ಉಕ್ಕಿ ಹರಿಯುತ್ತಿವೆ ನದಿಗಳು – ತುಂಬುತ್ತಿವೆ ಜಲಾಶಯಗಳು; ಡ್ಯಾಂಗಳ ನೀರಿನ ಮಟ್ಟ ಹೀಗಿದೆ

Date:

ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಬಳಿಯ ಶಿರೂರಿನಲ್ಲಿ ವಾರದ ಹಿಂದೆ ಗುಡ್ಡ ಕುಸಿದಿದ್ದು, ಕೇರಳದ ಲಾರಿ ಚಾಲಕ ನಾಪತ್ತೆಯಾಗಿದ್ದಾರೆ. ಆತನಿಗಾಗಿ ಹುಡುಕಾಟ ಕಾರ್ಯಾಚರಣೆ ಮುಂದುವರೆದಿದೆ. ಇನ್ನು, ರಾಜ್ಯದ ನಾನಾ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕರೆ, ಕಟ್ಟೆ, ನದಿಗಳು ತುಂಬಿ ಹರಿಯುತ್ತಿವೆ.

ಮಹಾರಾಷ್ಟ್ರ-ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿರುವ ಪರಿಣಾಮ, ಘಟಪ್ರಭ, ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಗಳು ಮೈದುಂಬಿ ಹರಿಯುತ್ತಿವೆ. ಬೆಳಗಾವಿ ಜಿಲ್ಲೆಯ ಆರು ಸೇತುವೆಗಳು ನದಿ ನೀಡಿನಲ್ಲಿ ಮುಳುಗಿವೆ.

ಕೃಷ್ಟಾ ನದಿಗೆ ಅಡ್ಡಲಾಗಿ ಕಟ್ಟಿರುವ ಆಲಮಟ್ಟಿ ಜಲಾಶಯ ಗೇಟ್‌ಗಳನ್ನು ತೆರೆಯಲಾಗಿದ್ದು, 2.25 ಲಕ್ಷ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ. ಪರಿಣಾಮ, ಅರಳದಿನ್ನಿ, ಯಲಗೂರು, ಕಾಶಿನಕುಂಟಿ, ಯಲ್ಲಮ್ಮನ ಬೂದಿಹಾಳ, ಮಸೂತಿ ಗ್ರಾಮಗಳಿಗೆ ನೀರು ನುಗ್ಗವ ಆತಂಕ ಎದುರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾವೇರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ 610 ಮನೆಗಳಿಗೆ ಹಾನಿಯಾಗಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ. ತುಂಗಭದ್ರಾ ಹಾಗೂ ವರದಾ ನದಿಗಳ ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಎಚ್ಚರಿಕೆ ವಹಿಸಲು ವಿಪತ್ತು ನಿರ್ವಹಣಾ ತಂಡಗಳನ್ನು ರಚಿಸಲಾಗಿದೆ.

ವಿಜಯನಗರ ಜಿಲ್ಲೆಯಲ್ಲಿರುವ ತುಂಗಭದ್ರಾ ಜಲಾಶಯದ 10 ಕ್ರಸ್ಟ್‌ಗೇಟ್‌ಗಳಿಂದ ನದಿಗೆ ನೀರು ಹರಿಸಲಾಗುತ್ತಿದೆ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಒಂದೂವರೆ ಅಡಿಯಷ್ಟೇ ಬಾಕಿ ಉಳಿದಿದೆ.

105 ಟಿಎಂಸಿ ಅಡಿಯಷ್ಟು ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ, 98.06 ಟಿಎಂಸಿ ಅಡಿ ನೀರಿದೆ.

ಮಲೆನಾಡು, ಕರಾವಳಿಯಲ್ಲಿಯೂ ಮಳೆ ಅಬ್ಬರ ಮುಂದುವರೆದಿದ್ದು, ಶರಾವತಿ, ಹೇಮಾವತಿ, ನೇತ್ರಾವತಿ, ಕಾಳಿ, ಸೀತಾ, ಫಲ್ಗುಣಿ, ಕಾವೇರಿ, ಕಬಿನಿ ನದಿಗಳು ತುಂಬಿ ಹರಿಯುತ್ತಿವೆ. ಹಲವಾರು ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗಿದೆ. ಪ್ರಸ್ತುತ ಜಲಾಶಯಗಳಲ್ಲಿನ ನೀರಿನ ಮಟ್ಟ ಹೀಗಿದೆ;

ಜಲಾಶಯ ನೀರಿನ ಮಟ್ಟ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...