ಹೆಡಗೇವಾರ್‌ ಸ್ಮಾರಕದೊಳಗೆ ನಾನು ಹೋಗಿದ್ದ ವಿಡಿಯೋ ರಿಲೀಸ್ ಮಾಡಿ: ಬಿಜೆಪಿಗೆ ಗೂಳಿಹಟ್ಟಿ ಶೇಖರ್‌ ಸವಾಲು

Date:

ನಾಗ್ಪುರದಲ್ಲಿ ಹೆಡಗೇವಾರ್‌ ಸ್ಮಾರಕದೊಳಗೆ ನಾನು ಹೋಗಿದ್ದ ವಿಡಿಯೋ ರಿಲೀಸ್ ಮಾಡಿ ಎಂದು ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್‌, ಬಿಜೆಪಿಗೆ ಸವಾಲು ಹಾಕಿದ್ದಾರೆ.

ಜಾತಿ ಕಾರಣಕ್ಕೆ ನಾಗ್ಪುರದ ಆರ್‌ಎಸ್‌ಎಸ್ ಕಚೇರಿಯಲ್ಲಿರುವ ಹೆಡಗೇವಾರ್ ಸ್ಮಾರಕದ ಒಳಗೆ ತನಗೆ ಪ್ರವೇಶ ನಿರಾಕರಿಸಲಾಗಿತ್ತು ಎಂದು ಆರೋಪಿಸಿ ಸುದ್ದಿಯಾಗಿದ್ದ ಬಿಜೆಪಿಯ ಮಾಜಿ ಸಚಿವ, ಶಾಸಕ ಗೂಳಿಹಟ್ಟಿ ಶೇಖರ್ ಅವರದ್ದೆನ್ನಲಾದ ಮತ್ತೊಂದು ಆಡಿಯೋ ಹೇಳಿಕೆ ಇದೀಗ ಮತ್ತೆ ವೈರಲ್ ಆಗಿದೆ.

“ವಿಡಿಯೋ ರಿಲೀಸ್ ಮಾಡಿದರೆ ನಿಮ್ಮ ಮನೆಗಳಲ್ಲಿ ಕಸ ಗುಡಿಸುವ ಕೆಲಸ ಮಾಡಿಕೊಂಡಿರುತ್ತೇನೆ” ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮಾಡಿದ್ದ ಆರೋಪಕ್ಕೆ ಬಿಜೆಪಿ ನಾಯಕರು ನೀಡಿದ್ದ ಆಕ್ಷೇಪದ ಹೇಳಿಕೆಗಳಿಗೆ ಆಡಿಯೋ ಮೂಲಕ ತಿರುಗೇಟು ನೀಡಿದ್ದಾರೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಮಾಜಿ ಶಾಸಕ ಪಿ ರಾಜೀವ್, ಛಲವಾದಿ ನಾರಾಯಣಸ್ವಾಮಿ, ಮತ್ತು ಸುರೇಶ್ ಕುಮಾರ್‌ಗೆ ವಾಟ್ಸಾಪ್‌ ಆಡಿಯೋ ಮೂಲಕ ಸವಾಲು ಹಾಕಿದ್ದಾರೆ.

“ಸಿಸಿ ಕ್ಯಾಮರಾ ದೃಶ್ಯ ಇರುತ್ತೆ ಅಲ್ವಾ? ರಿಲೀಸ್ ಮಾಡಿ. ರಿಲೀಸ್ ಮಾಡಿದ್ರೆ ನಿಮ್ಮ ಮನೆ ಗೇಟ್​ಕೀಪರ್ ಆಗಿ ಕೆಲಸ ಮಾಡ್ತೇನೆ. ಕೆಲವು ತಿಂಗಳ ಹಿಂದೆ ನಾನು ಈ ವಿಷಯವನ್ನು ಹೇಳಿದ್ದರೆ ಇನ್ನಷ್ಟು ಸೀಟ್ ಕಳೆದುಕೊಳ್ತಿದ್ದರು” ಎಂದು ಆಡಿಯೋ ಸಂದೇಶ ಮೂಲಕ ಟಾಂಗ್ ಕೊಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...