ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಅಬ್ಧುಲ್ ರಹಮಾನ್‌ ಬಂಧನ

Date:

ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ಧುಲ್ ರಹಮಾನ್‌ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ. ಕತಾರ್‌ನಿಂದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ನಾಯಕರ ನಿರ್ದೇಶನದನ್ವಯ ಪ್ರಕರಣದ ಪ್ರಮುಖ ದಾಳಿಕೋರರಿಗೆ ಅಬ್ದುಲ್ ರೆಹಮಾನ್ ಸ್ವಯಂಪ್ರೇರಣೆಯಿಂದ ಆಶ್ರಯ ನೀಡಿದ್ದ ಎಂದು ಎನ್‌ಐಎ ತನಿಖೆಯಲ್ಲಿ ಉಲ್ಲೇಕವಾಗಿದೆ.

ಪ್ರಕರಣದ ಇತರೆ ಆರೋಪಿಗಳ ಬಂಧನವಾಗುತ್ತಿದ್ದಂತೆ ಆರೋಪಿ ಕತಾರ್‌ಗೆ ಪರಾರಿಯಾಗಿದ್ದ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಒಟ್ಟು 6 ಆರೋಪಿಗಳ ಮಾಹಿತಿಗಾಗಿ (ಅಬ್ದುಲ್ ರಹಮಾನ್‌ಗಾಗಿ 4 ಲಕ್ಷ) ಎನ್ಐಎ ಬಹುಮಾನ ಘೋಷಿಸಿತ್ತು. ಅಲ್ಲದೆ ಅಬ್ದುಲ್ ರೆಹಮಾನ್, ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳು ಸೇರಿದಂತೆ ಒಟ್ಟು 4 ಜನ ಆರೋಪಿಗಳ ವಿರುದ್ಧ ಈ ವರ್ಷ ಏಪ್ರಿಲ್‌ನಲ್ಲಿ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿತ್ತು. ಆ ಮೂಲಕ ಪ್ರಕರಣದಲ್ಲಿ ಒಟ್ಟು 28 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದಂತಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2022 ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು​ ಅವರನ್ನು ಪಿಎಫ್‌ಐ ಕಾರ್ಯಕರ್ತರು ಮತ್ತು ಸದಸ್ಯರು ಭೀಕರವಾಗಿ ಕೊಲೆ ಮಾಡಿದ್ದರು. ಈ ಸಂಬಂಧ ಆಗಸ್ಟ್ 4 ರಂದು ಎನ್ಐಎ ತನಿಖೆ ಆರಂಭಿಸಿತ್ತು. ಪ್ರಕರಣದ ಗಂಭೀರತೆ ಅರಿತ ಎನ್ಐಎ ಆಗಸ್ಟ್ 4ರಂದು ತನಿಖೆಯನ್ನ ಕೈಗೆತ್ತಿಕೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...