ರಾಮನಗರ: ದಲಿತ ಯುವಕನ ಕೈಕಡಿದ ರೌಡಿಗಳ ಕಾಲಿಗೆ ಗುಂಡೇಟು

Date:

ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಳಗಾಳಿನಲ್ಲಿ ವಾರದ ಹಿಂದೆ ದಲಿತ ಯುವಕನ ಕೈಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿಗಳಾದ ರೌಡಿ ಹರ್ಷ ಅಲಿಯಾಸ್ ಕೈಮ ಮತ್ತು ಕರುಣೇಶ್ ಅಲಿಯಾಸ್ ಕಣ್ಣನ ಕಾಲಿಗೆ ಪೊಲೀಸರು ಭಾನುವಾರ ಬೆಳಿಗ್ಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಗಾಯಗೊಂಡಿರುವ ಆರೋಪಿಗಳಿಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೃತ್ಯದ ಬಳಿಕ ತಲೆ ಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗಳಿಬ್ಬರು, ಕಗ್ಗಲಿಪುರ ಬಳಿಯ ವ್ಯಾಲಿ ಸ್ಕೂಲ್ ರಸ್ತೆ ಬಳಿ ಬಚ್ಚಿಟ್ಟುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ಇಬ್ಬರನ್ನು ಬಂಧಿಸಲು ಬೆಳಿಗ್ಗೆ 5 ಗಂಟೆ ಸುಮಾರಿಗೆ ಕನಕಪುರ ಟೌನ್ ಠಾಣೆ ಪಿಐ ಮಿಥುನ್ ಶಿಲ್ಪಿ, ಗ್ರಾಮಾಂತರ ಪಿಐ ಕೃಷ್ಣ ಲಮಾಣಿ, ಪಿಎಸ್ಐಗಳಾದ ಮನೋಹರ್, ರವಿಕುಮಾರ್, ಕಾನ್‌ಸ್ಟೆಟೇಬಲ್‌ಗಳಾದ ರಾಜಶೇಖರ್ ಹಾಗೂ ಶಿವಕುಮಾರ್ ಸ್ಥಳಕ್ಕೆ ತೆರಳಿದ್ದರು.

ಆರೋಪಿಗಳಿದ್ದ ಸ್ಥಳವನ್ನು ಪೊಲೀಸರು ಸುತ್ತುವರಿಯುತ್ತಿದ್ದಂತೆ, ಆರೋಪಿಗಳಿಬ್ಬರು ಸಿಬ್ಬಂದಿ ರಾಜಶೇಖರ್ ಮತ್ತು ಶಿವಕುಮಾರ್ ಮೇಲೆ ಹಲ್ಲೆ ನಡೆಸಿ ಪಾರಾಗಲು ಯತ್ನಿಸಿದರು. ಆಗ ಗಾಳಿಯಲ್ಲಿ ಗುಂಡು ಹಾರಿಸಿದ ಪಿಐ ಮಿಥುನ್ ಶಿಲ್ಪಿ ತಪ್ಪಿಸಿಕೊಳ್ಳದಂತೆ ಎಚ್ಚರಿಕೆ ನೀಡಿದರು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?

‘ಎಚ್ಚರಿಕೆ ಲೆಕ್ಕಿಸದೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಯತ್ನಿಸಿದಾಗ ಆತ್ಮರಕ್ಷಣೆಗಾಗಿ ಹರ್ಷ ಕಾಲಿಗೆ ಮಿಥುನ್ ಶಿಲ್ಪಿ ಮತ್ತು ಕರುಣೇಶ್ ಕಾಲಿಗೆ ಪಿಎಸ್ಐ ಮನೋಹರ್ ಗುಂಡು ಹಾರಿಸಿದರು. ಸ್ಥಳದಲ್ಲೇ ಕುಸಿದು ಬಿದ್ದ ಇಬ್ಬರನ್ನೂ ವಶಕ್ಕೆ ಪಡೆದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು’ ಎಂದು ಹೇಳಿದರು.

‘ಆರೋಪಿಗಳ ವಿರುದ್ದ ಕನಕಪುರ ಟೌನ್, ಗ್ರಾಮಾಂತರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕೊಲೆ ಯತ್ನ, ಪರಿಶಿಷ್ಟರ ಮೇಲೆ ದೌರ್ಜನ್ಯ ಸೇರಿದಂತೆ ಐದು ಪ್ರಕರಣಗಳಿವೆ. ಆಸ್ಪತ್ರೆಯಲ್ಲಿರುವ ಆರೋಪಿಗಳು ಚೇತರಿಸಿಕೊಂಡ ಬಳಿಕ ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುವುದು. ಕೃತ್ಯದಲ್ಲಿ ಒಟ್ಟು 7 ಮಂದಿ ಭಾಗಿಯಾಗಿದ್ದು, ಘಟನೆ ನಡೆದ ಮಾರನೇ ದಿನವೇ ಐವರನ್ನು ಬಂಧಿಸಲಾಗಿತ್ತು’ ಎಂದು ಮಾಹಿತಿ ನೀಡಿದರು.

ಆಸ್ಪತ್ರೆಗೆ ಕಾರ್ತಿಕ್ ರೆಡ್ಡಿ ಮತ್ತು ಬಂಧನ ಕಾರ್ಯಾಚರಣೆ ತಂಡ ಮೇಲ್ವಿಚಾರಣೆ ನಡೆಸುತ್ತಿದ್ದ ಚನ್ನಪಟ್ಟಣ ಡಿವೈಎಸ್ಪಿ ಕೆ ಸಿ ಗಿರಿ ಭೇಟಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...