370 ರದ್ದು ಎತ್ತಿಹಿಡಿದ ಸುಪ್ರೀಂ ತೀರ್ಪು ಒಕ್ಕೂಟ ವ್ಯವಸ್ಥೆಗೆ ಮಾರಕ: ಜಸ್ಟಿಸ್ ದಾಸ್

Date:

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್ ತೀರ್ಪು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್ ಆತಂಕ ವ್ಯಕ್ತಪಡಿಸಿದ್ದಾರೆ.

‘ಈದಿನ.ಕಾಂ’ ಜೊತೆಯಲ್ಲಿ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್ ತೀರ್ಪು ಒಂದು ಮುಖ್ಯವಾದ ವಿಚಾರವನ್ನು ಗಮನಿಸಿಲ್ಲ. ಒಂದು ರಾಜ್ಯದ ಚುನಾಯಿತ ವಿಧಾನಸಭೆಯನ್ನು ರದ್ದುಪಡಿಸಿ ರಾಜ್ಯಪಾಲರ ಆಡಳಿತವನ್ನು ತರಲಾಯಿತು. ರಾಜ್ಯಪಾಲರ ಆಡಳಿತ ಇದ್ದಾಗ ಒಂದು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದರು. ಈ ರೀತಿಯ ಕ್ರಮವನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿರುವುದು ನಮ್ಮ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ” ಎಂದು ಎಚ್ಚರಿಸಿದರು.

“ಜಮ್ಮು ಮತ್ತು ಕಾಶ್ಮೀರಕ್ಕೆ ಬಂದಿರುವ ಸ್ಥಿತಿ ಮುಂದೊಂದು ದಿನ ಕರ್ನಾಟಕ ಅಥವಾ ಬೇರೆ ಯಾವುದೇ ರಾಜ್ಯಕ್ಕೂ ಬರಬಹುದು. ಇಲ್ಲಿನ ಚುನಾಯಿತ ಸರ್ಕಾರವನ್ನು ರದ್ದುಪಡಿಸಿ ರಾಜ್ಯಪಾಲರ ಆಡಳಿತ ತಂದು ರಾಜ್ಯಪಾಲರ ಒಪ್ಪಿಗೆ ಪಡೆದು ಕರ್ನಾಟಕವನ್ನೂ ಎರಡು ವಿಭಾಗ ಮಾಡಬಹುದು. ಆಗ ಇಲ್ಲಿನ ಜನರ ಆಯ್ಕೆಗೆ ಕಿಮ್ಮತ್ತೇ ಇಲ್ಲವಾಗುತ್ತದೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಲ್ಲಿನ ಚುನಾಯಿತ ಪ್ರತಿನಿಧಿಗಳ ಗೈರು ಹಾಜರಿಯಲ್ಲಿ ವಿಭಾಗ ನಡೆಯುತ್ತದೆ. ಜನರ ಅಭಿಪ್ರಾಯ ಏನು ಎಂಬುದಕ್ಕೆ ಅವಕಾಶವೇ ಇಲ್ಲದಂತೆ ಆಗುತ್ತದೆ. ಹೀಗೆ ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ಮುಂದೆ ಎಲ್ಲಾ ರಾಜ್ಯಗಳ ಮೇಲೂ ಬಳಸಬಹುದು” ಎಂದು ತಿಳಿಸಿದರು.

“ಸುಪ್ರೀಂ ಕೋರ್ಟ್ ಈ ಸಮಸ್ಯೆಯನ್ನು ಗಮನಿಸದೆ 370ನೇ ವಿಧಿಯ ರದ್ಧತಿಯನ್ನು ಎತ್ತಿ ಹಿಡಿದಿರುವುದು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ. ಸರ್ವೋಚ್ಚ ನ್ಯಾಯಾಲಯವು ಈ ತೀರ್ಪನ್ನು ಪುನರ್‌ ಪರಿಶೀಲನೆ ಮಾಡಬೇಕು. ಯಾವುದೇ ಪೀಠದ ತೀರ್ಪನ್ನು ಪುನರ್‌ ಪರಿಶೀಲನೆ ಮಾಡಲು ಅವಕಾಶವಿದೆ. ಕ್ಯೂರೇಟಿವ್‌ ಪಿಟೆಷನ್‌ಗೂ ಅವಕಾಶವಿದೆ. ಅದೂ ಆಗಲಿಲ್ಲವೆಂದರೆ ಇನ್ಯಾವುದೋ ತೀರ್ಪಿನ್ನೂ ರೀವಿಸಿಟ್ ಮಾಡಬಹುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...