‘ಖಾಸಗಿತನದ ಹಕ್ಕು’ ಅಮೂಲ್ಯ ತೀರ್ಪಿನ ಅರ್ಜಿದಾರ ಕರ್ನಾಟಕದ ಹೆಮ್ಮೆಯ ನ್ಯಾ.ಕೆ ಎಸ್ ಪುಟ್ಟಸ್ವಾಮಿ ನಿಧನ

Date:

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ ಎಸ್ ಪುಟ್ಟಸ್ವಾಮಿ ಅವರು ಸೋಮವಾರ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು.

ನ್ಯಾಯಮೂರ್ತಿ ಪುಟ್ಟಸ್ವಾಮಿ ಅವರು ‘ಆಧಾರ್’ ಯೋಜನೆಯನ್ನು ಸಂವಿಧಾನದ 21ನೇ ವಿಧಿಯಡಿ ಪ್ರಶ್ನಿಸಿದ ಮೊದಲಿಗರು ಎಂದೇ ಪ್ರಸಿದ್ಧರು. ಆಧಾರ್‌ ಯೋಜನೆಯ ಸಿಂಧುತ್ವ ಪ್ರಶ್ನಿಸಿ 2012ರಲ್ಲಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನಾಗರಿಕರ ಖಾಸಗಿತನದ ಹಕ್ಕು ಸಂವಿಧಾನವೇ ರಕ್ಷಿಸಿರುವ ಮೂಲಭೂತ ಹಕ್ಕು ಎಂದು ಸುಪ್ರೀಂ ಪೀಠ ತೀರ್ಪು ನೀಡಿತ್ತು. ಆದರೆ ಆಧಾರ್‌ ಯೋಜನೆಯನ್ನು ಅದು ಎತ್ತಿ ಹಿಡಿಯಿತು.

ವಕೀಲರಾಗಿ 1952 ರಲ್ಲಿ ನೋಂದಾಯಿಸಿಕೊಂಡ ಅವರು ನವೆಂಬರ್ 1977ರಲ್ಲಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಹೈಕೋರ್ಟ್‌ನಲ್ಲಿ 1986ರವರೆಗೆ ಸೇವೆ ಸಲ್ಲಿಸಿದ ಅವರು ನಿವೃತ್ತಿ ಬಳಿಕ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ (ಸಿಎಟಿ) ಬೆಂಗಳೂರು ಪೀಠದ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...