ಪ್ರಜ್ವಲ್ ಲೈಂಗಿಕ ಹಗರಣ| ಎಚ್‌ಡಿ ರೇವಣ್ಣ ಜಾಮೀನು ರದ್ದುಪಡಿಸಲು ಕೋರಿ ಹೈಕೋರ್ಟ್‌ಗೆ ಎಸ್‌ಐಟಿ ಅರ್ಜಿ

Date:

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಅತ್ಯಾಚಾರ ಸಂತ್ರಸ್ತ ಮಹಿಳೆಯೊಬ್ಬರನ್ನು ಅಪಹರಣ ಮಾಡಿದ ಆರೋಪದಲ್ಲಿ ಜೆಡಿಎಸ್‌ ಶಾಸಕ ಎಚ್‌ಡಿ ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನನ್ನ ರದ್ದುಗೊಳಿಸಬೇಕು ಎಂದು ಕೋರಿ ಈ ಪ್ರಕರಣಗಳ ತನಿಖೆಯನ್ನು ನಡೆಸುತ್ತಿರುವ ಎಸ್‌ಐಟಿ ತಂಡವು ಹೈಕೋರ್ಟ್ ಕದ ತಟ್ಟಿದೆ.

ಅತ್ಯಾಚಾರ ಸಂತ್ರಸ್ತ ಮಹಿಳೆಯೊಬ್ಬರನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್‌ ಶಾಸಕ ಎಚ್‌ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ನೀಡಿದೆ. ಈ ಆದೇಶವನ್ನು ರದ್ದುಪಡಿಸುವಂತೆ ಕೋರಿ ಎಸ್‌ಐಟಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಇದನ್ನು ಓದಿದ್ದೀರಾ?  ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಹಂಚಿಕೆ ಆರೋಪ: ಕಾಂಗ್ರೆಸ್ ಕಾರ್ಯಕರ್ತ ನವೀನ್ ಗೌಡ ಸಹಿತ ಇಬ್ಬರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಆರ್‌ ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಅದಾದ ಬಳಿಕ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು.

ಇನ್ನು ಮಹಿಳೆ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಮನೆಗೆಲಸದಾಕೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿ ಹೊಳೆನರಸೀಪುರ ಮತ್ತು ಕೆಆರ್‌ ನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿದೆ. ಈ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌ಡಿ ರೇವಣ್ಣ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಇದನ್ನು ಓದಿದ್ದೀರಾ?  ಬೀದರ್‌ | ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಮೇ 30ರಂದು ‘ಹೋರಾಟದ ನಡಿಗೆ, ಹಾಸನದ ಕಡೆಗೆ’; ಬೃಹತ್ ಪ್ರತಿಭಟನೆ

ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳನ್ನು ಹಂಚಿಕೆ ಮಾಡಿರುವ ಆರೋಪದ ಮೇಲೆ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತ ನವೀನ್ ಗೌಡ ಮತ್ತು ಚೇತನ್ ಎಂಬವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಇಬ್ಬರೂ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಹೈಕೋರ್ಟ್‌ಗೆ ಬಂದಿದ್ದರು. ಈ ಸಂದರ್ಭದಲ್ಲೇ ಆರೋಪಿಗಳನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 6 ಮತ್ತು 7ನೇ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ ಎಂಬವರ ಬಂಧನ ಇತ್ತೀಚೆಗೆ ಆಗಿದೆ. ಇದೀಗ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...