ಸರ್ವೇ ಕೆಲಸಗಳಿಗೆ ರೋವರ್‌ ತಂತ್ರಜ್ಞಾನ, ಎಂಟು ದಿನಕ್ಕೆ ಹದ್ದುಬಸ್ತು: ಸಚಿವ ಕೃಷ್ಣ ಬೈರೇಗೌಡ

Date:

ನಮ್ಮ ಸರ್ಕಾರ ಬರುವ ಮೊದಲು ಹದ್ದುಬಸ್ತಿಗೆ ಸರಾಸರಿ ಒಂದು ಅರ್ಜಿ ಕೊಟ್ರೆ ಸುಮಾರು 3 ರಿಂದ 6 ತಿಂಗಳಾಗುತ್ತಿತ್ತು. ಆದರೆ ಈಗ ಗರಿಷ್ಟ 8 ದಿನದಲ್ಲಿ ನಮ್ಮ ಸರ್ಕಾರದಲ್ಲಿ ಹದ್ದುಬಸ್ತು ಮಾಡಿಕೊಡುತ್ತಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, “11ಇ ಸ್ಕೆಚ್‌ ಜೀಮೀನಿನ ಹದ್ದುಬಸ್ತು, ತತ್ಕಾಲ್‌ ಪೋಡಿ, ಇ-ಸ್ವತ್ತು, ಸ್ವಾವಲಂಭಿ, ಭೂ ಮಂಜೂರಿ ಪ್ರಕರಣಗಳ ಸರ್ವೇ, ಕೆರೆ ಬಂಡಿದಾರಿ ಸರ್ವೇ, ಭೂ ಪರಿವರ್ತನೆ ಸರ್ವೇ, ಕಂದಾಯ ಅರಣ್ಯ ಗಡಿ ನಿಗದಿಗೊಳಿಸುವ ಜಂಟಿ ಸರ್ವೇ, ಇವು ನಮ್ಮ ಇಲಾಖೆಯ ಪ್ರಮುಖ ಕೆಲಸ. ಕಳೆದ 23 ತಿಂಗಳಲ್ಲಿ ಈವರೆಗೆ 26 ಲಕ್ಷ ಸರ್ವೇ ಪ್ರಕರಣಗಳನ್ನು ಜನತೆಗೆ ಮಾಡಿಕೊಟ್ಟಿದ್ದೇವೆ. ಒಂದು ದಿನಕ್ಕೆ ಸರಾಸರಿ 5 ರಿಂದ 6 ಸಾವಿರ ಪ್ರಕರಣಗಳ್ನು ಸರ್ವೇ ಮಾಡಿಕೊಡುತ್ತಿದ್ದೇವೆ” ಎಂದು ತಿಳಿಸಿದರು.

“ಹಾವೇರಿಯಲ್ಲಿ ಒಂದು ಹದ್ದುಬಸ್ತು ಸರ್ವೇಗೆ 2 ವರ್ಷ ಆದರೂ ಆಗಿಲ್ಲ ಎಂದು ಶಾಸಕರೇ ನನ್ನನ್ನು ಪ್ರಶ್ನೆ ಮಾಡಿದ್ರು. ಈ ಬಗ್ಗೆ ನಾನು ವಿಚಾರಿಸಿದಾಗ ಆ ದೂರು ನಿಜವಾಗಿತ್ತು. ನಮ್ಮ ಹಿಂದಿನ ಸಿಎಂ ಹಾವೇರಿ ಜಿಲ್ಲೆಯವರೇ ಆಗಿದ್ದರು. ನಾನು ಇಂದಿನ ಡೇಟಾ ಪ್ರಕಾರ ಹೇಳೋದಾದ್ರೆ 8 ದಿನಕ್ಕೆ ಹದ್ದುಬಸ್ತು ಮತ್ತು ಕೇವಲ ಮೂರು ದಿನಕ್ಕೆ 11ಇ ಸ್ಕೆಚ್‌ ಮಾಡಿಕೊಡುತ್ತಿದ್ದೇವೆ. ಈ ಮೊದಲು ತಿಂಗಳಾನುಗಟ್ಟಲೆ ಕಾಯಬೇಕಾದ್ದ ಪರಿಸ್ಥಿತಿಯನ್ನು ಬದಲಿಸಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹತ್ತಾರು ವರ್ಷಗಳಿಂದ ಬಾಕಿ ಇದ್ದ ರೈತರ ಕೆಲಸಗಳನ್ನು ಕಳೆದ ಎರಡು ವರ್ಷಗಳಲ್ಲಿ ಅಭಿಯಾನದ ಮಾದರಿಯಲ್ಲಿ ನಡೆಸಲಾಗುತ್ತಿದೆ. ಗ್ರಾಮಠಾಣಾ ಹಾಗೂ ನಗರ ಪ್ರದೇಶಗಳಲ್ಲಿ ಜನ ನೆಮ್ಮದಿಯಿಂದ ಜೀವಿಸಲು ಆಸ್ತಿಯ ನಕ್ಷೆ ಅವಶ್ಯ ಎಂದು ಅರ್ಥ ಮಾಡಿಕೊಂಡು ಸ್ವಾಮಿತ್ವ ಯೋಜನೆಯ ಅಡಿ ಗ್ರಾಮಠಾಣಾಗಳನ್ನು ಕರ್ನಾಟಕದಲ್ಲಿ ಮೊದಲ ಬಾರಿಗೆ ಸರ್ವೇ ಮಾಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಜೊತೆಗೆ ನಗರ ಆಸ್ತಿ ಮಾಲಿಕತ್ವವನ್ನೂ ನೀಡಲಾಗುತ್ತಿದೆ. ಇದೇ ಮಾದರಿಯನ್ನು ಅನುಕರಿಸಿ ಕೇಂದ್ರ ಸರ್ಕಾರ ದೇಶಾದ್ಯಂತ “ನಕ್ಷಾ” ಕಾರ್ಯಕ್ರಮ ನಡೆಸುತ್ತಿದೆ. ನಮ್ಮ ರಾಜ್ಯದಲ್ಲೂ 10 ಗ್ರಾಮ ಪಂಚಾಯತ್‌ ಹಾಗೂ ನಗರ ಸಭೆ ಆಯ್ಕೆ ಮಾಡಿಕೊಂಡು ಕಳೆದ ಮೂರು ತಿಂಗಳಿಂದ ಗ್ರಾಮೀಣ-ನಗರ ಪ್ರದೆಶಗಳಲ್ಲಿ ವಸತಿ ನಿವೇಶನಗಳಿಗೆ ಆಸ್ತಿ ಪ್ರಮಾಣ ಪತ್ರ ನೀಡುತ್ತಿದೆ. ಆದರೆ, ಈ ಮಹತ್ವಾಕಾಂಕ್ಷೆಯ ಕೆಲಸಕ್ಕೆ ಬುನಾದಿ ಹಾಕಿದ್ದು ಕರ್ನಾಟಕ ಎಂದು” ಹರ್ಷ ವ್ಯಕ್ತಪಡಿಸಿದರು.

ಸರ್ವೇ ಕೆಲಸಗಳಿಗೆ ರೋವರ್‌ ತಂತ್ರಜ್ಞಾನ

“ಆಧುನಿಕ ಕಂಪ್ಯೂಟರ್ ಜಗತ್ತಿನಲ್ಲೂ ಸಹ ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಜನರ ಮೇಲೆ ಹೊರೆ ಹಾಕುವುದು ಅಮಾನವೀಯ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ನಡವಳಿಕೆ. ಸರ್ವೇ ಕೆಲಸವನ್ನು 1802 ರಿಂದಲೂ ಚೈನ್ ಹಿಡಿದೇ ಭೂಮಿಯನ್ನು ಅಳೆಯುವ ಸಂಪ್ರದಾಯ ಚಾಲ್ತಿಯಲ್ಲಿದೆ. ಬಿಸಿಲಿನಲ್ಲಿ ಸರ್ವೇಯರ್ ಜೊತೆಗೆ ಇಬ್ಬರು ಸಹಾಯಕರೂ ಕೆಲಸ ಮಾಡಬೇಕಿತ್ತು. ಸರ್ವೇ ಮಾಡಲು ಕನಿಷ್ಟ 70 ನಿಮಿಷ ಅದನ್ನು ನಕ್ಷೆ ಮಾಡಲು 3 ಗಂಟೆ ಸಮಯ ವ್ಯರ್ಥವಾಗುತ್ತಿತ್ತು. ಆದರೆ, ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ಈ ಕೆಲಸವನ್ನು ಕೇವಲ 10 ನಿಮಿಷಕ್ಕೆ ಮುಗಿಸಲಿದೆ” ಎಂದು ಮಾಹಿತಿ ನೀಡಿದರು.

“ಕಳೆದ 200 ವರ್ಷದಲ್ಲಿ ಪ್ರಪಂಚ ಇಷ್ಟು ಬದಲಾದರೂ ನಮ್ಮ ವಿಧಿ-ವಿಧಾನ ಹಾಗೆ ಇದೆ. ಪ್ರಪಂಚದ ಮುಖ ಅಂತರಾಳ ಬದಲಾದರೂ, ಇಲಾಖೆ ಕೆಲಸ ಮಾಡುವ ರೀತಿ ನೀತಿ ಮಾತ್ರ ಬದಲಾಗಿಲ್ಲ. ಆದರೆ, ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಕೆಲಸ ಮಾಡೋಕೆ ಜನ ಇದ್ದಾರೆ ಎಂದು ಉಢಾಫೆಯಿಂದ ನೌಕರರ ಮೇಲೆ ಹೊರೆ ಹಾಕುವುದು ಅಮಾನವೀಯ . ಅಲ್ಲದೆ, ಚೈನ್ ಸರ್ವೇ ಕೆಲಸದಲ್ಲಿ ಕೆಲವರು ತಮ್ಮ ಹಿತಾಸಕ್ತಿಗೆ ಅನುಗುಣವಾಗಿ ಸರ್ವೇಯಲ್ಲಿ ಬದಲಾವಣೆ ಮಾಡಬಹುದು. ಇದರಿಂದ ಹಲವರು ಇಂದಿಗೂ ಕೋರ್ಟ್ ಕಚೇರಿಗೆ ಅಲೆಯುವಂತಾಗಿದೆ. ಆದರೆ, ರೋವರ್ ಸರ್ವೇಯಲ್ಲಿ ಇಂತಹ ಅಕ್ರಮಗಳಿಗೆ ಆಸ್ಪದ ಇರುವುದಿಲ್ಲ. ಹೀಗಾಗಿ ಇಲಾಖೆಯಲ್ಲಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಜನರಿಗೆ ತ್ವರಿತ ಸರ್ವೇ ಮಾಡಿಕೊಡುವುದು ಹಾಗೂ ಅಧಿಕಾರಿಗಳಿಗೆ ಕೆಲಸದ ಒತ್ತಡ ಕಡಿಮೆ ಮಾಡುವುದು” ಎಂದರು.

“ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದೆಯೇ 775 ರೋವರ್‌ ಖರೀದಿಗೆ ಅವಕಾಶ ಮಾಡಿಕೊಟ್ಟಿದ್ದರು. ಪ್ರಸ್ತುತ 5 ಸಾವಿರ ರೋವರ್‌ ಖರೀದಿಗೆ ಅನುಮತಿ ನೀಡಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಭೂ ಮಾಪಕರಿಗೂ ಒಂದು ರೋವರ್ ನೀಡುವುದು ಹಾಗೂ ಸರ್ವೇ ನಕ್ಷೆ ನೂರಕ್ಕೆ ನೂರು ಗಣಕೀರಣಗೊಳಿಸುವುದು ನಮ್ಮ ಗುರಿ” ಎಂದು ತಿಳಿಸಿದರು.

