ರಾಜ್ಯಸಭೆ ಸದಸ್ಯರಾಗಿ ಇನ್ಫೋಸಿಸ್ ಫೌಂಡೇಷನ್‌ನ ಅಧ್ಯಕ್ಷರಾದ ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮ ನಿರ್ದೇಶನ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿರುವ ರಾಷ್ಟ್ರಪತಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಇವರು ಸಮಾಜ ಸೇವೆ, ಪರೋಪಕಾರ ಹಾಗೂ ಶಿಕ್ಷಣ ಒಳಗೊಂಡ ಹಲವಾರು ಕ್ಷೇತ್ರಗಳಲ್ಲಿ ಅಪಾರ ಹಾಗೂ ಸ್ಪೂರ್ತಿದಾಯಕ ಸೇವೆ ಸಲ್ಲಿಸಿದ್ದಾರೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿ ನಮ್ಮ ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಲಿದೆ. ನಮ್ಮ ದೇಶದ ಭವಿಷ್ಯ ರೂಪಿಸುವ ಮಹಿಳೆಯರಿಗೆ ಶಕ್ತಿ ಮತ್ತು ಸಾಮರ್ಥ್ಯವನ್ನು ರೂಪಿಸುತ್ತದೆ. ಅವರ ಸಂಸದೀಯ ಅವಧಿ ಫಲದಾಯಕವಾಗಿರಲಿ” ಎಂದು ಬರೆದುಕೊಂಡಿದ್ದಾರೆ.
ಸುಧಾ ಮೂರ್ತಿ ಅವರು ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕರಾಗಿರುವ ಎನ್ ಆರ್ ನಾರಾಯಣ ಮೂರ್ತಿ ಅವರ ಪತ್ನಿ. ಇವರ ಪುತ್ರಿ ಅಕ್ಷತಾ ಮೂರ್ತಿ ಇಂಗ್ಲೆಂಡ್ ಪ್ರಧಾನಿ ರಿಶಿ ಸುನಕ್ ಅವರ ಪತ್ನಿ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ





