BREAKING | ಪ್ರಕಾಶ್ ರಾಜ್, ಪ್ರೊ. ತರೀಕೆರೆ, ಡಾ. ಚೆನ್ನಿ ಸೇರಿ 70 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

Date:

2025-26ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟಗೊಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಗುರುವಾರ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹೆಸರುಗಳನ್ನು ಘೋಷಿಸಿದರು.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೋಣಂದೂರು ಲಿಂಗಪ್ಪ, ಬೆಂಗಳೂರು ಪೌರ ಕಾರ್ಮಿಕರಾದ ಫಕೀರಮ್ಮ ಮತ್ತು ಪೆನ್ನ ಓಬಳಯ್ಯಾ. ಚಲನಚಿತ್ರ ನಟ ಪ್ರಕಾಶ್ ರಾಜ್, ನ್ಯಾಯಾಧೀಶ ಪಿ ಬಿ ಭಜಂತ್ರಿ, ಹಿರಿಯ ಐಎಎಸ್ ಅಧಿಕಾರಿ ಸಿದ್ದಯ್ಯ, ಸಾಹಿತಿ
ರಾಜೇಂದ್ರ ಚೆನ್ನಿ, ರಹಮತ್ ತರೀಕೆರೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

2,116 ಸಾಧಕರು ಸ್ವಯಂ ಪ್ರೇರಣೆಯಿಂದ ಅರ್ಜಿ ಸಲ್ಲಿಸಿದ್ದರು. ಈ ಬಾರಿ ಅರ್ಜಿ ಕರೆದಿರಲಿಲ್ಲ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ 22 ಕ್ಯಾರೆಟ್‌ನ 25 ಗ್ರಾಂ ಚಿನ್ನ ಮತ್ತು ಐದು ಲಕ್ಷ ನಗದು ಸಿಗಲಿದೆ. ನ.1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ವರ್ಷ ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆಯಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗೆ 6 ಪ್ರಶಸ್ತಿ, ಬೆಂಗಳೂರು ನಗರಕ್ಕೆ 5, ತುಮಕೂರು 4, ಕೊಪ್ಪಳ, ಉಡುಪಿ, ವಿಜಯಪುರ, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗೆ 3 ಪ್ರಶಸ್ತಿ ಲಭಿಸಿದೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು

ಸಾಹಿತ್ಯ ಕ್ಷೇತ್ರ
ಪ್ರೊ. ರಾಜೇಂದ್ರ ಚೆನ್ನಿ, ಶಿವಮೊಗ್ಗ
ರಹಮತ್ ತರೀಕೆರೆ ಚಿಕ್ಕಮಗಳೂರು
ತುಂಬಾಡಿ ರಾಮಯ್ಯ, ತುಮಕೂರು
ಪ್ರೊ. ಅರ್ ಸುನಂದಮ್ಮ, ಚಿಕ್ಕಬಳ್ಳಾಪುರ
ಡಾ.ಎಚ್.ಎಲ್ ಪುಷ್ಪ, ತುಮಕೂರು
ಹ.ಮ. ಪೂಜಾರ, ವಿಜಯಪುರ

ಜಾನಪದ
ಬಸಪ್ಪ ಭರಮಪ್ಪ ಚೌಡ್ಕಿ, ಕೊಪ್ಪಳ
ಶ್ರೀ ಬಿ. ಟಾಕಪ್ಪ ಕಣ್ಣೂರು, ಶಿವಮೊಗ್ಗ
ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ, ಬೆಳಗಾವಿ
ಹನುಮಂತಪ್ಪ ಮಾರಪ್ಪ ಚೀಳಂಗಿ, ಚಿತ್ರದುರ್ಗ
ಎಂ. ತೋಪಣ್ಣ, ಕೋಲಾರ
ಸೋಮಣ್ಣ ದುಂಡಪ್ಪ ಧನಗೊಂಡ, ವಿಜಯಪುರ
ಶ್ರೀಮತಿ ಸಿಂಧು ಗುಜರನ್, ದಕ್ಷಿಣ ಕನ್ನಡ
ಎಲ್. ಮಹದೇವಪ್ಪ ಉಡಿಗಾಲ, ಮೈಸೂರು

