ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ. ಹೈಕೋರ್ಟ್ನ ತಡೆಯಾಜ್ಞೆ ತೆರವಾದ ಹಿನ್ನೆಲೆಯಲ್ಲಿ ಎಸ್ಪಿಪಿ ಅಶೋಕ್ ನಾಯ್ಕ್ ಅವರು ಅರ್ಜಿ ಸಲ್ಲಿಸಿದ್ದರು. ಅದರಂತೆ ಬಿಎಸ್ ಯಡಿಯೂರಪ್ಪನವರ ಜೊತೆಗೆ ಇತರೆ ಮೂವರು ಆರೋಪಿಗಳಾದ ವೈ.ಎಂ. ಅರುಣ, ರುದ್ರೇಶ್ ಮರುಳಸಿದ್ದಯ್ಯ, ಜಿ. ಮರಿಸ್ವಾಮಿ ಅವರಿಗೂ ಸಮನ್ಸ್ ಜಾರಿ ಮಾಡಲಾಗಿದೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ಕಳೆದ ವಾರ ಹಿನ್ನಡೆಯಾಗಿತ್ತು. ಕೆಳಹಂತದ ನ್ಯಾಯಾಲಯ ತಮಗೆ ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಯಡಿಯೂರಪ್ಪನವರ ಅರ್ಜಿಯನ್ನು ವಜಾಗೊಳಿಸಿ ಟ್ರಯಲ್‌ಗೆ ಅನುಮತಿ ನೀಡಿತ್ತು. ಆ ಬೆನ್ನಲ್ಲೇ ಇಂದು ಸಮನ್ಸ್ ಜಾರಿಗೊಳಿಸಲಾಗಿದೆ.
POCSO | ಬಿಎಸ್‌ವೈಗೆ ಸಂಕಷ್ಟ; ಡಿ. 2ಕ್ಕೆ ಕೋರ್ಟ್ಗೆ ಖುದ್ದು ಹಾಜರಾಗಲು ಸಮನ್ಸ್ ಜಾರಿ
Date:
ಪೋಸ್ಟ್ ಹಂಚಿಕೊಳ್ಳಿ:




