಾಟಕದಲ್ಲಿ ಗುರುತಿಸಿರುವುದು. ಮುಸ್ಲಿಮರನ್ನು ಎಂದು ಧಾರ್ಮಿಕ ಅಲ್ಪಸಂಖ್ಯಾತರು ಅಥವಾ ‘ರಿಲಿಜಿಯಸ್ ಮೈನಾರಿಟಿ’ ಎಂದು ಗುರುತಿಸಿಲ್ಲ, ಅಂತೆಯೇ ಕ್ರೈಸ್ತರು, ಜೈನರು, ಬೌದ್ದರು, ಸಿಖ್ಖರೂ ಕೂಡ ಹಿಂದುಳಿದ ವರ್ಗಗಳ ಪಟ್ಟಿಯಲ್ಲೇ ಇದ್ದಾರೆ ಎನ್ನುವುದು ಗಮನಾರ್ಹ” ಎಂದು ದ್ವಾರಕಾನಾಥ್‌ ತಿಳಿಸಿದರು.

“ದೇವರಾಜ ಅರಸರು ಮುಸ್ಲಿಂ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿದರು. ನಂತರ ವೀರಪ್ಪ ಮೊಯ್ಲಿಯವರು ಮುಸ್ಲಿಂ ಸಮುದಾಯಕ್ಕೆ ಶೇ. 4 ರಷ್ಟು ಮೀಸಲಾತಿ ನೀಡಿದರು. ಆದರೆ ದೇವೇಗೌಡರು ತಾವು ಮಾಡಿದ್ದೆಂದು ಹೇಳುತ್ತಿರುವುದೂ ಅಪ್ಪಟ ಸುಳ್ಳು. ಸಂವಿಧಾನದ ಅನುಚ್ಛೇದ 15(4) ಮತ್ತು 16(4) ರ ಪ್ರಕಾರ ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುತ್ತಾರೆ. ಇಲ್ಲಿ ಜಾತಿ,ಮತ,ಧರ್ಮ ಎಂಬುದಕ್ಕಿಂತಲೂ ಇದೊಂದು ‘ವರ್ಗ’ ಎಂದು ಗುರುತಿಸಲ್ಪಡುತ್ತಾರೆ. ಆದ್ದರಿಂದಲೇ “ಹಿಂದುಳಿದ ವರ್ಗಗಳ ಆಯೋಗ” ಎನ್ನುತಾರೆಯೇ ಹೊರತು “ಹಿಂದುಳಿದ ಜಾತಿಗಳ” ಅಥವಾ “ಹಿಂದುಳಿದ ಮತಗಳ” ಆಯೋಗ ಅನ್ನುವುದಿಲ್ಲ” ಎಂದು ದ್ವಾರಕಾನಾಥ್‌ ವಿವರಿಸಿದರು.

“ಪ್ರಧಾನಮಂತ್ರಿಗಳು ಲೋಕಾಭಿರಾಮವಾಗಿ ಇಂತಹ ಅಪದ್ದಗಳನ್ನು ಮಾತಾಡುವುದನ್ನು ರೂಢಿಸಿಕೊಂಡಿದ್ದಾರೆ. ಇಂತಹ ವಿಷಯಗಳಲ್ಲಿ ಇವರನ್ನು ಯಾರೂ ಗಂಭೀರವಾಗಿ ಪರಿಗಣಿಸದೇ ಇರುವುದರಿಂದ ಅಡ್ಡಿಯಿಲ್ಲ. ಆದರೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಈ ಬಗ್ಗೆ ಕನಿಷ್ಠ ಸಣ್ಣ ಸಿದ್ದತೆಯನ್ನೂ ಮಾಡಿಕೊಳ್ಳದೆ ಪತ್ರಿಕಾ ಪ್ರಕಟಣೆ ನೀಡಿರುವುದು ಅಕ್ಷಮ್ಯ. ಅಂದಹಾಗೆ ರಾಷ್ಟ್ರೀಯ ಆಯೋಗಕ್ಕೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೂ ಸಂಬಂಧವೇ ಇಲ್ಲ. ಅವರು ಚಕ್ರವರ್ತಿಗಳೂ ಅಲ್ಲ, ನಾವು ಅವರ ಸಾಮಂತರೂ ಅಲ್ಲ. ನಮಗೆ ನಮ್ಮದೇ ಆದ ಸ್ವಾತಂತ್ರ ಮತ್ತು ಸ್ವಾಯತ್ತತೆ ಇದೆ. ನಾವು ಯಾರ ಅಧೀನದಲ್ಲೂ ಇಲ್ಲ ಎನ್ನುವುದನ್ನು ಇಲ್ಲಿ ಸ್ಪಷ್ಟಪಡಿಸುತ್ತೇವೆ” ಎಂದು ದ್ವಾರಕಾನಾಥ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...