ಸಂಪನ್ಮೂಲ ಕ್ರೋಡೀಕರಣ ಸಮಿತಿಯಿಂದ ಸಿಎಂಗೆ ವರದಿ ಸಲ್ಲಿಕೆ, ತೆರಿಗೆ ವ್ಯಾಪ್ತಿ ವಿಸ್ತರಿಸಲು ಶಿಫಾರಸು

Date:

ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 2024ರಲ್ಲಿ ರಚಿಸಿದ್ದ ಸಂಪನ್ಮೂಲ ಕ್ರೋಡೀಕರಣ ಸಮಿತಿಯು ತನ್ನ ಅಂತಿಮ ವರದಿಯನ್ನು ಗುರುವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಿತು.

ಸಂಪನ್ಮೂಲ ಕ್ರೋಡೀಕರಣ ಸಮಿತಿಯು ಕೈಗೊಂಡ ಸಮಗ್ರ ವಿಶ್ಲೇಷಣೆ ಮತ್ತು ಶಿಫಾರಸುಗಳ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕರಿಸಿದರು.

ಕರ್ನಾಟಕ ರಾಜ್ಯವು, ಭಾರತದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಅತ್ಯುತ್ತಮ ಆರ್ಥಿಕ ಬೆಳವಣಿಗೆಯನ್ನು ಸಾಧಿಸುತ್ತಿದೆ. ರಾಜ್ಯದ ಒಟ್ಟು ರಾಜಸ್ವ ಸ್ವೀಕೃತಿಗಳಲ್ಲಿ ಸ್ವಂತ ತೆರಿಗೆ ರಾಜಸ್ವದ ಪಾಲು ಶೇ.60-70 ರಷ್ಟಿದ್ದು, ರಾಜ್ಯದ ಪ್ರಮುಖ ಆದಾಯದ ಮೂಲವಾಗಿದೆ. ವಾಣಿಜ್ಯ ತೆರಿಗೆ, ರಾಜ್ಯ ಅಬಕಾರಿ, ನೋಂದಣಿ ಮತ್ತು ಮುದ್ರಾಂಕ ಹಾಗೂ ಮೋಟಾರು ವಾಹನ ತೆರಿಗೆಗಳು ರಾಜ್ಯದ ಸ್ವಂತ ತೆರಿಗೆ ರಾಜಸ್ವದ ಪ್ರಮುಖ ಸ್ವೀಕೃತಿಗಳಾಗಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಮುಖ ಸವಾಲುಗಳು

  • ತೆರಿಗೆಯೇತರ ಆದಾಯ ಕಡಿಮೆಯಿರುವುದು, ವಿಶೇಷವಾಗಿ ಬಳಕೆದಾರರ ಶುಲ್ಕಗಳು ಹಾಗೂ ಸರ್ಕಾರಿ ಸ್ವತ್ತುಗಳಿಂದ, ಗುತ್ತಿಗೆ ಮತ್ತು ನಗದೀಕರಣದಿಂದ ಹೆಚ್ಚಿನ ರಾಜಸ್ವ ಸೃಜಿಸಲು ವಿಫುಲ ಅವಕಾಶಗಳಿರುತ್ತದೆ.
  • ಆಸ್ತಿ ದತ್ತಾಂಶಗಳ ಉತ್ತಮ ನಿರ್ವಹಣೆ ಮತ್ತು ಸರ್ಕಾರಿ ಆಸ್ತಿಗಳ ವ್ಯವಸ್ಥಿತ ಸಮೀಕ್ಷೆಯ ಅಗತ್ಯವಿರುತ್ತದೆ.
  • ಮಾರ್ಗಸೂಚಿ ದರಗಳು ಮತ್ತು ಆಸ್ತಿ ತೆರಿಗೆಗಳ ಪರಿಷ್ಕರಣೆಯಿಂದಾಗಿ ಸ್ಥಳೀಯ ಸಂಸ್ಥೆಗಳು ರಾಜಸ್ವ ಸೃಜಿಸಬಹುದಾದ ಅವಕಾಶವಿರುತ್ತದೆ.

