ರಾಮೇಶ್ವರಂ ಕೆಫೆ | ತಮಿಳರ ಬಗ್ಗೆ ಅವಹೇಳನಕಾರಿ ಹೇಳಿಕೆ; ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣ ರದ್ದು

Date:

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿದವರಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿತ್ತು ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಕ್ಷಮಾಪಣೆ ಪರಿಗಣಿಸಿ ಮದ್ರಾಸ್‌ ಹೈಕೋರ್ಟ್‌ ಪ್ರಕ್ರಿಯೆ ರದ್ದುಪಡಿಸಿತ್ತು. ಇದರ ಆಧಾರದಲ್ಲಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಕರಂದ್ಲಾಜೆ ವಿರುದ್ಧದ ಪ್ರಕರಣವನ್ನು ರದ್ದು ಮಾಡಿದೆ.

“ತಮಿಳುನಾಡಿನ ಜನರು ಅಲ್ಲಿ ತರಬೇತಿ ಪಡೆದು ಇಲ್ಲಿ ಬಂದು ಬಾಂಬ್‌ ಹಾಕುತ್ತಾರೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟಿದ್ದೂ ಕೂಡ ಅಲ್ಲಿಂದ ಬಂದವರು” ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು ಇದು ವಿವಾದಕ್ಕೆ ಕಾರಣವಾಗಿತ್ತು. ತಮಿಳುನಾಡು ಸಿಎಂ ಸ್ಟ್ಯಾಲಿನ್ ಅವರು ಶೋಭಾ ಕರಂದ್ಲಾಜೆ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ನಾಗಮಂಗಲ ಗಲಭೆ | ಸುಳ್ಳು ಸುದ್ದಿ ಹರಡಿದ್ದ ಬಿಜೆಪಿಯ ಶೋಭಾ ಕರಂದ್ಲಾಜೆ, ಅಶೋಕ್ ವಿರುದ್ಧ ಎಫ್‌ಐಆರ್

ಇದಾದ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಶೋಭಾ “ನನ್ನ ತಮಿಳು ಸಹೋದರರು ಮತ್ತು ಸಹೋದರಿಯರೇ, ನಾನು ಈ ಪ್ರಕರಣದ ಬೆಳಕು ಚೆಲ್ಲುವ ಉದ್ದೇಶದಿಂದ ಹೇಳಿಕೆ ನೀಡಿರುವುದೇ ಹೊರತು ಯಾರ ಮೇಲೆಯೂ ಆರೋಪ ಹೊರಿಸುವ ಉದ್ದೇಶ ಹೊಂದಿರಲಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಆದರೂ ನನ್ನ ಹೇಳಿಕೆ ಕೆಲವರಿಗೆ ನೋವು ತಂದಿದೆ. ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ” ಎಂದು ಹೇಳಿದ್ದರು.

ಆದರೆ ತಮಿಳುನಾಡಿನಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣ ರದ್ದು ಪಡಿಸುವಂತೆ ಕೋರಿ ಕೇಂದ್ರ ಸಚಿವೆ ಕೋರ್ಟ್ ಮೆಟ್ಟಿಲೇರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...