ಸರ್ಕಾರಿ ಕಚೇರಿಗಳ ಆವರಣದಲ್ಲಿ ಧೂಮಪಾನ, ತಂಬಾಕು ಸೇವನೆ ನಿಷೇಧ; ರಾಜ್ಯ ಸರ್ಕಾರ ಆದೇಶ

Date:

ಸರ್ಕಾರಿ ಕಚೇರಿಗಳು ಮತ್ತು ಕಚೇರಿಗಳ ಆವರಣಗಳಲ್ಲಿ ಧೂಮಪಾನ ಮತ್ತು ತಂಬಾಕು ಹಾಗೂ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಂಬಾಕು ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿಯೂ ಧೂಮಪಾನ ಮತ್ತು ತಂಬಾಕು ಸೇವನೆ ಮಾಡಬಾರದು ಎಂದು ಸರ್ಕಾರ ಹೇಳಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು-2021ರ 31ನೇ ಅಂಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ವಸ್ತುಗಳು ಮತ್ತು ಪಾನೀಯ ಸೇವನೆಯನ್ನು ನಿಷೇಧಿಸಲಾಗಿದೆ. ಆದರೂ, ಸರ್ಕಾರಿ ಕಚೇರಿಗಳ ಆವರಣದಲ್ಲಿ ಧೂಮಪಾನ, ತಂಬಾಕು ಸೇವನೆ ನಡೆಯುತ್ತಿರುವುದ ಕಂಡುಬಂದಿದೆ. ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಸಾರ್ವಜನಿಕರನ್ನು ಧೂಮಪಾನದಿಂದ ರಕ್ಷಿಸುವ ಉದ್ದೇಶದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ.

ಸೂಚನೆಗಳನ್ನು ಉಲ್ಲಂಘಿಸಿ ತಂಬಾಕು ಉತ್ಪನ್ನಗಳನ್ನು (ಗುಟ್ಕಾ, ಪಾನ್‌ ಮಸಾಲ, ಹೊಗೆಸೊಪ್ಪು,ಇತ್ಯಾದಿ) ಸೇವಿಸುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...