ದುರಸ್ಥಿ ಕೆಲಸಕ್ಕೆ ಹೆಚ್ಚಿನ ಒತ್ತು

“ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ಹತ್ತಾರು ವರ್ಷಗಳ ಹಿಂದೆ ಸರ್ಕಾರಿ ಜಮೀನು ಅಕ್ರಮ ಸಕ್ರಮದಡಿ ಮಂಜೂರಾಗಿದೆ. ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ, ಅಂತಹ ರೈತರ ಪರಿಸ್ಥಿತಿ ತ್ರಿಶಂಕುವಿನಂತೆ ಆಗಿದೆ. ತಾಲ್ಲೂಕು ಕಚೇರಿ, ಸರ್ವೆ ಕಛೇರಿಗಳಿಗೆ ಅಲೆದು ಅಲೆದು ಪ್ರಯೋಜನವಾಗದೆ ತೀವ್ರ ತೊಂದರೆಗೆ ತುತ್ತಾಗಿದ್ದಾರೆ. ಈ ಬಗ್ಗೆ ಬಹಳ ವರ್ಷಗಳಿಂದ ಚರ್ಚೆಗಳು, ಪ್ರಯತ್ನಗಳು ಆಗುತ್ತಿದ್ದರೂ ಸರಿಯಾದ ಪರಿಹಾರ ದೊರೆತಿರುವುದಿಲ್ಲ” ಎಂದರು.

“ಸಿದ್ಧರಾಮಯ್ಯನವರು ಈ ಸಮಸ್ಯೆಯನ್ನು ಪರಿಹರಿಸಲು, ಸೂಕ್ತ ಪರಿಹಾರ ಕ್ರಮಕೈಗೊಳ್ಳಲು ಸೂಚಿಸಿದ ಹಿನ್ನೆಲೆಯಲ್ಲಿ, ಇಲಾಖೆ ಈ ಕೆಲಸವನ್ನು ಗಂಭೀರವಾಗಿ ಪರಿಗಣಿಸಿತ್ತು. ಪರಿಣಾಮ ಸರಳೀಕೃತ ದುರಸ್ಥಿ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈಗ ಇಲಾಖೆಯ ನೌಕರರ ಸಹಾಯದಿಂದ ಎಲ್ಲವನ್ನೂ ಆನ್‌ಲೈನ್‌ ಮೂಲಕವೇ ಮಾಡಲಾಗುತ್ತಿದ್ದು, ಕಳೆದ ಮೂರು ತಿಂಗಳಲ್ಲಿ 20 ಸಾವಿರ ರೈತರಿಗೆ ದುರಸ್ಥಿ ಮಾಡಿಕೊಟ್ಟಿದ್ದೇವೆ. ಅಲ್ಲದೆ, ಒಂದು ರೂಪಾಯಿಯೂ ಲಂಚವಿಲ್ಲದೆ ಪಾರದರ್ಶಕವಾಗಿ ಈ ಕೆಲಸವನ್ನು ಮಾಡಲಾಗುತ್ತಿದೆ ಎಂಬುದು ಗಮನಾರ್ಹ” ಎಂದು ಹೇಳಿದರು.

