ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪೋಸ್ಟ್; ಇಬ್ಬರ ಮೇಲೆ ಎಫ್‌ಐಆರ್‌

Date:

ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ಬೆನ್ನಲ್ಲೇ, ಸರ್ಕಾರದ ನಿಲುವನ್ನು ವಿರೋಧಿಸಿ ಮತ್ತು ಬಾನು ಅವರ ಧಾರ್ಮಿಕ ಹಿನ್ನೆಲೆಯನ್ನು ಟಾರ್ಗೆಟ್ ಮಾಡಿ ಪೋಸ್ಟ್ ಹಾಕಿದ್ದ ಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಕೋಮುವಾದಿ ಹೇಳಿಕೆಗಳನ್ನು ಹರಡಿದ ಆರೋಪದ ಮೇಲೆ ಉಡುಪಿ ಜಿಲ್ಲಾ ಪೊಲೀಸರು ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಆರೋಪಿಗಳನ್ನು ಜಗದೀಶ್ ಉಡುಪ ಮತ್ತು ಸುದೀಪ್ ಶೆಟ್ಟಿ ನಿಟ್ಟೆ ಎಂದು ಗುರುತಿಸಲಾಗಿದೆ.

ಕೊಲ್ಲೂರಿನ ನಿವಾಸಿ ಜಗದೀಶ್ ತಮ್ಮ ಪೋಸ್ಟ್‌ನಲ್ಲಿ, “ಇದು ತಪ್ಪು, ಇದು ಒಂದು ಧರ್ಮದ ತುಷ್ಟೀಕರಣ, ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ. ಸರ್ಕಾರ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಬರೆದಿದ್ದರು. ಕೊಲ್ಲೂರು ಪೊಲೀಸರು ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 353(2) (ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಕಳ ತಾಲೂಕಿನ ನಿಟ್ಟೆಯ ಸುದೀಪ್ ಶೆಟ್ಟಿ ಎಂಬವರು, “ದಸರಾ ಹಿಂದೂಗಳ ಸಾಂಸ್ಕೃತಿಕ ಉತ್ಸವ. ಹಿಂದೂ ಸಂಪ್ರದಾಯಗಳನ್ನು ಒಪ್ಪದ ವ್ಯಕ್ತಿಯಿಂದ ದಸರಾ ಉದ್ಘಾಟಿಸಿ ಹಿಂದೂ ಭಾವನೆಗಳಿಗೆ ಸರ್ಕಾರ ಪದೇ ಪದೇ ನೋವುಂಟು ಮಾಡುತ್ತಿದೆ” ಎಂದು ಪೋಸ್ಟ್ ಮಾಡಿದ್ದರು.

ಇದನ್ನೂ ಓದಿರಿ: ನಕಲಿ ಮಾಸ್ಕ್‌ ಮ್ಯಾನ್‌ ಬಳಸಿ ಸುಳ್ಳು ಸುದ್ದಿ ಹರಡಿದ ವಿಶ್ವವಾಣಿ; ಪ್ರಕರಣ ದಾಖಲಾಗುವುದೇ?

