ಪಿಎಸ್ಐ ಪರೀಕ್ಷೆ ಗೊಂದಲ ನಿವಾರಣೆ, ಸೆ.22ರ ಬದಲು ಸೆ.28ಕ್ಕೆ ಪರೀಕ್ಷೆ

Date:

ಪಿಎಸ್‌ಐ ಹಾಗೂ ಯುಪಿಎಸ್‌ಸಿ ಪರೀಕ್ಷೆಗಳು ಒಂದೇ ದಿನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಗೊಂದಲಕ್ಕೀಡಾಗಿದ್ದರು. ಅಭ್ಯರ್ಥಿಗಳ ಮನವಿ ಮೇರೆಗೆ ಪಿಎಸ್‌ಐ 402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ.28 ಶನಿವಾರ ನಡೆಸಲು ತೀರ್ಮಾನಿಸಲಾಗಿದೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, “ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು. ಬಿಜೆಪಿಯ ನಿಯೋಗವು ಮನವಿ ನೀಡಿತ್ತು.‌ ಈ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕ ಮುಂದೂಡಲಾಗಿದೆ” ಎಂದರು.

“ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಮುಖ್ಯ ಪರೀಕ್ಷೆಗೆ ಮತ್ತು ಪಿಎಸ್‌ಐ ಪರೀಕ್ಷೆ ಸೆ.22ರಂದು ನಿಗದಿಯಾಗಿರುವುದರಿಂದ ಎರಡು ಪರೀಕ್ಷೆ ಬರೆಯಲು ಆಗುವುದಿಲ್ಲ. ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ. ಹೀಗಾಗಿ ಅಭ್ಯರ್ಥಿಗಳ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಇಎ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಡಿಸೆಂಬರ್‌ವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ತಿಳಿಸಿದ್ದರು. ಪ್ರಾಥಮಿಕ ಶಿಕ್ಷಣ ಸಚಿವ ಮಂಧು ಬಂಗಾರಪ್ಪ ಅವರೊಂದಿಗೆ ಮಾತನಾಡಿ, ಶನಿವಾರದಂದು ಒಂದು ದಿನ ಪರೀಕ್ಷೆ ನಡೆಸಲು ಅವಕಾಶ ಮಾಡಿಕೊಡುವಂತೆ ಮನವಿ‌ ಮಾಡಿದ್ದೆ. ಪರೀಕ್ಷೆ ನಡೆಸಲು ಶಿಕ್ಷಕರು ಬೇಕಾಗುತ್ತದೆ. ಎಲ್ಲ ಆಕಾಂಕ್ಷಿಗಳ ಮನವಿಗೆ ಮನ್ನಣೆ ಕೊಟ್ಟು, ಅನುಕೂಲವಾಗುವ ನಿಟ್ಟಿನಲ್ಲಿ ಸೆ.28ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ” ಎಂದು ಹೇಳಿದರು.

“ಪೊಲೀಸ್ ಪೇದೆ ನೇಮಕಾತಿಗೆ ವಯೋಮಿತಿ ಹೆಚ್ಚಳದ ಕುರಿತು ಬೇರೆ ರಾಜ್ಯಗಳಿಂದ ಮಾಹಿತಿ ಕಲೆ ಹಾಕಿದ್ದೇವೆ. ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ, ವರದಿಯನ್ನು ಗಮನಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...