ಅಕ್ರಮವಾಗಿ ವಾಸಿಸುತ್ತಿದ್ದವರು ಮುಸ್ಲಿಮರೆಂಬ ಪ್ರಶ್ನೆ ಬರಲ್ಲ: ಕೇರಳ ಸಿಎಂಗೆ ಡಿ ಕೆ ಶಿವಕುಮಾರ್ ತಿರುಗೇಟು

Date:

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣದ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಸ್ತವ ಅರಿಯದೆ ಪ್ರತಿಕ್ರಿಯಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ.

ಪಿಣರಾಯಿ ವಿಜಯನ್ ಅವರ ‘ಬುಲ್ಡೋಜರ್ ರಾಜ್’ ಎಕ್ಸ್ ಸಂದೇಶಕ್ಕೆ ಬೆಂಗಳೂರಿನಲ್ಲಿ ತಿರುಗೇಟು ನೀಡಿದ ಡಿ ಕೆ ಶಿವಕುಮಾರ್, ಪಿಣರಾಯಿ ವಿಜಯನ್ ಹಿರಿಯ ನಾಯಕರು. ಆದರೆ ಸ್ಥಳೀಯ ವಿಚಾರಗಳನ್ನು, ಸತ್ಯ ಸಂಗತಿಯನ್ನು ತಿಳಿಯದೇ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಕೋಗಿಲು ಲೇಔಟ್ ಬಳಿ ಕೆಲವು ಜನರು ಬಿಬಿಎಂಪಿಗೆ ಸೇರಿದ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಂಡಿದ್ದರು. ಈ ಜಾಗವನ್ನು ಕಸದ ವಿಲೇವಾರಿಗೆ ಮೀಸಲಿಟ್ಟ 5 ಎಕರೆ ಪ್ರದೇಶವಾಗಿದ್ದು, ಅಕ್ರಮ ಒತ್ತುವರಿಯನ್ನು ಕಾನೂನುಬದ್ಧವಾಗಿ ತೆರವುಗೊಳಿಸಲಾಗಿದೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆ ಕಳೆದುಕೊಂಡವರಿಗೆ ವಸತಿ ನಿಗಮದಿಂದ ಹಂಚಿಕೆ ಮಾಡಲಾಗುತ್ತಿದೆ

ಯಾರನ್ನೂ ಮನೆ ಕಳೆದುಕೊಳ್ಳುವಂತೆ ಮಾಡಿಲ್ಲ. ಮನೆ ಕಳೆದುಕೊಂಡವರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಮನೆ ಹಂಚಿಕೆ ಮಾಡಲಾಗುತ್ತಿದೆ. ನಾವು ಬುಲ್ಡೋಜರ್ ರಾಜಕಾರಣವನ್ನು ಪಾಲಿಸುವುದಿಲ್ಲ. ಕಾನೂನುಬದ್ಧ ಪ್ರಕ್ರಿಯೆಯಲ್ಲೇ ತೆರವು ಕಾರ್ಯ ನಡೆದಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ವಿಷಯವನ್ನು ನಮ್ಮ ಪಕ್ಷದ ನಾಯಕರಿಗೂ ತಿಳಿಸಲಾಗಿದೆ. ಇಲ್ಲಿನ ಸ್ಥಿತಿಗತಿಗಳನ್ನು ಅರಿಯದೇ ಆರೋಪ ಮಾಡುವುದು ಸರಿಯಲ್ಲ ಎಂದು ಪಿಣರಾಯಿ ವಿಜಯನ್ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಸ್ಮಸ್‌ ಆಚರಣೆಗೆ ಅಡ್ಡಿ; ಭಾರತದ ಬಹುತ್ವದ ಮೇಲಿನ ಈ ದಾಳಿ ಅಕ್ಷಮ್ಯ

ಸರ್ಕಾರಿ ಜಾಗವನ್ನು ಒತ್ತುವರಿ ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಇಂತಹ ಪ್ರತಿಕ್ರಿಯೆ ಮೂಡಿ ಬಂದಿರುವುದು ರಾಜಕೀಯ ಗಿಮಿಕ್ ಆಗಿರಬಹುದು. ಸರ್ಕಾರದ ಜಾಗದಲ್ಲಿ ಅಕ್ರಮ ಸ್ಲಂ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂಬುದನ್ನು ಅವರು ಪುನರುಚ್ಚರಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್​ಗೆ ಡಿಕೆಶಿ ವರದಿ

ಮನೆ ತೆರವು ವಿಚಾರವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರಿಗೆ ಡಿ ಕೆ ಶಿವಕುಮಾರ್ ವಿವರವಾದ ವರದಿಯನ್ನು ಸಲ್ಲಿಸಿದ್ದಾರೆ. ವರದಿಯಲ್ಲಿ ಕೋಗಿಲು ಲೇಔಟ್‌ನಲ್ಲಿ ಬಿಬಿಎಂಪಿಗೆ ಸೇರಿದ 5 ಎಕರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಲಾಗಿತ್ತು ಎಂದು ಉಲ್ಲೇಖಿಸಲಾಗಿದೆ. ಈ ಅಕ್ರಮ ತೆರವು ಕಾನೂನುಬದ್ಧವಾಗಿ ನಡೆದಿದೆ. ಅಕ್ರಮವಾಗಿ ವಾಸಿಸುತ್ತಿದ್ದವರಲ್ಲಿ ಬಹುತೇಕರು ಅಲ್ಪಸಂಖ್ಯಾತ ಸಮುದಾಯದವರು ಎಂಬ ಮಾಹಿತಿಯನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳನ್ನು ಬೀದಿಗೆ ಹಾಕಿ ‘ಬುಲ್ಡೋಜರ್ ರಾಜ್’ ಕ್ರಮವನ್ನು ಕರ್ನಾಟಕ ಕಾಂಗ್ರೆಸ್​​ ಸರ್ಕಾರ ಅನುಸರಿಸುತ್ತಿದೆ ಎಂದು ಪಿಣರಾಯಿ ವಿಜಯನ್ ಎಕ್ಸ್​​​ನಲ್ಲಿ ಬರೆದುಕೊಂಡಿದ್ದರು. ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಈಗ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೂಡ ಮಾಡುತ್ತಿದೆ ಎಂದು ಅವರು ಉಲ್ಲೇಖಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...