ಕಾರ್ಕಳ ಗ್ರಾಮೀಣ ಸಬ್ ಇನ್‌ಸ್ಪೆಕ್ಟರ್ ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ಮಾಡುವಾಗ ಈ ಪೋಸ್ಟ್‌ಗಳನ್ನು ಗಮನಿಸಿದ್ದಾರೆ. ಆರೋಪಿಯ ಮೇಲೆ ಬಿಎನ್‌ಎಸ್‌ನ ಸೆಕ್ಷನ್ 353(2)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಕೀಲೆ, ಬರಹಗಾರ್ತಿ ಮತ್ತು ಹೋರಾಟಗಾರ್ತಿ ಬಾನು ಮುಷ್ತಾಕ್ ಅವರ ಅನುವಾದಿತ ಕೃತಿ ‘ಹಾರ್ಟ್‌ ಲ್ಯಾಂಪ್‌’ಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರಕಿತ್ತು. ಈ ಹೆಗ್ಗಳಿಕೆಗೆ ಪಾತ್ರವಾದ ಕನ್ನಡದ ಮೊದಲ ಲೇಖಕಿ ಇವರಾಗಿದ್ದಾರೆ. ಕನ್ನಡದ ಕೃತಿಯೊಂದು ಜಾಗತಿಕ ಮನ್ನಣೆ ಪಡೆಯಲು ಕಾರಣರಾದ ಬಾನು ಮುಷ್ತಾಕ್ ಅವರನ್ನು ನಾಡಿನ ಸಾಂಸ್ಕೃತಿಕ ಉತ್ಸವದ ಉದ್ಘಾಟನೆಗೆ ಆಹ್ವಾನಿಸಿರುವುದನ್ನು ನಾಡಿನ ಪ್ರಜ್ಞಾವಂತ ಜನ ಸ್ವಾಗತಿಸಿದ್ದಾರೆ. ಅಲ್ಲಲ್ಲಿ ಕೋಮುವಾದಿ ಹೇಳಿಕೆಗಳು ಹೊರಬಿದ್ದಿವೆ. ಆದರೆ ಇದು ಸರ್ಕಾರ ಆಚರಿಸುವ ಹಬ್ಬ, ನಾಡಹಬ್ಬ, ಇದು ಕೇವಲ ಹಿಂದೂಗಳ ಹಬ್ಬವಲ್ಲ. ಈ ಹಿಂದೆ ನಿಸಾರ್ ಅಹಮ್ಮದ್ ಅವರು ದಸರಾವನ್ನು ಉದ್ಘಾಟಿದ್ದರು ಎಂದು ಕೋಮುವಾದಿ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾಗುತ್ತಿದೆ.

ತಮಗೆ ಬಂದ ಆಹ್ವಾನಕ್ಕೆ ಬಾನು ಮುಷ್ತಾಕ್ ಸಂತಸ ವ್ಯಕ್ತಪಡಿಸಿದ್ದಾರೆ. “ನಮ್ಮ ತಂದೆಯವರು ಕೃಷ್ಣ ರಾಜ ಸಾಗರ ಅಣೆಕಟ್ಟೆಯಲ್ಲಿ ಸೇವೆಯಲ್ಲಿದ್ದಾಗ ನಮ್ಮ ಕುಟುಂಬದೊಂದಿಗೆ ನಾಡಹಬ್ಬ ದಸರಾ ಉತ್ಸವ ನೋಡಿದ್ದೆ” ಎಂದು ಬಾಲ್ಯವನ್ನು ನೆನಪಿಸಿಕೊಂಡಿದ್ದಾರೆ.

“ನಾನು ಜಯಚಾಮರಾಜೇಂದ್ರ ಒಡೆಯರ್ ಅವರ ಮೆರವಣಿಗೆಯನ್ನು ನೋಡಿದ್ದೇನೆ. ಒಂದು ದಿನ ನಾನು ದಸರಾ ಉದ್ಘಾಟಿಸುತ್ತೇನೆ ಎಂದು ಎಂದಿಗೂ ಭಾವಿಸಿರಲಿಲ್ಲ. ದಸರಾ ಏಕತೆಯನ್ನು ಪ್ರತಿನಿಧಿಸುತ್ತದೆ. ಅಂಚಿನಲ್ಲಿರುವ ಗುಂಪುಗಳು ಮತ್ತು ಮಹಿಳೆಯರು ದಸರಾ ಉದ್ಘಾಟಿಸಲು ಮತ್ತು ಭಾಗವಹಿಸಲು ಅವಕಾಶ ನೀಡಲಾಗುತ್ತಿದೆ. ಆ ಮೂಲಕ ದಸರಾ ಅರ್ಥಪೂರ್ಣವಾಗಿದೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...