ಮೀಸಲಾತಿ ಕಡಿತ ; ಕಾಂಗ್ರೆಸ್ ವಿರುದ್ಧ ದಲಿತರ ಆಕ್ರೋಶ: ಮಾ.11ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ನಿರ್ಧಾರ

Date:

ಮೀಸಲಾತಿಯನ್ನು ಕಡಿತಗೊಳಿಸಿ 56 ಸಾವಿರ ಉದ್ಯೋಗಗಳನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಮಾ.11ಕ್ಕೆ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ ಕೈಗೊಳ್ಳಲು ನಿರ್ಧಾರ ಕೈಗೊಳ್ಳಲಾಯಿತು.

ತುಮಕೂರಿನಲ್ಲಿ ನಡೆದ ಚಿತ್ರದುರ್ಗ, ಬಳ್ಳಾರಿ, ರಾಯಚೂರು, ದಾವಣಗೆರೆ, ತುಮಕೂರು ಜಿಲ್ಲೆಯ ಮಾದಿಗ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಒಳಮೀಸಲಾತಿ ಹೋರಾಟ ಸಮಿತಿಯ ಬಸವರಾಜ ಕೌತಾಳ್, ಸರ್ಕಾರ ಪ್ರಾಮಾಣಿಕವಾಗಿ ಒಳಮೀಸಲಾತಿ ಜಾರಿಗೊಳಿಸಲು ವಿಫಲವಾಗಿದೆ ಎಂದು ಆರೋಪಿಸಿದರು.

ದಲಿತರ ಒಳಮೀಸಲಾತಿಯ ವಿಚಾರದಲ್ಲಿ ಸರ್ಕಾರ ಶಾಶ್ವತ ಪರಿಹಾರ ಹುಡುಕುವ ಕೆಲಸ ಮಾಡುತ್ತಿಲ್ಲ, ಒಳಮೀಸಲಾತಿ ಬದಿಗಿಟ್ಟು ನೇಮಕಾತಿ ಮಾಡಲ್ಲ ಎಂದು ಹೇಳುವ ಸಿದ್ದರಾಮಯ್ಯ ಅವರು ನಂತರದ ದಿನಗಳಲ್ಲಿ ಕೈತೊಳೆದುಕೊಂಡಿರುವ ಸಾಕಷ್ಟು ಉದಾಹರಣೆಗಳಿವೆ. ಸರ್ಕಾರದ ನಿರ್ಧಾರದ ವಿರುದ್ಧ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಹೋರಾಟ ಇರುವುದು ಒಳ ಮೀಸಲಾತಿಗಾಗಿ ಹೊರತು ನೇಮಕಾತಿಗಲ್ಲ, ಒಳ ಮೀಸಲಾತಿ ಅನ್ವಯಿಸಿಯೇ ನೇಮಕಾತಿ ಆಗಬೇಕು. ಸರ್ಕಾರ ತೆಗೆದುಕೊಂಡಿರುವ ತೀರ್ಮಾನದ ವಿರುದ್ಧ ಸಹಿ ಸಂಗ್ರಹ ಆಂದೋಲನ ಪ್ರಾರಂಭವಾಗಬೇಕಿದೆ, ಕಾಂಗ್ರೆಸ್ ಸರ್ಕಾರ ಎಸ್ಟಿ ಸಮುದಾಯಕ್ಕೆ ಬಹುದೊಡ್ಡ ಅನ್ಯಾಯ ಮಾಡಿದ್ದು ಶೇ.7ರಿಂದ 3ಕ್ಕೆ ಇಳಿಸಿದೆ. ಇದರ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದರು.

ಚಿಂತಕ ದೊರೈರಾಜು ಮಾತನಾಡಿ, ಒಳ ಮೀಸಲಾತಿ ಸಮಾಜದ ಕುತ್ತಿಗೆಗೆ ಬಂದಿದೆ. ಸರ್ಕಾರ ಕಾನೂನು ಮೂಲಕವೇ ಮಹಾಮೋಸ ಮಾಡಿದೆ. ಇಂದಿರಾ ಸಾಹ್ನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶದಲ್ಲಿಯೇ ಇದೆ. ವಿಶೇಷ ಪ್ರಕರಣಗಳಲ್ಲಿ ಮೀಸಲಾತಿ ಪ್ರಮಾಣ ಶೇ.50 ಮೀರಲು ಅವಕಾಶವಿದೆ. ಆದರೆ ಒಳ ಮೀಸಲಾತಿ ನೀಡಲು ಮನಸ್ಸಿಲ್ಲದ ಕಳ್ಳರು, ಮೋಸಗಾರರು ಸಮುದಾಯವನ್ನು ಗಿಲ್ಕಿ ಆಡಿಸಿದಂತೆ ಆಡುತ್ತಿದ್ದಾರೆ ಎಂದು ಆರೋಪಿಸಿದರು.

