ರಾಜ್ಯದ ವಿವಿಗಳಲ್ಲಿ ಶೈಕ್ಷಣಿಕ – ಸಾಮಾಜಿಕ ದೌರ್ಜನ್ಯ ತಡೆಗಟ್ಟಲು ʻರೋಹಿತ್ ವೇಮುಲ ಕಾಯ್ದೆʼ ಜಾರಿ

Date:

ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾನಿಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ 2026ನೇ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಹಾಗೆಯೇ ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ರಾಜ್ಯ ಸರಕಾರ ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆʼ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪಾಲಿಟೆಕ್ನಿಕ್‌ಗಳ ಬಲವರ್ಧನೆ, ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ADB ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ʻಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆʼ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ADB ನೆರವಿನೊಂದಿಗೆ 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಇದನ್ನು ಓದಿದ್ದೀರಾ? ರೋಹಿತ್ ವೇಮುಲ ಕಾಯ್ದೆಯನ್ನು ಈ ಸಲದ ಬಜೆಟ್‌ ಅಧಿವೇಶನದಲ್ಲಿ ಘೋಷಿಸಲು ಆಗ್ರಹ

ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ KKRDB macro ಅನುದಾನದಿಂದ ಪ್ರಥಮ ದರ್ಜೆ ಕಾಲೇಜನ್ನು ಸ್ಥಾಪಿಸಲಾಗುವುದು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕಲಬುರಗಿ ಜಿಲ್ಲೆಯ ನಿಂಬರ್ಗಿ, ಯಾದಗಿರಿ ಜಿಲ್ಲೆಯ ಕಕ್ಕೇರಾ, ರಾಯಚೂರು ಜಿಲ್ಲೆಯ ಅಂಬಾಮಠ ಮತ್ತು ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮಗಳಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳನ್ನು ತಲಾ 18 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ಸರ್ಕಾರದ 11 ಪಾಲಿಟೆಕ್ನಿಕ್ಗಳಲ್ಲಿ ಹಾಗೂ ಚಿತ್ರದುರ್ಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸ್ತುತ ಹೆಚ್ಚಿನ ಬೇಡಿಕೆ ಹಾಗೂ ಉದ್ಯೋಗಾವಕಾಶವಿರುವ ಕೋರ್ಸ್ಗಳಾದ AI, ಮಷಿನ್ ಲರ್ನಿಂಗ್, ಕ್ಲೌಡ್ ಕಂಪ್ಯೂಟಿಂಗ್, ಮೈನಿಂಗ್ ಇಂಜಿನಿಯರಿಂಗ್, ಆಟೋಮೇಷನ್ ಇಂಜಿನಿಯರಿಂಗ್ ಮುಂತಾದ 15 ಹೊಸ ಕೋರ್ಸ್ಗಳನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...