ಪೋಕ್ಸೋ ಪ್ರಕರಣವಾಗಿ ವಿಚಾರವಾಗಿ ಶನಿವಾರ (ಮಾ.15) ಕೋರ್ಟ್‌ಗೆ ಹಾಜರಾಗಬೇಕಿದ್ದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಪೋಕ್ಸೋ ಕೇಸ್‌ನಲ್ಲಿ ಮಾರ್ಚ್ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಯಡಿಯೂಪ್ಪರಿಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಈ ಸಮ್ಸನ್‌ನ ವಿರುದ್ದ ಎರಡು ದಿನಗಳ ಹಿಂದೆ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. ಶುಕ್ರವಾರ ಹೈಕೋರ್ಟ್ ಅರ್ಜಿ ವಿಚಾರಣೆ ನಡೆಸಿ ಕೆಳ ಹಂತದ ನ್ಯಾಯಾಲಯ ನೀಡಿದ್ದ ಸಮನ್ಸ್‌ಗೆ ತಡೆ ನೀಡಿದೆ.
ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿದೆ. ಬಿಎಸ್‌ವೈ ಮತ್ತು ಇತರ ಆರೋಪಿಗಳ ಪರ ಹಿರಿಯ ವಕೀಲ ಸಿ ವಿ ನಾಗೇಶ್ ವಾದ ಮಂಡಿಸಿದ್ದರು. ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಮತ್ತು ವಿಶೇಷ ಸರ್ಕಾರಿ ಅಭಿಯೋಜಕರಾದ ಅಶೋಕ್ ನಾಯ್ಕ್ ಹಾಜರಾಗಿದ್ದರು. ಹೈಕೋರ್ಟ್ ಸಮನ್ಸ್‌ಗೆ ತಡೆ ನೀಡಿದ್ದರಿಂದ ಯಡಿಯೂರಪ್ಪ ಕೆಳ ಹಂತದ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದು ತಪ್ಪಿದೆ.
ಪ್ರಕರಣದ ಹಿನ್ನೆಲೆ
2024ರ ಫೆಬ್ರವರಿ 2ರಂದು ಸಹಾಯ ಯಾಚಿಸಿ ಮನೆಗೆ ತೆರಳಿದ್ದ ವೇಳೆ 17 ವರ್ಷದ ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ತಾಯಿ ಸದಾಶಿವನಗರ ಠಾಣೆಗೆ ಮಾರ್ಚ್ 14 ರಂದು ದೂರು ನೀಡಿದ್ದರು. ಈ ದೂರಿನನ್ವಯ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು.
ಯಡಿಯೂರಪ್ಪ ಆಪ್ತರಾದ ರುದ್ರೇಶ್, ಮರಿಸ್ವಾಮಿ, ವೈ.ಎಂ.ಅರುಣ್ ಪ್ರಕರಣದ ಸಾಕ್ಷ್ಯ ನಾಶ ಹಾಗೂ ಬೆದರಿಕೆ ಒಡ್ಡಿದ್ದಾರೆ ಎಂದು ದೂರುದಾರೆ ಆರೋಪಿಸಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ, ಇತರ ಮೂವರು ಆರೋಪಿಗಳ ವಿರುದ್ಧ ಪೋಕ್ಸೊ ಹಾಗೂ ಸಾಕ್ಷ್ಯ ನಾಶ ಸಂಬಂಧ 2024ರ ಜುಲೈನಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಎರಡನೇ ಸುತ್ತಿನ ಕಾನೂನು ಹೋರಾಟಕ್ಕೆ ಬಿಎಸ್‌ವೈ ಬೆಂಗಳೂರು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಯಡಿಯೂರಪ್ಪ ಹೈಕೋರ್ಟ್‌ನಲ್ಲಿ ಎರಡನೇ ಸುತ್ತಿನ ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಪ್ರಕರಣ ಸಂಬಂಧ ತಮ್ಮ ವಿರುದ್ಧದ ದೂರು, ಎಫ್‌ಐಆರ್, ಸಿಐಡಿ ಪೊಲೀಸರು ದಾಖಲಿಸಿರುವ ಆರೋಪ ಪಟ್ಟಿ ಮತ್ತು 2025ರ ಫೆ.28ರಂದು ಪೋಕ್ಸೊ ವಿಶೇಷ ನ್ಯಾಯಾಲಯ ಸಂಜ್ಞೆ ಪರಿಗಣಿಸಿ (ಕಾಗ್ನಿಜೆನ್ಸ್) ಜಾರಿಗೊಳಿಸಿರುವ ಸಮನ್ಸ್ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.
