ಪ್ರಜ್ವಲ್‌ ರೇವಣ್ಣ ಜಾಮೀನಿಗೆ ಅರ್ಹನಲ್ಲ: ರಾಜ್ಯ ಸರ್ಕಾರದ ವಾದ

Date:

ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ಅಧೀನ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಯುವುದನ್ನು ತಡೆಯಲು 10ರಿಂದ12 ಬಾರಿ ಪ್ರಯತ್ನ ಮಾಡಿದ್ದರು. ಹೀಗಾಗಿ, ಅವರಿಗೆ ಜಾಮೀನು ನೀಡಬಾರದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿತು.

‘ನನಗೆ ವಿಧಿಸಿರುವ ಶಿಕ್ಷೆಯನ್ನು ಅಮಾನತಿನಲ್ಲಿ ಇರಿಸಿ ಜಾಮೀನು ಮಂಜೂರು ಮಾಡಬೇಕು’ ಎಂದು ಕೋರಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿಯನ್ನು ನ್ಯಾಯಮೂರ್ತಿ ಕೆ.ಎಸ್‌.ಮುದಗಲ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಶೇಷ ತನಿಖಾ ದಳದ (ಎಸ್‌ಐಟಿ) ಪರ ವಾದ ಮಂಡಿಸಿದ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್‌ ರವಿವರ್ಮ ಕುಮಾರ್‌, ‘ಪ್ರಜ್ವಲ್ ಕೃತ್ಯ ನಡೆಸಿ ದೇಶ ತೊರೆದಿದ್ದರು. ಸಂತ್ರಸ್ತೆಯರ ಜೊತೆಗಿನ ಲೈಂಗಿಕ ಕೃತ್ಯ ಸೆರೆ ಹಿಡಿದಿದ್ದ ಫೋನ್‌ ಅನ್ನು ತನಿಖಾಧಿಕಾರಿಗ ಳಿಗೆ ಒಪ್ಪಿಸಿಲ್ಲ. ತನ್ನ ಫೋನ್‌ ಜರ್ಮನಿಯಲ್ಲಿ ಕಳೆದು ಹೋಗಿದೆ ಎಂದು ಹೇಳಿದ್ದಾರೆ. ಇದು ಅವರ ನಡತೆಗೆ ಹಿಡಿದ ಕನ್ನಡಿಯಾಗಿದೆ’ ಎಂದು ಆಕ್ಷೇಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಧ್ಯಮಗಳ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಟ್ಟಿಗೆದ್ದದ್ದು ಏಕೆ?

‘ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಬಲಾಢ್ಯರಾಗಿರುವ ಪ್ರಜ್ವಲ್‌ನ ಅಜ್ಜ ಮಾಜಿ ಪ್ರಧಾನಿ. ಚಿಕ್ಕಪ್ಪ ಹಾಲಿ ಕೇಂದ್ರ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ. ತಂದೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದವರು ಮತ್ತು ಹಾಲಿ ಶಾಸಕ. ಕೃತ್ಯದ ಮಾಹಿತಿ ನೀಡಲು ಬಂದ ಸಂತ್ರಸ್ತೆಗೆ ಅಂದಿನ ಜಿಲ್ಲಾಧಿಕಾರಿ ಸೇರಿದಂತೆ ಯಾರೂಬ್ಬರೂ ಸೂಕ್ತ ನೆರವು ನೀಡಿಲ್ಲ. ಆರೋಪಿ ಅತ್ಯಂತ ಬಲಾಢ್ಯನಾಗಿರುವ ಕಾರಣದಿಂದಲೇ ಸಂತ್ರಸ್ತೆಯ ಧ್ವನಿಯನ್ನು ಹತ್ತಿಕ್ಕಲಾಗಿತ್ತು’ ಎಂದರು.

‘ಹಾಲಿ ಪ್ರಕರಣದಲ್ಲಿ ಪ್ರಜ್ವಲ್‌ಗೆ ಜಾಮೀನು ಮಂಜೂರು ಮಾಡಿದರೆ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದ ಪ್ರಕರಣ ಎದುರಿಸುತ್ತಿರುವ ತಂದೆ ಎಚ್‌.ಡಿ.ರೇವಣ್ಣ ಮತ್ತು ತಾಯಿ ಭವಾನಿ ಅವರ ಜಾಮೀನು ಕೋರಿಕೆ ಮೇಲೆಯೂ ಪ್ರಭಾವ ಬೀರಲಿದೆ. ಜಾಮೀನು ಮಂಜೂರು ಮಾಡಿ ಸಮಾಜದ ಮುಖ್ಯವಾಹಿನಿಗೆ ಬರಲು ಅವಕಾಶ ಮಾಡಿಕೊಟ್ಟರೆ ಸಮಾಜಕ್ಕೆ ಯಾವ ಸಂದೇಶ ರವಾನೆಯಾಗಲಿದೆ? ಹೀಗಾಗಿ, ಈ ಆರೋಪಿ ಜಾಮೀನಿಗೆ ಅರ್ಹ ಆಸಾಮಿಯಲ್ಲ’ ಎಂದರು. ಆಕ್ಷೇಪಣೆಯನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಮಂಗಳವಾರಕ್ಕೆ (ನ.25) ಮುಂದೂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...