ಪಂಚರಾಜ್ಯಗಳ ಫಲಿತಾಂಶ; ಜನರ ತೀರ್ಮಾನ ಗೌರವಿಸುತ್ತೇವೆ: ಸಿದ್ದರಾಮಯ್ಯ

Date:

ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದು, ಇನ್ನುಳಿದ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗಿಲ್ಲ. ಜನರ ತೀರ್ಮಾನವನ್ನು ಗೌರವಿಸುವ ಜೊತೆಗೆ ಸೋಲಿನ ಕಾರಣಗಳ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಚಿವ ಜಮೀರ್ ಅಹ್ಮದ್ ಅವರು ಮುಸ್ಲಿಂ ಸಮುದಾಯದ ಸಭಾಧ್ಯಕ್ಷರಿಗೆ ಎಲ್ಲರೂ ತಲೆಬಾಗಬೇಕು ಎಂಬ ಹೇಳಿಕೆಗೆ ಬಿಜೆಪಿಯವರು ಅವರ ರಾಜೀನಾಮೆಯನ್ನು ಕೇಳುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, “ಸಚಿವ ಜಮೀರ್ ಅಹ್ಮದ್ ಅವರು ಉದ್ದೇಶಪೂರ್ವಕವಾಗಿ ಈ ಹೇಳಿಕೆಯನ್ನು ನೀಡಿಲ್ಲ” ಎಂದರು.

ವಿಧಾನಸಭೆಯ ಒಳಗೆ ಸಾವರ್ಕರ್ ಭಾವಚಿತ್ರವನ್ನು ತೆಗೆಯುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ, “ಈ ವಿಷಯದ ಬಗ್ಗೆ ಸಭಾಧ್ಯಕ್ಷರು ತೀರ್ಮಾನ ಕೈಗೊಳ್ಳುತ್ತಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...