ರನ್ಯಾ ರಾವ್ ಪ್ರಕರಣ | ಐಪಿಎ‌ಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರ ಬಗ್ಗೆ ತನಿಖೆಗೆ ಸರ್ಕಾರ ಸಮಿತಿ ರಚನೆ

Date:

ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಐಪಿಎಸ್ ಹಿರಿಯ ಅಧಿಕಾರಿ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆ ನಡೆಸಲು ಸರ್ಕಾರ ಸಮಿತಿ ರಚನೆ ಮಡಿದೆ.

ಪ್ರಕರಣದ ವಿಚಾರಣೆಯ ಸಮಯದಲ್ಲಿ ಬಂಧಿತ ಆರೋಪಿ ರನ್ಯಾ ರಾವ್ ಅವರು ಪೊಲಿಸ್ ಶಿಷ್ಟಾಚಾರ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು, ಅಕ್ರಮವನ್ನು ಮಾಡಿರುವ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ರಾಜ್ಯ ಐಪಿಎಸ್ ವೃಂದದ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ರಾಜ್ಯ ಪೊಲೀಸ್ ಗೃಹ ನಿರ್ಮಾಣ ಮತ್ತು ಮೂಲ ಸೌಕರ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ರಾವ್ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶಿಸಿದೆ.

ಶಿಷ್ಟಾಚಾರ ಸೌಲಭ್ಯಗಳ ಬಳಕೆಯನ್ನು ಪಡೆದುಕೊಳ್ಳಲು ಕಾರಣವಾದ ಸಂಗತಿಗಳು ಹಾಗೂ ಸಂದರ್ಭಗಳು ಮತ್ತು ಈ ಪ್ರಕರಣದಲ್ಲಿ ಕಂಡು ಬಂದರೆ ಪತ್ತೆ ಹಚ್ಚಿ, ತನಿಖಾ ವರದಿಯನ್ನು ಒಂದು ವಾರದೊಳಗೆ ಸಲ್ಲಿಸಲು ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದರಿ ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ಮತ್ತು ಎಲ್ಲ ರೀತಿಯ ನೆರವನ್ನು ನೀಡಲು ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾ ನಿರೀಕ್ಷಕರು(ಪೊಲೀಸ್ ಪಡೆಗಳ ಮುಖ್ಯಸ್ಥರು), ಕರ್ನಾಟಕ ರಾಜ್ಯ ಮತ್ತು ಕಾರ್ಯದರ್ಶಿಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೂ ಸೂಚಿಸಲಾಗಿದೆ.

ರನ್ಯಾ ರಾವ್ ಅವರು ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ದುಬೈನಿಂದ ಬೆಂಗಳೂರಿಗೆ ಸಾಗಣೆಮಾಡುತ್ತಿದ್ದ ಸಮಯದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದು, ಪ್ರಕರಣದ ವಿಚಾರಣೆಯ ಸಮಯದಲ್ಲಿ ಬಂಧಿತ ಅವರು ಶಿಷ್ಟಾಚಾರ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಂಡು, ಈ ಅಕ್ರಮವನ್ನು ಮಾಡಿರುವ ಬಗ್ಗೆ ವರದಿಯಾಗಿದೆ.

ಉನ್ನತ ಅಧಿಕಾರಿಗಳಿಗೆ ವಿಮಾನ ನಿಲ್ದಾಣಗಳಲ್ಲಿ ನೀಡಲಾಗುವ ಶಿಷ್ಟಾಚಾರಗಳನ್ನು ರಾಮಚಂದ್ರರಾವ್ ಹೆಸರು ಬಳಕೆ ಮಾಡಿಕೊಂಡು ಮತ್ತು ಅವರಿಗೆ ನೀಡುವ ಶಿಷ್ಟಾಚಾರ ಸೇವೆಗಳನ್ನು ರನ್ಯಾ ರಾವ್ ದುರ್ಬಳಕೆ ಮಾಡಿಕೊಂಡು ವಿಮಾನ ನಿಲ್ದಾಣಗಳಲ್ಲಿ ತಪಾಸಣೆಗಳನ್ನು ತಪ್ಪಿಸಿಕೊಂಡು ಅಕ್ರಮ ಕೃತ್ಯಗಳನ್ನು ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...