ಸ್ವಾಮೀಜಿಯನ್ನು ಮುಟ್ಟಲು ಬಂದರೆ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ: ಆರ್ ಅಶೋಕ್‌

Date:

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್‌ ಎಚ್ಚರಿಕೆ ನೀಡಿದ್ದಾರೆ.

ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಸ್ವಾಮೀಜಿಯವರಿಗೆ ಧೈರ್ಯ ಹೇಳಿದ್ದೇವೆ ಹಾಗೂ ಒಕ್ಕಲಿಗ ಸಮಾಜದೊಂದಿಗೆ ನಾವಿದ್ದೇವೆ ಎಂದು ಹೇಳಿದ್ದೇವೆ. ವಕ್ಫ್ ಮಂಡಳಿ ಹಿಂದೂಗಳ, ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ನುಂಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಪಹಣಿ ಬದಲಿಸಲಾಗುತ್ತಿದೆ. ಹಿಂದೂಗಳಿಗಾಗುತ್ತಿರುವ ಅನ್ಯಾಯದ ವಿರುದ್ಧ ಅವರು ಮಾತನಾಡಿದ್ದು, ಬಳಿಕ ಅದರಲ್ಲಿ ತಪ್ಪಿದ್ದರೆ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ. ಇಷ್ಟಾದರೂ ಒಬ್ಬ ಮತಾಂಧ ದೂರು ನೀಡಿದ್ದಕ್ಕೆ ಅದರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರೆ ಸರ್ಕಾರಕ್ಕೆ ಎಷ್ಟು ಧೈರ್ಯ ಇದೆ ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚಂದ್ರಶೇಖರ ಸ್ವಾಮೀಜಿ ಬಾಯಿ ತಪ್ಪಲಿಲ್ಲ, ಮನಸಿನ ಮಾತೇ ಹೊರಬಿದ್ದಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸಾದುದ್ಧೀನ್ ಓವೈಸಿ ದೇಶಕ್ಕೆ ಬೆದರಿಕೆ ಹಾಕುತ್ತಾರೆ. ಆಂಧ್ರ ಪ್ರದೇಶದಲ್ಲಿ ಮೌಲ್ವಿ ಸರ್ಕಾರಕ್ಕೆ ಬೆದರಿಕೆ ಹಾಕುತ್ತಾನೆ. ಸುಪ್ರೀಂ ಕೋರ್ಟ್ ಆದೇಶಕ್ಕೆ ಬೆಲೆ ಕೊಡಲ್ಲ ಎಂದು ಕೆಲವರು ಹೇಳುತ್ತಾರೆ. ದೇವೇಗೌಡರನ್ನೇ ಖರೀದಿ ಮಾಡುತ್ತೇನೆಂದು ಸಚಿವ ಜಮೀರ್ ಹೇಳಿದ್ದರು. ಆದರೆ ಸರ್ಕಾರ ಅದರ ವಿರುದ್ಧ ಕ್ರಮ ವಹಿಸಿಲ್ಲ. ಒಕ್ಕಲಿಗರ ವಿರುದ್ಧ ಕಾಂಗ್ರೆಸ್ ದ್ವೇಷ ಸಾಧಿಸುವುದು ಹೇಯ. ಸರ್ಕಾರ ಸ್ವಾಮೀಜಿಯವರನ್ನು ಮುಟ್ಟುವ ಕೆಲಸ ಮಾಡಿದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಎಚ್ಚರಿಕೆ ನೀಡಿದರು.

ಪಾಕಿಸ್ತಾನಕ್ಕೆ ಜೈಕಾರ ಹಾಕಿದವರ ವಿರುದ್ಧ ಸರ್ಕಾರ ಕ್ರಮ ವಹಿಸಿಲ್ಲ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಮಯಕ್ಕೆ ತಕ್ಕಂತೆ ಬದಲಾಗುತ್ತಾರೆ. ಒಮ್ಮೆ ಒಕ್ಕಲಿಗರ ಪರ ಮಾತಾಡಿದರೆ, ಮತ್ತೆ ಭಯೋತ್ಪಾದಕರನ್ನು ಬ್ರದರ್ ಎನ್ನುತ್ತಾರೆ. ಆದರೆ ಬಿಜೆಪಿ ಎಂದಿಗೂ ಹಿಂದೂಗಳ ಪರ ನಿಲ್ಲಲಿದೆ ಎಂದರು.

ಸ್ವಾಮೀಜಿಯವರಿಗೆ ತಿಳಿ ಹೇಳುವ ಬದಲು ಪೊಲೀಸರು ನೋಟಿಸ್ ನೀಡಿದ್ದಾರೆ. ಈಗ ಒಕ್ಕಲಿಗ ಸಮುದಾಯ ಎಚ್ಚೆತ್ತುಕೊಳ್ಳಬೇಕಿದೆ. ಸಮುದಾಯದ ವಿರುದ್ಧ ಸರ್ಕಾರ ಈ ರೀತಿ ದ್ವೇಷ ಕಾರುತ್ತಿರುವುದನ್ನು ಸಮುದಾಯದ ಜನರು ಗಮನಿಸಬೇಕಿದೆ. ಸ್ವಾಮೀಜಿಗೆ ಕಿರುಕುಳ ನೀಡಿದರೆ ಬಿಜೆಪಿ ಬೀದಿಗಿಳಿದು ಹೋರಾಟ ಮಾಡಲಿದೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...