ರಾಹುಲ್‌ ಗಾಂಧಿ ತಮ್ಮೊಂದಿಗೆ ಮಿತ್ರಪಕ್ಷಗಳನ್ನೂ ಮುಳುಗಿಸುತ್ತಿದ್ದಾರೆ: ಪ್ರಲ್ಹಾದ ಜೋಶಿ

Date:

ಕಾಂಗ್ರೆಸ್‌ ಪಕ್ಷ ಮುಳುಗುತ್ತಿರುವ ದೋಣಿ. ರಾಹುಲ್‌ ಗಾಂಧಿ ತಮ್ಮೊಂದಿಗೆ ಮಿತ್ರಪಕ್ಷಗಳನ್ನೂ ಮುಳುಗಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, “ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್‌ ಪಕ್ಷ ದೇಶದೆಲ್ಲೆಡೆ ಮುಳುಗುತ್ತಿದೆ. ಅವರ ʼವೋಟ್‌ಚೋರಿʼ ವೃಥಾ ಆರೋಪದ ತಂತ್ರಗಾರಿಕೆಗೆ ಬಿಹಾರದ ಜನ ಸೊಪ್ಪು ಹಾಕಲಿಲಲ್ಲ” ಎಂದು ಪ್ರತಿಕ್ರಿಯಿಸಿದರು.

“ಬಿಹಾರದಲ್ಲಿ ಕಾಂಗ್ರೆಸ್‌ ಪಕ್ಷ ಒಂದಂಕಿ ಫಲಿತಾಂಶಕ್ಕೂ ಪರದಾಡುವಂತಾಗಿದೆ. ರಾಹುಲ್‌ ಗಾಂಧಿ ತಮ್ಮ ಮಿತ್ರಪಕ್ಷಗಳ ಅಸ್ಥಿತ್ವವನ್ನೂ ಕಳೆಯುತ್ತಿದ್ದಾರೆ. ರಾಹುಲ್‌ ಗಾಂಧಿ ಯಾವಾಗಲೂ ಪರಮಾಣು ಮತ್ತು ಹೈಡ್ರೋಜನ್ ಬಾಂಬ್‌ಗಳ ಬಗ್ಗೆಯೇ ಮಾತನಾಡುತ್ತಿದ್ದರು. ಅವರು ಈ ಎಲ್ಲ ಬಾಂಬ್‌ಗಳನ್ನು ತಮ್ಮದೇ ಪಕ್ಷ ಮತ್ತು ಮಿತ್ರಪಕ್ಷಗಳ ಮೇಲೆ ಸ್ಫೋಟಿಸಿದ್ದಾರೆ” ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಹುಲ್ ಗಾಂಧಿ ದೇಶದ ಒಂದು ಸಾಂವಿಧಾನಿಕ ಸಂಸ್ಥೆ ಮತ್ತು ವ್ಯವಸ್ಥೆಯ ಮೇಲೆಯೇ ಗೂಬೆ ಕೂರಿಸುವ ಪ್ರಯತ್ನ ಮಾಡಿದರು. ವೋಟ್‌ ಚೋರಿ, ಮತಯಂತ್ರ ಲೋಪ ಹೀಗೆ ಇಲ್ಲಸಲ್ಲದ ಆರೋಪ ಮಾಡಿ ಮತದಾರರ ದಿಕ್ಕುತಪ್ಪಿಸಲೆತ್ನಿಸಿ ಒಳ್ಳೇ ಫಲ ಕಂಡುಕೊಂಡಿದ್ದಾರೆ. ಕಾಂಗ್ರೆಸ್‌ ಮತ್ತು ಮಹಾ ಘಟಬಂಧನ್‌ನ ಎಲ್ಲಾ ಆರೋಪಗಳನ್ನು ಬಿಹಾರದ ಜನ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಇದು ಅವರ ವೋಟ್‌ ಚೋರಿ ಆರೋಪಕ್ಕೆ ತಕ್ಕ ಪ್ರತ್ಯುತ್ತರವಾಗಿದೆ. ರಾಹುಲ್‌ ಗಾಂಧಿ ಇನ್ನಾದರೂ ಮತದಾರರನ್ನು, ಸಂವಿಧಾನವನ್ನು ಮತ್ತು ಸಂವಿಧಾನಿಕ ಸಂಸ್ಥೆಗಳನ್ನು ಗೌರವಿಸಲಿ” ಎಂದರು.

“ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಐತಿಹಾಸಿಕ ಗೆಲುವು ದಾಖಲಿಸಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ ಅವರ ನಾಯಕತ್ವಕ್ಕೆ ಮತದಾರರು ನೀಡಿದ ಜನಾದೇಶ. ಇದಕ್ಕಾಗಿ ಬಿಹಾರದ ಜನರಿಗೆ ಧನ್ಯವಾದ ಹೇಳುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...