ಮುಂದುವರೆದ ಮಳೆ ಅಬ್ಬರ | ರಾಜ್ಯದೆಲ್ಲೆಡೆ ಇಂದು ಗುಡುಗು, ಮಿಂಚು ಸಹಿತ ಭಾರೀ ಮಳೆ

Date:

ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಡಾನಾ ಚಂಡಮಾರುತ ಅಪ್ಪಳಿಸುತ್ತಿರುವ ನಡುವೆ ರಾಜ್ಯದಲ್ಲಿಯೂ ಮಳೆ ಅಬ್ಬರ ಮುಂದುವರೆದಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು, ಹಾಸನದಲ್ಲಿ ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ.

ಇದನ್ನು ಓದಿದ್ದೀರಾ? ಉಪಚುನಾವಣೆ ಗುಂಗಲ್ಲಿ ಸರ್ಕಾರ; ಮಹಾ ಮಳೆಯಲ್ಲಿ ಕರಗುತ್ತಿದೆ ರೈತನ ಕಣ್ಣೀರು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ, ಬಾಗಲಕೋಟೆ, ಧಾರಾವಾಡ, ಹಾವೇರಿ, ವಿಜಯನಗರ, ಕೊಪ್ಪಳ, ಗದಗ, ಬಳ್ಳಾರಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಮುಂದಿನ ಐದು ದಿನಗಳಲ್ಲಿ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಾದ ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ, ತ್ರೀವ್ರ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರ, ಬೆಂಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮೊದಲಾದ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ಹಾಗೆಯೇ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...