ಪ್ರಮುಖ ಶಿಫಾರಸುಗಳು

  • ತೆರಿಗೆ ಸುಧಾರಣೆ ಮೂಲಕ ಕೆಲ ಪ್ರಮುಖ ರಾಜಸ್ವ ಮೂಲಗಳ ಮೇಲಿನ ಅತಿಯಾದ ಅವಲಂಬನೆಯನ್ನು ಕಡಿಮೆ ಮಾಡುವುದು ಮತ್ತು ತೆರಿಗೆ ವ್ಯಾಪ್ತಿಯನ್ನು ವಿಸ್ತರಿಸುವುದು.
  • ಅಬಕಾರಿ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಹರಾಜು ಆಧಾರಿತ ಡಿಜಿಟಲ್ ಸನ್ನದುಗಳನ್ನು ನೀಡುವುದು.
  • ಸಾರ್ವಜನಿಕ ಸೇವೆಗಳಲ್ಲಿ ಬಳಕೆದಾರ ಶುಲ್ಕಗಳನ್ನು ತರ್ಕಬದ್ಧಗೊಳಿಸುವುದು; ಪ್ರಮಾಣಾತ್ಮಕ ಬಿಲ್ಲಿಂಗ್ (volumetric billing) ವ್ಯವಸ್ಥೆಗೆ ಹಂತ ಹಂತವಾಗಿ ಸ್ಥಳಾಂತರಿಸುವುದು ಮತ್ತು ಹಣ ದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕಗಳನ್ನು ಸ್ವಯಂಚಾಲಿತವಾಗಿ ಪರಿಷ್ಕರಿಸುವ ವ್ಯವಸ್ಥೆಯನ್ನು ರೂಪಿಸುವುದು.
  • ವೈಜ್ಞಾನಿಕ ಆಸ್ತಿ ಮೌಲ್ಯಮಾಪನ, ಸಾರ್ವಜನಿಕ-ಖಾಸಗಿ ಪಾಲುದಾರಿಕೆಗಳ ಅಡಿಯಲ್ಲಿ ಗುತ್ತಿಗೆಯನ್ನು ವಿಸ್ತರಿಸುವುದು ಮತ್ತು ನಗರ ಭೂ-ಸ್ವತ್ತುಗಳನ್ನು ನಗದೀಕರಿಸುವ ಮೂಲಕ ಆದಾಯದ ಸಾಮರ್ಥ್ಯವನ್ನು ಹೆಚ್ಚಿಸುವುದು.
  • ಸಿಬ್ಬಂದಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮೂಲಕ ಇಲಾಖಾ ಸಾಮರ್ಥ್ಯವನ್ನು ಹೆಚ್ಚಿಸುವುದು, ಆಸ್ತಿ ಸಮೀಕ್ಷೆಗಳನ್ನು ನಿಯತಕಾಲಿಕವಾಗಿ ಮಾಡುವುದು ಮತ್ತು ತೆರಿಗೆಯೇತರ ಆದಾಯ ಮತ್ತು ಆಸ್ತಿ ನಗದೀಕರಣದ ಮೇಲ್ವಿಚಾರಣೆ ಮಾಡಲು ಆರ್ಥಿಕ ಇಲಾಖೆಯಲ್ಲಿ ಆರ್ಥಿಕ ನೀತಿ ವಿಭಾಗವನ್ನು ರಚಿಸುವುದು.

ಮುಂದಿನ ದಾರಿ

ಸಮಿತಿಯ ವರದಿಯಲ್ಲಿ ಮೂಲಸೌಕರ್ಯ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಂತಹ ಬೆಳವಣಿಗೆಯನ್ನು ಉತ್ತೇಜಿಸುವ ಕ್ಷೇತ್ರಗಳಿಗೆ ಅಗತ್ಯ ಅನುದಾನ ಮೀಸಲಿಡುವುದು, ಹಾಗೂ ಪರಿಣಾಮಕಾರಿಯಾಗಿ ವೆಚ್ಚವನ್ನು ನಿರ್ವಹಿಸುವ ಅಗತ್ಯದ ಬಗ್ಗೆ ವಿವರಿಸಲಾಗಿದೆ. ರಾಜ್ಯದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯದ ರಾಜಸ್ವ ಸಂಗ್ರಹಣೆಯಲ್ಲಿ ವ್ಯವಸ್ಥಿತ ಮತ್ತು ಕ್ರಮಬದ್ಧ ಸುಧಾರಣೆಗಳು ಅತ್ಯಾವಶ್ಯಕವೆಂದು ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...