ಕಾಡಿನೊಳಗಿನ ಜನವಸತಿ ಸ್ಥಳಾಂತರ ಕುರಿತು ಪರಿಶೀಲನೆ, ಸಿಎಂ ಜೊತೆ ಶೀಘ್ರ ಸಭೆ: ಈಶ್ವರ ಖಂಡ್ರೆ

Date:

ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಾಡಿನೊಳಗಿರುವ ಜನವಸತಿಗಳನ್ನು ಸ್ಥಳಾಂತರಿಸುವ ಕುರಿತಂತೆ ಪರಿಶೀಲಿಸಲಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕಾರ್ಕಳ ವ್ಯಾಪ್ತಿಯ ನಿವಾಸಿಗಳ ಪುನರ್ಸವತಿ ಮತ್ತು ಪರಿಹಾರಕ್ಕೆ ಸಂಬಂಧಿಸಿದಂತೆ 2005ರ ಸರ್ಕಾರಿ ಸುತ್ತೋಲೆ ಪುನರ್ ಪರಿಶೀಲಿಸಿ ಮರು ಆದೇಶ ಮಾಡುವಂತೆ ಕೋರಿ ಶಾಸಕ ಟಿ.ಡಿ. ರಾಜೇಗೌಡ ನೇತೃತ್ವದ ನಿಯೋಗದಿಂದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

ಹಿಂದೆ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿತ್ತು. ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಇದನ್ನು ನಿಯಂತ್ರಿಸಿದ್ದು, ಉತ್ತಮ ಪರಿಸರವಿರುವುದರಿಂದ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆದರೆ ಹೆಚ್ಚುತ್ತಿರುವ ವನ್ಯಜೀವಿಗಳ ಸಂಖ್ಯೆಗೆ ಅನುಗುಣವಾಗಿ ವನ ಪ್ರದೇಶ ಹೆಚ್ಚುತ್ತಿಲ್ಲ ಇದರಿಂದ ಸಮಸ್ಯೆ ಉಲ್ಬಣಿಸುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1972ರಲ್ಲಿ ಬಂಡೀಪುರದಲ್ಲಿ ಕೇವಲ 12 ಇದ್ದ ಹುಲಿಗಳ ಸಂಖ್ಯೆ ಇಂದು 170ಕ್ಕೂ ಹೆಚ್ಚಾಗಿದೆ, ಹೀಗಾಗಿ ದುರ್ಬಲ ಹುಲಿಗಳು ಕಾಡಿನಿಂದ ಹೊರಬರುತ್ತಿವೆ. ಹಗಲು ರಾತ್ರಿ ಇಲಾಖೆ ಶ್ರಮಿಸುತ್ತಿದ್ದರು, ಮಾನವ-ವನ್ಯಜೀವಿ ಸಂಘರ್ಷದ ಘಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಹೆಚ್ಚಿಸಲು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಶೀಘ್ರವೇ ಸಭೆ ನಡೆಯಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಅರಣ್ಯದೊಳಗಿರುವ ಜನವಸತಿಗಳನ್ನು ಸ್ಥಳಾಂತರದಿಂದ ಅರಣ್ಯವಾಸಿಗಳು ಮತ್ತು ಅವರ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರುತ್ತಾರೆ. ಜೊತೆಗೆ ಮಾನವ-ವನ್ಯಜೀವಿ ಸಂಘರ್ಷವೂ ಕಡಿಮೆ ಆಗುತ್ತದೆ. ಸ್ಥಳಾಂತರಕ್ಕೆ ಪರಿಹಾರ ನೀಡಬೇಕಾಗುತ್ತದೆ. ಇದನ್ನು ಒಂದೇ ಬಾರಿಗೆ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಮಾಡಬೇಕಾಗುತ್ತದೆ. ಬಜೆಟ್ ನಲ್ಲಿ ಇದಕ್ಕೆ ಹಣ ಮೀಸಲಿಟ್ಟರೆ ಇದು ಸಾಧ್ಯವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...