ದೇಶದ ಚುನಾವಣಾ ಅಕ್ರಮಗಳನ್ನು ಮತ್ತೆ ಬಯಲು ಮಾಡಿದ ರಾಹುಲ್‌ ಗಾಂಧಿ: ಸಿಎಂ ಸಿದ್ದರಾಮಯ್ಯ

Date:

ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ‌ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

“ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ ವಿಧಾನಸಭಾ ಮತಗಳ್ಳತನವನ್ನು ಬಯಲು ಮಾಡಿದ್ದರು. ಇಂದು ಹರಿಯಾಣ ರಾಜ್ಯದ ಇಡೀ ಚುನಾವಣಾ ಫಲಿತಾಂಶವನ್ನೇ ಹೇಗೆ ಬುಡಮೇಲು ಮಾಡಿದ್ದಾರೆ ಎಂಬುದನ್ನು ದಾಖಲೆ ಸಹಿತ ಜನರ ಮುಂದಿಟ್ಟಿದ್ದಾರೆ. ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆಯ ಮೂಲಕ ಪ್ರಜಾತಂತ್ರದ ರಕ್ಷಣೆಯ ಮಾಡಬೇಕಿರುವ ಚುನಾವಣಾ ಆಯೋಗವೇ ಕೇಂದ್ರ ಸರ್ಕಾರದ ಜೊತೆಗೂಡಿ ಹೇಗೆ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕುತ್ತಿದೆ ಎಂಬುದಕ್ಕೆ ಈ ದಾಖಲೆಗಳು ಸಾಕ್ಷಿ” ಎಂದು ಎಕ್ಸ್‌ ತಾಣದಲ್ಲಿ ಸಿಎಂ ಬರೆದುಕೊಂಡಿದ್ದಾರೆ.

“ಮಹಾರಾಷ್ಟ್ರ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯರ ಹೆಸರುಗಳನ್ನಷ್ಟೇ ಬಳಸಿ ನಕಲಿ ಮತದಾರರನ್ನು ಸೃಷ್ಟಿಸುತ್ತಿದ್ದ ಬಿಜೆಪಿ ಮತ್ತು ಚುನಾವಣಾ ಆಯೋಗ, ಹರಿಯಾಣದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಬ್ರೆಜಿಲ್‌ನ ರೂಪದರ್ಶಿಯ ಗುರುತನ್ನು ಕೂಡ ತನ್ನ ಮತಗಳ್ಳತನಕ್ಕೆ ಬಳಕೆ ಮಾಡಿಕೊಂಡಿರುವುದು ಅವರ ನಿರ್ಲಜ್ಜತನಕ್ಕೆ ಸಾಕ್ಷಿ. ಈ ಬಾರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಮಾನ ಹೋಗುವುದು ಗ್ಯಾರಂಟಿ” ಎಂದು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“5 ಲಕ್ಷಕ್ಕೂ ಅಧಿಕ ನಕಲಿ ಮತದಾರರು, ತಿರುಚಿದ ಅಥವಾ ಗುರುತಿಸಲು ಸಾಧ್ಯವಾಗದಂತಹ ಫೋಟೊ ಬಳಸಿ 1 ಲಕ್ಷಕ್ಕೂ ಅಧಿಕ ಮತಗಳನ್ನು ಕಳವು ಮಾಡಲಾಗಿದೆ. ಹೀಗೆ ಒಟ್ಟು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 25 ಲಕ್ಷಕ್ಕೂ ಅಧಿಕ ಮತಗಳ್ಳತನ ನಡೆದಿದೆ. ಅಂದರೆ ಹರಿಯಾಣದಲ್ಲಿ ಮತ ಚಲಾಯಿಸಿದ ಪ್ರತಿ 8 ಜನರ ಪೈಕಿ‌ ಒಂದು ನಕಲಿ‌ ಮತ ಎನ್ನುವುದು ಸ್ಪಷ್ಟ” ಎಂದಿದ್ದಾರೆ.

“ದೇಶದ ಬಹುತೇಕ ಚುನಾವಣಾ ಸಮೀಕ್ಷೆಗಳು ಹರಿಯಾಣದಲ್ಲಿ ಬಿಜೆಪಿ ಧೂಳಿಪಟವಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದರೂ, ಹರಿಯಾಣದ ಜನ ಈ ಬಾರಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲೇಬೇಕು ಎಂಬ ದೃಢ ಸಂಕಲ್ಪ ಮಾಡಿದರೂ ಬಿಜೆಪಿ ಹೇಗೆ ಬಹುಮತ ಪಡೆದು ಸರ್ಕಾರ ರಚಿಸಿತು ಎನ್ನುವ ಅನುಮಾನಕ್ಕೆ ರಾಹುಲ್ ಗಾಂಧಿಯವರು ಉತ್ತರ ನೀಡಿದ್ದಾರೆ. ತಮ್ಮ ಮೇಲಿನ ಆರೋಪಗಳಿಗೆ ಹಾರಿಕೆ ಉತ್ತರ ನೀಡಿ ಪಲಾಯನ ಮಾಡುತ್ತಿದ್ದ, ಆರೋಪ ಮಾಡಿದವರನ್ನೇ ಪ್ರಮಾಣ ಮಾಡಿ ಎಂದು ಅಸಂಬದ್ಧವಾಗಿ ಮಾತನಾಡುತ್ತಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಬಾರಿಯಾದರೂ “ತನ್ನ ಮಾಲೀಕರ” ರಕ್ಷಣೆಯ ದುಸ್ಸಾಹಸಕ್ಕೆ ಕೈಹಾಕದೆ ಸತ್ಯ ಒಪ್ಪಿಕೊಂಡು, ಮಾಡಿದ ಪಾಪಗಳಿಗೆ ಕಾನೂನಿನ ಮೂಲಕ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...