ಮುಂದಿನ ಮೂರು ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ

Date:

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ನಿನ್ನೆ ಭಾರೀ ಮಳೆಯಾಗಿದೆ. ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ನಿನ್ನೆ ಕರಾವಳಿ ಮತು ದಕ್ಷಿಣ ಒಳನಾಡಿನಲ್ಲಿಈಶಾನ್ಯ ಮಾನ್ಸೂನ್ ಸಾಮಾನ್ಯವಾಗಿದ್ದು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ರಾಜ್ಯದ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದೆ. ಯಾದಗಿರಿ, ಮೈಸೂರು, ಕೋಲಾರ, ಕೊಡಗು, ಬಾಗಲಕೋಟೆ, ಕಲಬುರಗಿ, ವಿಜಯಪುರ, ಮಂಡ್ಯ, ಬೆಂಗಳೂರು ನಗರದ ಕೆಲವೆಡೆ ಮಳೆಯಾಗಿದೆ.

ದಕ್ಷಿಣ ತಮಿಳುನಾಡು ಕರಾವಳಿ ಮತು ಪಕ್ಕದ ಶ್ರೀಲಾಂಕದ ಮೇಲೆ ಚಂಡಮಾರುತದ ಪರಿಚಲನೆಯು ಈಗ ದಕ್ಷಿಣ ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಇದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ವರೆಗೆ ವಿಸ್ತರಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ: ಹವಾಮಾನ ಇಲಾಖೆ

ದಕ್ಷಿಣ ತಮಿಳುನಾಡು ಕರಾವಳಿಯಲ್ಲಿ ಮೇಲಿನ ಚಂಡಮಾರುತದ ಪರಿಚಲನೆಯಿಂದ ಟ್ರಫ್ ಮತು ಪಕ್ಕದ ಶ್ರೀಲಂಕಾದಿಂದ ಕರಾವಳಿ ಕರ್ನಾಟಕಕ್ಕೆ 0.9 ಕಿ.ಮೀ ಎತ್ತರದಲ್ಲಿ ಸಮುದ್ರ ಮಟ್ಟದಿಂದ ಕಡಿಮೆ ಗುರುತಿಸಲಾಗಿದೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇಂದು (ನವೆಂಬರ್ 3) ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು
ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ರಾಯಚೂರು, ಬಾಗಲಕೋಟೆ, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಇಂದು ಒಣ ಹವಾಮಾನ ಇರಲಿದೆ.

ನಾಳೆ (ನವೆಂಬರ್ 4) ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ? ಡಾನಾ ಚಂಡಮಾರುತ | ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನನಡ, ಉಡುಪಿ, ಉತ್ತರ ಕನ್ನಡ, ಬೆಳಗಾವ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆಯಿದೆ.

ಅಕ್ಟೋಬರ್ 5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...