ಪೋಕ್ಸೊ ಪ್ರಕರಣ | ಹೈಕೋರ್ಟ್‌ನಿಂದ ಯಡಿಯೂರಪ್ಪ ವಿಚಾರಣೆ, ಸುಪ್ರೀಂ ಕೋರ್ಟ್‌ ತಡೆ

Date:

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ವಿಚಾರಣಗೆ ಹಾಜರಾಗುವಂತೆ ಸೂಚಿಸಿದ್ದ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ಖುದ್ದು ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್​​ ಆದೇಶ ನೀಡಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್‌ ಬಿಗ್ ರಿಲೀಫ್ ನೀಡಿದಂತಾಗಿದೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿ ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು. ಪ್ರಕರಣದ ಆರೋಪಿಗಳಾದ ಬಿ.ಎಸ್.ಯಡಿಯೂರಪ್ಪ, ವೈ.ಎಂ.ಅರುಣ, ಎಂ.ರುದ್ರೇಶ ಹಾಗೂ ಜಿ.ಮರಿಸ್ವಾಮಿ ಅವರಿಗೆ ಸಮನ್ಸ್‌ ಜಾರಿಗೊಳಿಸಿದ್ದ ವಿಶೇಷ ಸೆಷನ್ಸ್ ನ್ಯಾಯಾಲಯವು ಡಿಸೆಂಬರ್ 2ರಂದು ಕೋರ್ಟ್‌ಗೆ ಖುದ್ದು ಹಾಜರಾಗುವಂತೆ ಆದೇಶಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಸ್ ಸಂಬಂಧ ಮಂಗಳವಾರ ವಿಚಾರಣಾಧೀನ ನ್ಯಾಯಾಲಯಕ್ಕೆ ಯಡಿಯೂರಪ್ಪ ಹಾಜರಾಗಬೇಕಿತ್ತು. ಯಡಿಯೂರಪ್ಪ ಅವರ ಮೇಲ್ಮನವಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್​ ದ್ವಿ ಸದಸ್ಯ ಪೀಠ​, ಬಿಎಸ್​ವೈ ವಿರುದ್ಧದ ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿದೆ.

ಬೆಂಗಳೂರಿನ ಕೋರ್ಟ್​ನಲ್ಲೂ ಬಿಎಸ್​ವೈ ವಿರುದ್ಧ ಕೇಸ್ ವಿಚಾರಣೆ ನಡೆದಿತ್ತು. ಈ ವೇಳೆ ಯಡಿಯೂರಪ್ಪ ಪರ ವಕೀಲರು ಸುಪ್ರೀಂ ಕೋರ್ಟ್ ನಲ್ಲಿ ತಡೆ ಸಿಕ್ಕಿರುವುದಾಗಿ ಕೋರ್ಟ್ ಗಮನಕ್ಕೆ ಬಂದಿದ್ದಾರೆ. ತಡೆ ಸಿಕ್ಕಿದೆ ಎನ್ನುವುದಕ್ಕೆ ದಾಖಲೆ ನೀಡುವಂತೆ ಜಡ್ಜ್ ಕೇಳಿದ್ದು, ಈಗಷ್ಟೇ ಮಾಹಿತಿ ಸಿಕ್ಕಿದೆ, ದಾಖಲೆ ನೀಡುವುದಾಗಿ ಯಡಿಯೂರಪ್ಪ ಪರ‌ ವಕೀಲರು ತಿಳಿಸಿದ್ದಾರೆ.

2024ರ ಫೆಬ್ರವರಿಯಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಡೆದ ಸಭೆಯ ಸಂದರ್ಭದಲ್ಲಿ ಯಡಿಯೂರಪ್ಪ ಅವರು ತಮ್ಮ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು.

ಸದಾಶಿವನಗರ ಪೊಲೀಸರು ಮಾರ್ಚ್ 14, 2024 ರಂದು ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಹೆಚ್ಚಿನ ತನಿಖೆಗಾಗಿ ಕೇಸ್​ ಅನ್ನು ಸಿಐಡಿಗೆ ವರ್ಗಾಯಿಸಲಾಗಿತು. ಸಂಸ್ಥೆಯು ಎಫ್‌ಐಆರ್ ಮರು ದಾಖಲಿಸಿ, ಮಾಜಿ ಸಿಎಂ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...