ಕಳೆದ ಎರಡು ತಿಂಗಳುಗಳಿಂದ ಚಳಿ-ಒಣ ಹವೆ ಆವರಿಸಿರುವ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ. ವರ್ಷದ ಕಡೆಯ ದಿನವಾದ ಡಿಸೆಂಬರ್ 31ರಂದು ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇನ್ನು, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ವಿಜಯನಗರ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿಯಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