ಅರ್ಜಿಯಲ್ಲಿ ಪ್ರಕರಣದ ತನಿಖೆ ನಡೆಸಿರುವ ಸಿಐಡಿಯ ಎಸ್‌ಐಟಿಯನ್ನು ಪ್ರತಿವಾದಿ ಮಾಡಿದ್ದಾರೆ. ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ. ಪ್ರಕರಣ ಸಂಬಂಧ ವಿಶೇಷ ನ್ಯಾಯಾಲಯವು 2024ರ ಜು.4ರಂದು ಕಾಗ್ನಿಜೆನ್ಸ್ ತೆಗೆದುಕೊಂಡು ಜಾರಿಗೊಳಿಸಿದ ಸಮನ್ಸ್ ರದ್ದತಿ ಕೋರಿ ಈ ಹಿಂದೆ ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು 2025ರ ಫೆ.7ರಂದು ವಜಾಗೊಳಿಸಿದ್ದ ಹೈಕೋರ್ಟ್, ವಿಶೇಷ ನ್ಯಾಯಾಲಯವು ತೆಗೆದುಕೊಂಡಿದ್ದ ಕಾಗ್ನಿಜೆನ್ಸ್ ರದ್ದುಪಡಿಸಿತ್ತು.
ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್‌ನ ಆದೇಶಗಳನ್ನು ಗಮನದಲ್ಲಿರಿಸಿಕೊಂಡು ಹೊಸದಾಗಿ ಕಾಗ್ನಿಜೆನ್ಸ್ ತೆಗೆದುಕೊಂಡು ಕಾನೂನು ಪ್ರಕಾರ ಆದೇಶ ಹೊರಡಿಸಬೇಕೆಂದು ಸೂಚಿಸಿತ್ತು. ನಂತರ ಸಿಐಡಿ ಸಲ್ಲಿಸಿರುವ ಆರೋಪಪಟ್ಟಿ ಆಧರಿಸಿ ವಿಶೇಷ ನ್ಯಾಯಾಲಯವು ಕಾಗ್ನಿಜೆನ್ಸ್ ತೆಗೆದುಕೊಂಡು ಯಡಿಯೂರಪ್ಪಗೆ ಸಮನ್ಸ್ ನೀಡಿತ್ತು ಹಾಗೂ ಮಾ.15ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಅದನ್ನು ಪ್ರಶ್ನಿಸಿ ಇದೀಗ ಬಿಎಸ್‌ವೈ ಹೈಕೋರ್ಟ್ ಮೊರೆ ಹೋಗಿದ್ದರು.
ಬಿಎಸ್‌ವೈ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದ ಬಾಲಕಿಯ ತಾಯಿ ಮಾರ್ಚ್ 27ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಉಸಿರಾಟದ ತೊಂದರೆಗೆ ಒಳಗಾಗಿ ಹುಳಿಮಾವು ಬಳಿಯ ನ್ಯಾನೋ ಖಾಸಗಿ ಆಸ್ಪತ್ರೆಗೆ ಮಾರ್ಚ್ 26ರ ರಾತ್ರಿ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಆಕೆಗೆ ಕೂಡಲೇ ವೈದ್ಯರು ತಪಾಸಣೆ ನಡೆಸಿದ್ದರು. ತಪಾಸಣೆ ವೇಳೆ ಸ್ಯಾಚುರೇಷನ್ ಲೇವೆಲ್ ಲೋ ಆಗಿತ್ತು. ಕೂಡಲೇ ವೈದ್ಯರಿಂದ ಚಿಕಿತ್ಸೆ ಆರಂಭಿಸಲಾಗಿತ್ತು. ಅಲ್ಲದೆ ವೆಂಟಿಲೇಟರ್‌ಗೆ ಶಿಫ್‌್ಟ ಮಾಡಲು ಸಿದ್ಧತೆ ನಡೆಸಲಾಗಿತ್ತು. ಅಷ್ಟೊತ್ತಿಗೆ ಮೋಷನ್ ಹೋಗಬೇಕು ಎಂದು ದೂರುದಾರೆ ಮಮತ ಹೇಳಿದ್ದರು. ಆದರೆ ಕೆಲವೇ ಹೊತ್ತಿನಲ್ಲಿ ನಿತ್ರಾಣಗೊಂಡು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದ್ದನ್ನು ಇಲ್ಲಿ ಗಮನಿಸಬಹುದು.





