ರಾಗಿಗುಡ್ಡ ಗಲಭೆಕೋರರಿಗೆ ಕಾಂಗ್ರೆಸ್‌ ಸರ್ಕಾರದ ರಕ್ಷಣೆ ಇದೆ: ಕೇಂದ್ರ ಸಚಿವ ಜೋಶಿ ಆರೋಪ

Date:

  • ರಾಜ್ಯ ಸರ್ಕಾರವು ರಾಗಿಗುಡ್ಡ ಪ್ರಕರಣ ಗಂಭೀರವಾಗಿ ತೆಗೆದುಕೊಂಡಿಲ್ಲ
  • ರಾಜ್ಯ ಸರ್ಕಾರದ ತುಷ್ಟೀಕರಣ ರಾಜಕಾರಣದ ಪರಮಾವಧಿ: ಜೋಶಿ ಟೀಕೆ

ಶಿವಮೊಗ್ಗದ ರಾಗಿಗುಡ್ಡದ ಗಲಾಟೆಯನ್ನು ರಾಜ್ಯ ಸರ್ಕಾರ ಇನ್ನೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಗಲಭೆಕೋರರಿಗೆ ಕಾಂಗ್ರೆಸ್‌ ಸರ್ಕಾರದಿಂದ ರಕ್ಷಣೆ ಇದೆ ಎನ್ನುವ ಅನುಮಾನ ಕಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ರಾಗಿಗುಡ್ಡದ ಗಲಾಟೆ ನೋಡಿದರೆ ರಾಜ್ಯ ಸರ್ಕಾರದ ತುಷ್ಟೀಕರಣ ರಾಕಾರಣದ ಪರಮಾವಧಿ ಎದ್ದು ಕಾಣುತ್ತದೆ” ಎಂದು ಕಿಡಿಕಾರಿದರು.

“ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವವರನ್ನು, ತಲ್ವಾರ್ ಹಿಡಿದು ಬೆದರಿಕೆ ಹಾಕೋರನ್ನು ರಕ್ಷಣೆ ಮಾಡಲು ಹೊರಟ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು” ಎಂದು ಜೋಶಿ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇವಲ ಅಲ್ಪಸಂಖ್ಯಾತ ಸಮುದಾಯದ ಮತದಾರರು ಮಾತ್ರ ಕಾಂಗ್ರೆಸ್ಸಿಗೆ ಮತ ಹಾಕಿಲ್ಲ ಎನ್ನುವುದನ್ನು ಈ ಸರ್ಕಾರ ನೆನಪಿನಲ್ಲಿಟ್ಟುಕೊಳ್ಳಬೇಕು. ದೇಶದ್ರೋಹಿಗಳ, ಗಲಭೆಕೋರರ ಪರ ನಿಲ್ಲುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ” ಎಂದರು.

“ಶಿವಮೊಗ್ಗ ಮತ್ತು ಹುಬ್ಬಳ್ಳಿಯಲ್ಲಿ ಹಿಂದೂಗಳ ಮನೆಗಳ ಮೇಲೆ, ಪೊಲೀಸರ ಮೇಲೆ ದಾಳಿ ಮಾಡಲಾಗಿದೆ. ಆದರೆ, ಅವರ ಮೇಲಿನ ಕೇಸ್‌ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗೆ ಒಂದು ಸಮುದಾಯವನ್ನು ಮಾತ್ರ ಓಲೈಕೆ ಮಾಡಲು ಕಾಂಗ್ರೆಸ್‌ ಮುಂದಾಗಿದೆ. ನಾವು ಈ ನಡೆ ಖಂಡಿಸುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...