ರಾಜ್ಯ ಗುತ್ತಿಗೆದಾರರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆರ್. ಮಂಜುನಾಥ್ ಅವಿರೋಧ ಆಯ್ಕೆ

Date:

ರಾಜ್ಯ ಗುತ್ತಿಗೆದಾರರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆರ್. ಮಂಜುನಾಥ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಡಿ. ಕೆಂಪಣ್ಣ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆದಿದ್ದು, ಸಂಘದ ಕಾರ್ಯಾಧ್ಯಕ್ಷರಾಗಿದ್ದ ಆರ್. ಮಂಜುನಾಥ್ ಅವರೊಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ಅವರನ್ನು ಅವಿರೋಧ ಆಯ್ಕೆ ಎಂದು ಘೋಷಿಸಲಾಗಿದೆ.

ಕೆಂಪಣ್ಣ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಜಗನ್ನಾಥ್ ಬಿ. ಶೇಗಜಿ ಅವರನ್ನು ಹಂಗಾಮಿಯಾಗಿ ನೇಮಿಸಲಾಗಿತ್ತು. ಸಂಘದ ಬೈ-ಲಾದಂತೆ, ಕಾರ್ಯಕಾರಿ ಸಮಿತಿ ಸದಸ್ಯರು, ಅಧ್ಯಕ್ಷರನ್ನು ಆಯ್ಕೆ ಮಾಡಬೇಕು. ಚುನಾವಣಾಧಿಕಾರಿ ಲಕ್ಷ್ಮೀಶ ಅವರು ಅಧ್ಯಕ್ಷರ ಆಯ್ಕೆಯ ಚುನಾವಣೆ ಪ್ರಕ್ರಿಯೆಯನ್ನು ಬುಧವಾರ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಂಪಣ್ಣ ಅವರು ಅಧ್ಯಕ್ಷರಾಗಿದ್ದಾಗ ಗುತ್ತಿಗೆದಾರರ ಪರವಾಗಿ ಹೋರಾಟಗಳನ್ನು ಮಾಡಿದ್ದೇನೆ. ಆಗಿನಿಂದಲೂ ಕಾರ್ಯಾಧ್ಯಕ್ಷ ಹುದ್ದೆಯಲ್ಲಿದ್ದ ನಾನು, ಗುತ್ತಿಗೆದಾರರ ಸಂಕಷ್ಟಗಳಿಗೆ ಸ್ಪಂದಿಸಿದ್ದೇನೆ. ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ನನ್ನನ್ನು ಅಧ್ಯಕ್ಷನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗಾಗಿ ನಾನು ಹೋರಾಟ ಮಾಡುತ್ತೇನೆ” ಎಂದು ಆರ್. ಮಂಜುನಾಥ್ ಹೇಳಿದ್ದಾರೆ.

“ರಾಜ್ಯದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರು ವರ್ಷಗಳಿಂದ ಬಿಲ್ ಪಾವತಿಯಾಗದೆ ಸಂಕಷ್ಟದಲ್ಲಿದ್ದಾರೆ. ಅವರಿಗೆ ಬಿಲ್ ಪಾವತಿ ಮಾಡಿಸುವುದು ಪ್ರಥಮ ಆದ್ಯತೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ. ಗುತ್ತಿಗೆದಾರರ ಹಿತರಕ್ಷಣೆ ಒತ್ತು ನೀಡಿ, ಕಾರ್ಯಚಟುವಟಿಕೆಗಳನ್ನು ರೂಪಿಸಲಾಗುತ್ತದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...