ನ್ಯಾಯಮೂರ್ತಿಗಳಿಂದಲೇ ಭ್ರಷ್ಟಾಚಾರ ಆರೋಪ, ಸಿಬಿಐ ತನಿಖೆಗೆ ಆರ್‌.ಅಶೋಕ್ ಆಗ್ರಹ

Date:

ರಾಜ್ಯದ ನ್ಯಾಯಮೂರ್ತಿಗಳೇ 63 ಪರ್ಸೆಂಟ್‌ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕವಾಗಿ ಹೇಳಿದ್ದಾರೆ. ಆದ್ದರಿಂದ ಭ್ರಷ್ಟಾಚಾರದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, 63 ಪರ್ಸೆಂಟ್‌ ಕಮಿಷನ್‌, ಮೊದಲಾದ ಆರೋಪಗಳು ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕ್ಷಿ ಕೊಡಿ ಎಂದು ಕೇಳಿದ್ದರು. ಇಂತಹ ಸಮಯದಲ್ಲೇ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಕರ್ನಾಟಕದ ಭ್ರಷ್ಟಾಚಾರದ ಬಗ್ಗೆ ಮುಕ್ತವಾಗಿ ಹೇಳಿದ್ದಾರೆ. ಭ್ರಷ್ಟಾಚಾರಕ್ಕೆ ನ್ಯಾಯಮೂರ್ತಿಗಳೇ ಸಾಕ್ಷಿಯಾಗಿದ್ದಾರೆ. ಆದ್ದರಿಂದ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು” ಎಂದು ಆಗ್ರಹಿಸಿದರು.

“ಯಾವುದೇ ರಾಜ್ಯದ ಚುನಾವಣೆ ನಡೆದರೂ ಕರ್ನಾಟಕ ಎಟಿಎಂ ಆಗಿರುತ್ತದೆ. ಬಿಹಾರ ಚುನಾವಣೆಗೆ ಸುಮಾರು 300 ಕೋಟಿ ರೂ. ವರ್ಗಾವಣೆಯಾಗಿದೆ. ಪೇಸಿಎಂ ಎಂಬ ಭಿತ್ತಿಪತ್ರವನ್ನು ಕಾಂಗ್ರೆಸ್‌ ನಾಯಕರ ಮುಖದ ಮೇಲೆ ಅಂಟಿಸಬೇಕು” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನ್ಯಾಯಮೂರ್ತಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ. ಭೋವಿ ನಿಗಮದಲ್ಲಿ ಒಂದು ಎಕರೆ ಉಳುಮೆ ನೀಡಲು 25 ಲಕ್ಷ ರೂ. ಕಮಿಷನ್‌ ಇದೆ. ಬಾರ್‌ ಲೆಸೆನ್ಸ್‌ಗೆ 20 ಲಕ್ಷ ರೂ. ಕಮಿಷನ್‌ ಇದೆ. ಟ್ರಾನ್ಸ್‌ಫಾರ್ಮರ್‌ ಅಳವಡಿಕೆಯಲ್ಲಿ 90 ಕೋಟಿ ರೂ. ಹಗರಣ ನಡೆದಿದೆ. ಕಸದ ಯಂತ್ರ ಖರೀದಿಯಲ್ಲಿ ಎರಡೂವರೆ ಕೋಟಿ ರೂ. ಹಗರಣ ನಡೆಯುತ್ತಿದೆ” ಎಂದು ದೂರಿದರು.

ವಿರೋಧ ಪಕ್ಷಗಳಿಗೆ ಹೆದರಿ ಕಾಂಗ್ರೆಸ್‌ ಸಭೆ ನಡೆಸಿ ಶಾಸಕರನ್ನು ತಯಾರಿ ಮಾಡಿದೆ. ರೈತರಿಗೆ ಮಾಡಿದ ಅನ್ಯಾಯ, ಉತ್ತರ ಕರ್ನಾಟಕಕ್ಕೆ ಮಾಡಿದ ಅನ್ಯಾಯದ ಬಗ್ಗೆ ಸದನದಲ್ಲಿ ಮಾತನಾಡುತ್ತೇವೆ. ಪ್ರವಾಹ ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮೊದಲ ದಿನವೇ ಚರ್ಚೆಯಾಗಲೇಬೇಕು. ಮುಖ್ಯಮಂತ್ರಿಗಳೇ ಕಳ್ಳತನ ಮಾಡುತ್ತಿದ್ದಾರೆ, ಹಾಗಾಗಿ ಪೊಲೀಸರು ಕೂಡ ದರೋಡೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಪೊಲೀಸರು ಹಣ ಸಂಗ್ರಹ ಮಾಡಬೇಕಿರುವುದರಿಂದ ಅಪರಾಧಿ ಚಟುವಟಿಕೆಗಳಲ್ಲಿ ಅವರೇ ಕಾಣಿಸಿಕೊಳ್ಳುತ್ತಿದ್ದಾರೆ. ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ಚೋರಿ ಚೋರಿ ಎಂದು ಕೂಗುತ್ತಾರೆ. ಅವರು ಕರ್ನಾಟಕಕ್ಕೆ ಬಂದರೆ ಇಲ್ಲಿಯೇ ಚೋರಿ ಮಾಡುವುದು ಕಾಣುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...