ಅಂಬೇಡ್ಕರ್ ಶತಮಾನ ಸಂಭ್ರಮ ತಡೆಯಲು ನಕಲಿ ಗಾಂಧಿಗಳ ಷಡ್ಯಂತ್ರ: ಪ್ರಲ್ಹಾದ ಜೋಶಿ ಆರೋಪ

Date:

ರಾಜ್ಯದಲ್ಲಿ ಅಂಬೇಡ್ಕರ್ ನಿಪ್ಪಾಣಿಗೆ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸದಂತೆ ನಕಲಿ ಗಾಂಧಿಗಳು ಷಡ್ಯಂತ್ರ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಭಾನುವಾರ, ಬಿಜೆಪಿ ಆಯೋಜಿಸಿದ್ದ ‘ಭೀಮ ಹೆಜ್ಜೆ ಶತಮಾನ ಸಂಭ್ರಮ’ ಒಂದು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಹೈಕಮಾಂಡೇ ರಾಜ್ಯ ಸರ್ಕಾರಕ್ಕೆ ಸೂಚಿಸುವ ಮೂಲಕ ಅಂಬೇಡ್ಕರ್ ಗೌರವಾರ್ಥದ ಸಮಾರಂಭವನ್ನು ತಡೆದಿದೆ ಎಂದು ದೂರಿದರು.

“ರಾಜ್ಯ ಕಾಂಗ್ರೆಸ್‌ ಸರ್ಕಾರ ಅಂಬೇಡ್ಕರ್‌ ಅವರ ಭೀಮ ಹೆಜ್ಜೆ ಶತಮಾನ ಸಂಭ್ರಮ ಆಚರಿಸದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಪ್ರಿಯಾಂಕ ಖರ್ಗೆ ಅವರು ದಲಿತ ಸಮುದಾಯದ ಕ್ಷಮೆ ಕೇಳಬೇಕು. ಯಾವುದೋ ಒತ್ತಡದಿಂದ ಈ ಪ್ರಮಾದವಾಗಿದೆ. ಇದಕ್ಕಾಗಿ ದೇಶದ ಕ್ಷಮೆ ಕೇಳುತ್ತೇವೆ. ಮುಂದೆ ಯಾವುದೇ ರೀತಿ ಚ್ಯುತಿ ಬರದಂತೆ ಅಂಬೇಡ್ಕರ್‌ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮಗಳನ್ನು ನಡೆಸುವುದಾಗಿ” ಹೇಳಲಿ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನಕ್ಕೆ, ಅವರು ಮಾಡಿದಂತಹ ಅಪ್ರತಿಮ ಕಾರ್ಯಗಳಿಗೆ, ತ್ಯಾಗ ಬಲಿದಾನಕ್ಕೆ ಗೌರವ ಕೊಟ್ಟು ಖರ್ಗೆ ಅವರು ದೇಶದ ಕ್ಷಮೆಯಾಚಿಸಬೇಕು. ಇನ್ನು ಮುಂದೆಯಾದರೂ ಕಾಂಗ್ರೆಸ್‌ ಆಡಳಿತ ಇರುವ ಎಲ್ಲಾ ಕಡೆ ಅಂಬೇಡ್ಕರ್‌ ಅವರ ಕಾರ್ಯಕ್ರಮಗಳನ್ನು ಗೌರವದಿಂದ ಆಚರಿಸುವಂತೆ ಸರ್ಕಾರಗಳಿಗೆ ಸೂಚನೆ ನೀಡಬೇಕು” ಎಂದರು.