ಸಂಗೀತ ಕ್ಷೇತ್ರ
ದೇವೆಂದ್ರಕುಮಾರ ಪತ್ತಾರ್, ಕೊಪ್ಪಳ
ಮಡಿವಾಳಯ್ಯ ಸಾಲಿ, ಬೀದರ್

ನೃತ್ಯ ಕ್ಷೇತ್ರ
ಪ್ರೊ. ಕೆ. ರಾಮಮೂರ್ತಿ ರಾವ್
ಮೈಸೂರು

ಚಲನಚಿತ್ರ /ಕಿರುತೆರೆ
ಪ್ರಕಾಶ್ ರಾಜ್, ದಕ್ಷಿಣ ಕನ್ನಡ
ಶ್ರೀಮತಿ ವಿಜಯಲಕ್ಷ್ಮೀ ಸಿಂಗ್, ಕೊಡಗು

ಆಡಳಿತ ವಿಭಾಗ
ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ), ಬೆಂಗಳೂರು ದಕ್ಷಿಣ (ರಾಮನಗರ)

ವೈದ್ಯಕೀಯ
ಡಾ. ಆಲಮ್ಮ ಮಾರಣ್ಣ, ತುಮಕೂರು
ಡಾ.ಜಯರಂಗನಾಥ್, ಬೆಂಗಳೂರು ಗ್ರಾಮಾಂತರ

ಸಮಾಜ ಸೇವೆ
ಸೂಲಗಿತ್ತಿ ಈರಮ್ಮ, ವಿಜಯನಗರ
ಫಕ್ಕೀರಿ, ಬೆಂಗಳೂರು ಗ್ರಾಮಾಂತರ
ಕೋರಿನ್ ಆಂಟೊನಿಯಟ್ ರಸ್ಕೀನಾ, ದಕ್ಷಿಣ ಕನ್ನಡ
ಡಾ. ಎನ್. ಸೀತಾರಾಮ ಶೆಟ್ಟಿ, ಉಡುಪಿ
ಶ್ರೀ ಕೋಣಂದೂರು ಲಿಂಗಪ್ಪ, ಶಿವಮೊಗ್ಗ

ಉಮೇಶ ಪಂಬದ,ದಕ್ಷಿಣ ಕನ್ನಡ
ಡಾ. ರವೀಂದ್ರ ಕೋರಿಶೆಟ್ಟಿರ್, ಧಾರವಾಡ
ಕೆ.ದಿನೇಶ್, ಬೆಂಗಳೂರು
ಶಾಂತರಾಜು, ತುಮಕೂರು
ಜಾಫರ್ ಮೊಹಿಯುದ್ದೀನ್, ರಾಯಚೂರು
ಪೆನ್ನ ಓಬಳಯ್ಯ, ಬೆಂಗಳೂರು ಗ್ರಾಮಾಂತರ
ಶಾಂತಿ ಬಾಯಿ, ಬಳ್ಳಾರಿ
ಪುಂಡಲೀಕ ಶಾಸ್ತ್ರೀ(ಬುಡಬುಡಕೆ) ಬೆಳಗಾವಿ

ಹೊರನಾಡು/ ಹೊರದೇಶ
ಜಕರಿಯ ಬಜಪೆ (ಸೌದಿ)
ಪಿ ವಿ ಶೆಟ್ಟಿ (ಮುಂಬೈ)

ಪರಿಸರ
ರಾಮೇಗೌಡ, ಚಾಮರಾಜನಗರ
ಮಲ್ಲಿಕಾರ್ಜುನ ನಿಂಗಪ್ಪ, ಯಾದಗಿರಿ

ಕೃಷಿ
ಡಾ.ಎಸ್.ವಿ.ಹಿತ್ತಲಮನಿ, ಹಾವೇರಿ
ಎಂ ಸಿ ರಂಗಸ್ವಾಮಿ, ಹಾಸನ

ಮಾಧ್ಯಮ
ಕೆ.ಸುಬ್ರಮಣ್ಯ, ಬೆಂಗಳೂರು
ಅಂಶಿ ಪ್ರಸನ್ನಕುಮಾರ್, ಮೈಸೂರು
ಬಿ.ಎಂ ಹನೀಫ್, ದಕ್ಷಿಣ ಕನ್ನಡ
ಎಂ ಸಿದ್ಧರಾಜು, ಮಂಡ್ಯ
ರಾಮಯ್ಯ, ಚಿಕ್ಕಬಳ್ಳಾಪುರ
ಏರ್ ಮಾರ್ಷಲ್ ಫೀಲಿಪ್ ರಾಜಕುಮಾರ್, ದಾವಣಗೆರೆ
ಡಾ. ಆರ್. ವಿ ನಾಡಗೌಡ, ಗದಗ

WhatsApp Image 2025 10 30 at 5.54.04 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...