ಕವಿ, ಸಂಶೋಧಕ ಲಕ್ಕೂರು ಸಿ ಆನಂದ ಇನ್ನಿಲ್ಲ

Date:

ದಲಿತ-ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕಾರ ಲಕ್ಕೂರು ಸಿ ಆನಂದ ಅವರು ಮೇ 20ರಂದು ನಿಧನ ಹೊಂದಿದ್ದಾರೆ.

44 ವರ್ಷ ಪ್ರಾಯದ ಲಕ್ಕೂರು ಸಿ. ಆನಂದ ಅವರು ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು. ದಲಿತ- ಬಂಡಾಯ ಕಾವ್ಯ ಮಾರ್ಗದ ಮೂರನೇ ತಲೆಮಾರಿನವರು.

ಕವಿ, ವಿಮರ್ಶಕ, ಅನುವಾದಕರಾಗಿಯೂ ಗುರುತಿಸಿಕೊಂಡಿರುವ ಆನಂದ ಅವರ ಮಾತೃಭಾಷೆ ತೆಲುಗು. ಪ್ರಸ್ತುತ ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ನಿಧನ

ಲಕ್ಕೂರು ಆನಂದ ಅವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಹೊರತಂದಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಆನಂದ ಅವರು ಆಳವಾದ ಅಧ್ಯಯನ ನಡೆಸಿದ್ದಾರೆ.

ಇತ್ತೀಚೆಗೆ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದವಾದ ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’ ಕೃತಿ ಇದೀಗ ಅಭಿನವ ಪ್ರಕಾಶನದಿಂದ ಕನ್ನಡದಲ್ಲಿ ಪ್ರಕಟವಾಗಿದೆ. ಲಕ್ಕೂರು ಆನಂದ ಅವರೇ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಿದ್ದಾರೆ.

ಇದನ್ನು ಓದಿದ್ದೀರಾ?  ಬಿಹಾರದ ಮಾಜಿ ಡಿಸಿಎಂ, ಬಿಜೆಪಿಯ ಹಿರಿಯ ಮುಖಂಡ ಸುಶೀಲ್ ಕುಮಾರ್ ಮೋದಿ ನಿಧನ

ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ, ಆಂಧ್ರದ ಶ್ರೀ ಶ್ರೀ ಕಾವ್ಯ, ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ, ದು ನಿಂ ಬೆಳಗಲಿ ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ, ಡಾ ತಿಪ್ಪೇರುದ್ರ ಸ್ವಾಮಿ ಪ್ರಶಸ್ತಿ ಆನಂದರಿಗೆ ಸಂದಿದೆ. ತಮಗೆ ಬಂದ ಪ್ರಶಸ್ತಿಗಳನ್ನು ಅವರು, ‘ರಾಜ್ಯದ ಎಲ್ಲಾ ದಮನಿತ ಸಮುದಾಯಗಳಿಗೆ’ ಅರ್ಪಿಸಿದ್ದಾರೆ.

ಊರಿಂದ ಊರಿಗೆ, ಇಪ್ಪತ್ತರ ಕಲ್ಲಿನ ಮೇಲೆ, ಬಟವಾಡೆಯಾಗದ ರಸೀತಿ, ಇತಿ ನಿನ್ನ ವಿಧೇಯನು, ಉರಿವ ಏಕಾಂತ ದೀಪ ಇವರ ಕವನ ಸಂಕಲನಗಳು. ಸ್ಮೃತಿ ಕಿಣಾನ್ತಂ, ಕೊನೆ ಬ್ರಾಹ್ಮಣ, ಆಕಾಶ ದೇವರ, ನಗ್ನ ಮುನಿಯ ಸಮಗ್ರ ಕಥೆಗಳು, ಅರುದ್ರ ಇವರ ಅನುವಾದಿತ ಕೃತಿಗಳು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...