ಕಾಂಗ್ರೆಸ್‌ನಲ್ಲಿ ಖರ್ಗೆ ಮಾತು ನಡೆಯಲ್ಲ

“ನಕಲಿ ಗಾಂಧಿಗಳಿರುವ ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಸ್ವತಃ ಎಐಸಿಸಿ ಅಧ್ಯಕ್ಷರೇ ಆಗಿದ್ದರೂ ಅವರ ಮಾತು ಏನೂ ನಡೆಯುವುದಿಲ್ಲ. ರಾಜ್ಯ ಸರ್ಕಾರದಲ್ಲೂ ಅಷ್ಟೇ. ಮೊದಲು ರಾಜ್ಯದಲ್ಲಿ ಸರ್ಕಾರದಿಂದ ಭೀಮ ಹೆಜ್ಜೆ ಶತಮಾನ ಸಂಭ್ರಮ ಆಚರಿಸದ ಬಗ್ಗೆ ಸಮುದಾಯದ ಕ್ಷಮೆಯಾಚಿಸಲಿ. ಅಂಬೇಡ್ಕರ್‌ ಬೌದ್ಧ ಧರ್ಮ ಸ್ವೀಕಾರ ಮಾಡಿದಂತಹ ದೀಕ್ಷಾ ಭೂಮಿಯನ್ನು ಅಭಿವೃದ್ಧಿಪಡಿಸಿರುವುದೇ NDA ಸರ್ಕಾರ. ನಕಲಿ ಗಾಂಧಿಗಳಿಂದ ಕೂಡಿದ್ದ ಕಾಂಗ್ರೆಸ್‌ ಸರ್ಕಾರವಲ್ಲ. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಇತಿಹಾಸ ಸರಿ ಗೊತ್ತಿಲ್ಲ” ಎಂದು ಟೀಕಿಸಿದರು.

“ಭಾರತರತ್ನದಂತಹ ಪುರಸ್ಕಾರವನ್ನು ಸ್ವಯಂ ಆಗಿ ತಮಗೆ ತಾವೇ ಘೋಷಿಸಿಕೊಂಡ ಇಂದಿರಾಗಾಂಧಿ, ನೆಹರು ಅವರು ಕೊನೆಗೂ ಅಂಬೇಡ್ಕರ್‌ ಅವರಿಗೆ ನೀಡಲಿಲ್ಲ. ಕನಿಷ್ಠಪಕ್ಷ ದೆಹಲಿಯಲ್ಲಿ ಅಂಬೇಡ್ಕರ್‌ ಸ್ಮಾರಕಕ್ಕೆ ಜಾಗ ಸಹ ಕೊಡದಾದರು. ಕಾಂಗ್ರೆಸ್ಸಿಗರಿಗೆ ನಾಚಿಕೆಯಾಗುವುದಿಲ್ಲವೇ” ಎಂದು ಪ್ರಶ್ನಿಸಿದರು.

ಮಹಾತ್ಮಗಾಂಧಿ ಶತಮಾನ ಸಂಭ್ರಮ ಖುಷಿ

“ರಾಜ್ಯ ಸರ್ಕಾರ ಮಹಾತ್ಮ ಗಾಂಧಿ ಅವರು ಬೆಳಗಾವಿಗೆ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸಿತು. ಅದೊಂದು ರೀತಿ ಸರ್ಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಪಕ್ಷದ ಸಮಾವೇಶದಂತಿತ್ತು. ಏನೇ ಆದರೂ ಬೆಳಗಾವಿಗೆ ಮಹಾತ್ಮಗಾಂಧಿ ಅವರು ಬಂದಿದ್ದನ್ನು ಸ್ಮರಿಸಿತು ಎಂಬುದೇ ಒಂದು ಖುಷಿಯ ವಿಚಾರ. ಆದರೆ, ಅದೇ ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಅಂಬೇಡ್ಕರ್‌ ಬಂದು ಹೋದ ನೂರು ವರ್ಷದ ನೆನಪನ್ನು ನಕಲಿ ಗಾಂಧಿವಾದಿಗಳ ಮಾತು ಕಟ್ಟಿಕೊಂಡು ಕೈ ಬಿಟ್ಟಿತು ಎಂಬುದು ತೀವ್ರ ನೋವಿನ ಸಂಗತಿ” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...