ನೇಮಕಾತಿ | ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸರ್ಕಾರದ‌ ಮುಖ್ಯ ಕಾರ್ಯದರ್ಶಿಗೆ ಪ್ರಿಯಾಂಕ್‌ ಖರ್ಗೆ ಪತ್ರ

Date:

ಕರ್ನಾಟಕ ಹೈಕೋರ್ಟ್ ಮುಂದೆ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕಾಗಿ ಕ್ರಮವಹಿಸಲು ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯ ಸರ್ಕಾರದ‌ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಉಚ್ಛ ನ್ಯಾಯಾಲಯದ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ವಿಭಾಗೀಯ ಪೀಠಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ, ಮುಂಬಡ್ತಿ ಹಾಗೂ ವಿವಿಧ ಸೇವಾ ವಿಷಯಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಪಡಿಸಲು ಅಗತ್ಯ ಕ್ರಮವಹಿಸಲು ಎಲ್ಲ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶಿಸುವಂತೆ ಪತ್ರದಲ್ಲಿ ಕೋರಿದ್ದಾರೆ.

ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ. ಮುಂಬಡ್ತಿ ಹಾಗೂ ವಿವಿಧ ಸೇವಾ ವಿಷಯಗಳಿಗೆ ಸಂಬಂಧಿಸಿದ ಪ್ರಕರಣಗಳು ಹಲವಾರು ವರ್ಷಗಳಿಂದ ಬಾಕಿ ಉಳಿದಿರುತ್ತವೆ. ಇದರಿಂದಾಗಿ ಇಲಾಖೆಗಳಲ್ಲಿ ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಮತ್ತು ಮುಂಬಡ್ತಿಗಳನ್ನು ಹೊಂದದೇ ಅಭ್ಯರ್ಥಿಗಳು ಅವಕಾಶ ವಂಚಿತರಾಗಿ ಅನ್ಯಾಯಕೊಳ್ಳಗಾಗಿರುತ್ತಾರೆ ಎಂದು ಸಮಸ್ಯೆ ಬಗ್ಗೆ ಸಚಿವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭ್ಯರ್ಥಿಗಳ ಹಾಗೂ ಅಧಿಕಾರಿ ನೌಕರರ ಭವಿಷ್ಯದ ಹಿತದೃಷ್ಟಿಯಿಂದ ಮಾನ್ಯ ಕರ್ನಾಟಕ ಉಚ್ಚನ್ಯಾಯಲಯ ಹಾಗೂ ವಿವಿಧ ವಿಭಾಗೀಯ ಪೀಠಗಳಲ್ಲಿ ಇತ್ಯರ್ಥವಾಗದೇ ಉಳಿದಿರುವ ಪ್ರಕರಣಗಳಲ್ಲಿ ಸ್ಪಷ್ಟವಾದ ಅಗತ್ಯ ಮಾಹಿತಿಯನ್ನು ಕಾಲಮಿತಿಯೊಳಗೆ ಸಲ್ಲಿಸಲು ಹಾಗೂ ಸರ್ಕಾರಿ ವಕೀಲರೊಂದಿಗೆ ಸಮನ್ವಯ ಸಾಧಿಸಿ ಎಲ್ಲಾ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲು ಸಂಬಂಧಪಟ್ಟ ಎಲ್ಲ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಬೇಕು ಎಂದು ಸಚಿವರು ಪತ್ರದಲ್ಲಿ ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...