ಪೋಡಿ ಮುಕ್ತ ಗ್ರಾಮಗಳ ಸವಾಲು

“ಹತ್ತಾರು ವರ್ಷದಿಂದ ಪೋಡಿ ಆಗದ ಖಾಸಗಿ ಜಮೀನಿಗೆ ಪೋಡಿ ಮುಕ್ತ ಅಭಿಯಾನ ನಡೆಸಬೇಕು ಎಂದು ಸಿದ್ದರಾಮಯ್ಯನವರು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗಲೇ ಕೆಲಸ ಆರಂಭಿಸಿದ್ದರು. ಆಗಲೇ ರಾಜ್ಯದ 30 ಸಾವಿರ ಗ್ರಾಮಗಳ ಪೈಕಿ 16630 ಗ್ರಾಮಗಳನ್ನು ಪೋಡಿ ಮಾಡಲಾಗಿತ್ತು. ಆದರೆ, ಕಳೆದ ನಾಲ್ಕು ವರ್ಷ ಹಿಂದಿನ ಸರ್ಕಾರದ ಅವಧಿಯಲ್ಲಿ ಕೇವಲ 2 ಸಾವಿರ ಗ್ರಾಮಗಳಲ್ಲಿ ಮಾತ್ರ ಪೋಡಿ ಮಾಡಲಾಗಿದೆ. ಆದರೆ, ಪ್ರಸ್ತುತ 23 ತಿಂಗಳಲ್ಲಿ 2079 ಗ್ರಾಮಗಳನ್ನು ಈಗಾಗಲೇ ಪೋಡಿ ಮುಕ್ತ ಮಾಡಲಾಗಿದೆ. ಅಲ್ಲದೆ, ಉಳಿದ ಗ್ರಾಮಗಳನ್ನು ಮುಂದಿನ ಒಂದು ವರ್ಷದಲ್ಲಿ ಪೋಡಿ ಮುಕ್ತ ಮಾಡುವ ಸವಾಲನ್ನು ತೆಗೆದುಕೊಳ್ಳಲಾಗಿದೆ” ಎಂದರು.

ಹೊಸ ನೇಮಕಾತಿಗೆ ಸಿಎಂ ಅಸ್ತು

“ಮಾನವ ಸಂಪನ್ಮೂಲ ಇಲ್ಲದೆ ಜನಪರ ಕೆಲಸ ಸಾಧ್ಯವಿಲ್ಲ. ಹೀಗಾಗಿ ಇಲಾಖೆಗೆ ಮತ್ತಷ್ಟ ಬಲ ತುಂಬಲು ಖಾಲಿ ಇರುವ ಎಲ್ಲಾ ಸ್ಥಾನಗಳನ್ನು ಭರ್ತಿಗೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಗ್ರೀನ್‌ ಸಿಗ್ನಲ್‌ ನೀಡಿದ್ದು, ಈ ನಿರ್ಧಾರ ಇಲಾಖೆಯನ್ನು ಮತ್ತಷ್ಟು ಜನಪರವಾಗಿ ಕೆಲಸ ಮಾಡಲು ಅನುವು ಮಾಡಿಕೊಟ್ಟಿದೆ” ಎಂದು ಸಚಿವರು ಅಭಿಪ್ರಾಯ ಪಟ್ಟರು.

“ಸಿದ್ದರಾಮಯ್ಯನವರು ಕಳೆದ ವರ್ಷವೇ 750 ಜನ ಸರ್ಕಾರಿ ಸರ್ವೇಯರ್ ನೇಮಕಾತಿಗೆ ಒಪ್ಪಿಗೆ ಸೂಚಿಸಿದ್ದರು. ಹುದ್ದೆ ಭರ್ತಿಗೆ ಈಗಾಗಲೇ ಕೆಪಿಎಸ್‌ಸಿ ಪರೀಕ್ಷೆ ಮುಗಿಸಿ ಅಂತಿಮ ಪರೀಕ್ಷೆ ಮುಂದಿನ ಮೇ 10-11ಕ್ಕೆ ನಿಗದಿಯಾಗಿದೆ. ಸಂದರ್ಶನ ಇಲ್ಲದೆ ಮೆರಿಟ್‌ ಆಧಾರದಲ್ಲಿ ನೇಮಕಾತಿ ನಡೆಯಲಿದ್ದು, ಒಂದು ರೂಪಾಯಿಯೂ ಲಂಚಕ್ಕೆ ಆಸ್ಪದವಿಲ್ಲ. ಅಲ್ಲದೆ, ಖಾಲಿ ಇರುವ 39 ಎಡಿಎಲ್‌ಆರ್‌ ಸ್ಥಾನಗಳನ್ನೂ ತುಂಬಲು ಒಪ್ಪಿಗೆ ದೊರೆತಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...