ನ್ಯಾಯಾಲಯದಲ್ಲಿರುವ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಕಾಲತ್ತು ಆಗುವ ಜವಾಬ್ದಾರಿ ಯಾರದ್ದು, ಒಳ ಮೀಸಲಾತಿ ವಿರೋಧಿಗಳು ಸಾರ್ವಜನಿಕರನ್ನು ಎತ್ತಿಕಟ್ಟಿ ಹಳೇ ಮೀಸಲಾತಿ ಜಾರಿಗೆ ತರುವ ಮಾತನಾಡಿದ್ದಾರೆ. ಅದರಲ್ಲಿ ಒಳ ಮೀಸಲಾತಿ ಇರುತ್ತದೆ ಎನ್ನುವ ನಂಬಿಕೆ ನಮಗಿಲ್ಲ, ಸರ್ಕಾರ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತಿಲ್ಲ. ಉದ್ಯೋಗ ಭರ್ತಿಗೆ ನಮ್ಮ ವಿರೋಧವಿಲ್ಲ. ಆದರೆ ಒಳ ಮೀಸಲಾತಿ ನೀಡದೇ ನಮ್ಮ ಪಾಲನ್ನು ನಮಗೆ ನೀಡದೇ ಭರ್ತಿ ಮಾಡುವುದಕ್ಕೆ ನಮ್ಮ ವಿರೋಧವಿದೆ ಎಂದರು.

ಒಳ ಮೀಸಲಾತಿಗೆ ಒಂದು ತಲೆಮಾರು, ಉದ್ಯೋಗಕ್ಕಾಗಿ ಇನ್ನೊಂದು ತಲೆಮಾರು ಹೋರಾಟ ಮಾಡಬೇಕೆ? ಶೀಘ್ರ ನೇಮಕಾತಿ ಮಾಡಬೇಕಿರುವುದು ತುರ್ತು, ಒಳ ಮೀಸಲಾತಿ ನಮ್ಮ ಅಗತ್ಯ, ಒಳ ಮೀಸಲಾತಿಗೆ ಇರುವ ಕಾನೂನು ಅಡಚಣೆಗಳ ಬಗ್ಗೆ ಶೀಘ್ರ ತೀರ್ಮಾನ ಕೈಗೊಂಡು ಪರಿಹರಿಸುವ ಕಾರ್ಯ ಮಾಡಬೇಕೆಂದು ಸಲಹೆ ನೀಡಿದರು.

ಒಳಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ವೈ.ಕೆ.ಬಾಲಕೃಷ್ಣಪ್ಪ ಮಾತನಾಡಿ ಅವಕಾಶವಂಚಿತ ಸಮುದಾಯಕ್ಕೆ ಒಳ ಮೀಸಲಾತಿ ನೀಡಬೇಕೆಂಬ ಕಳಕಳಿ ಯಾವ ಪಕ್ಷಕ್ಕೂ ಇಲ್ಲದಂತಾಗಿದೆ. 30 ವರ್ಷಗಳ ಹೋರಾಟಕ್ಕೆ ಅಂತಿಮ ರೂಪವನ್ನು ನೀಡಬೇಕಾದ ಸಮಯ ಬಂದಿದೆ ಎಂದು ಹೇಳಿದರು.

ವಕೀಲ ಪಾವಗಡ ಶ್ರೀರಾಮ್, ಜಿ.ಪಂ.ಮಾಜಿ ಸದಸ್ಯ ಕೆಂಚಮಾರಯ್ಯ, ದಲಿತ ಮುಖಂಡರಾದ ನರಸೀಯಪ್ಪ, ಶಿವನಂಜಪ್ಪ, ನರಸಿಂಹಯ್ಯ, ಜಯಮೂರ್ತಿ, ಡಾ.ಲಕ್ಷ್ಮೀಕಾಂತ್, ನೀಲಕುಮಾರ ಗುಡಿಮನಿ, ಡಿ.ಟಿ.ವೆಂಕಟೇಶ್, ಕೊಟ್ಟ ಶಂಕರ್, ಶಿವರಾಂ, ರಾಜು, ಎಂ.ಸಿ.ನರಸಿಂಹಮೂರ್ತಿ, ದಂಡಿನಶಿವರ ಕುಮಾರ್, ತಿಪಟೂರು ಕೃಷ್ಣ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...