ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಾಗಿರುವ ಬಳಷ್ಟು ವಿಷಯಗಳು ಬಾಕಿಯಿದೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ತಾವು ಪ್ರಸಕ್ತ ಅಧಿವೇಶನವನ್ನು ಇನ್ನೂ ಒಂದು ವಾರ ಕಾಲ ವಿಸ್ತರಿಸಬೇಕು ಎಂದು ಸಭಾಧ್ಯಕ್ಷ ಯು ಟಿ ಖಾದರ್ ಅವರನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್ ಕೋರಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, “ಡಿ.8ರಿಂದ 19ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು, ಕಾರಣಾಂತರಗಳಿಂದ 10 ದಿನಗಳ ಅಧಿವೇನದಲ್ಲಿ 2 ದಿನದ ಅಧಿವೇಶನದ ಸಮಯವು ಮೊಟುಕುಗೊಂಡಿರುತ್ತದೆ. ಹೀಗಾಗಿ ಒಂದು ವಾರ ಕಾಲ ಅಧಿವೇಶನ ವಿಸ್ತರಿಸಬೇಕು” ಎಂದು ಮನವಿ ಮಾಡಿದ್ದಾರೆ.
ಕಾಂಗ್ರೆಸ್‌ನ ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಸೋಮವಾರ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿ, ಕೆಲವು ಹೊತ್ತು ಸಿಎಂ ಸೇರಿ ಸದಸ್ಯರು ಸಂತಾಪ ಸೂಚಿಸಿ ಮಾತನಾಡಿದರು. ಬಳಿಕ ಸಭಾಧ್ಯಕ್ಷರು ಇಂದಿನ ಅಧಿವೇಶನವನ್ನು ಮೊಟಕುಗೊಳಿಸಿ ಮಂಗಳವಾರಕ್ಕೆ ಕಲಾಪವನ್ನು ಮುಂದೂಡಿದರು.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಒಂದು ವಾರಗಳ ಕಾಲ ವಿಸ್ತರಿಸಬೇಕೆಂದು ಕೋರಿ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ @utkhader ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದೇನೆ.
— R. Ashoka (@RAshokaBJP) December 15, 2025
ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾನ್ಯ ಸದಸ್ಯರು ಪ್ರಸ್ತಾಪ ಮಾಡಿರುವ ಹಲವು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿಗಳು ಮತ್ತು… pic.twitter.com/leMWZ2gaPZ





