RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಇವರ ಬಗ್ಗೆ ಎಚ್ಚರವಿರಲಿ: ಸಿಎಂ

Date:

ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು.

ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ‌ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದು ಮೆಚ್ಚುಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ “ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ” ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ. ಇಂಥ ಸತ್ಯಗಳನ್ನು ಸಮಾಜದ ಮುಂದಿಟ್ಟು ಸಂಘ ಪರಿವಾರದ ಸುಳ್ಳುಗಳನ್ನು ಬಹಿರಂಗಗೊಳಿಸಬೇಕು ಎಂದು ಕರೆ ನೀಡಿದರು.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಅನ್ನು ನಾನು ಸ್ಥಾಪಿಸಿದ್ದು ಏಕೆಂದರೆ ಅವರನ್ನು ಓದಿಕೊಂಡವರು ಅವರ ಮಾರ್ಗದಲ್ಲಿ ನಡೆಯಲಿ ಎಂಬ ಉದ್ದೇಶದಿಂದ. ಅಂಬೇಡ್ಕರ್ ಅವರಿಗೆ ಅಂಬೇಡ್ಕರ್ ಅವರೇ ಸಾಟಿ. ಮತ್ತೊಬ್ಬ ಅಂಬೇಡ್ಕರ್ ಬರಲು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಪಾಲಿಸಿ ಅವರ ಹಾದಿಯಲ್ಲಿ ನಡೆಯಬೇಕು ಎಂದರು.

ವಿಶ್ವದ ಎಲ್ಲ ಸಂವಿಧಾನಗಳನ್ನು ಓದಿ, ಜೀರ್ಣಿಸಿಕೊಂಡು ಭಾರತೀಯ ಸಮಾಜಕ್ಕೆ ಅನ್ವಯ ಆಗುವ ವಿಶ್ವ ಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ಅವರು ಭಾರತಕ್ಕೆ ಕೊಟ್ಟರು ಎಂದು ವಿವರಿಸಿದರು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಸನಾತನಿ ಒಬ್ಬ ಶೂ ಎಸೆದಿರುವುದು ಸನಾತನಿಗಳು , ಪಟ್ಟಭದ್ರರು ಸಮಾಜದಲ್ಲಿ ಇನ್ನೂ ಇದ್ದಾರೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಇದನ್ನು ಓದಿದ್ದೀರಾ? ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡ ಸಿದ್ದ; ಶುಭಮನ್ ಗಿಲ್‌ಗೆ ನಾಯಕತ್ವ – ತಂಡಕ್ಕೆ ಮರಳಿದ ಕೊಹ್ಲಿ, ರೋಹಿತ್

ಶೂ ಎಸೆತವನ್ನು ದಲಿತರಷ್ಟೇ ಅಲ್ಲ. ಪ್ರತಿಯೊಬ್ಬರೂ ವಿರೋಧಿಸಬೇಕು. ಹೀಗಾದಾಗ ಮಾತ್ರ ಸಮಾಜ ಬದಲಾವಣೆಯ ಹಾದಿಯಲ್ಲಿದೆ ಎಂದು ಸಮಾಧಾನ ಪಟ್ಟುಕೊಳ್ಳಬಹುದು ಎಂದರು.

ನಾನು ಬುದ್ದ, ಬಸವ, ಅಂಬೇಡ್ಕರ್ ವಿಚಾರದಲ್ಲಿ ನಂಬಿಕೆ ಇಟ್ಟುಕೊಂಡಿದ್ದೀನಿ. ಈ ಕಾರಣಕ್ಕೇ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯಬೇಕು ಎಂದು ಆಶಿಸುತ್ತೇನೆ. ವಿಜ್ಞಾನ ಓದಿಯೂ ಮೂಢ ನಂಬಿಕೆ ಆಚರಿಸುವವರಾಗಬೇಡಿ ಎಂದರು.

ಮೈಸೂರು ವಿವಿಯಲ್ಲಿ ಅಂಬೇಡ್ಕರ್ ಅಧ್ಯಯನ‌ ಕೇಂದ್ರ ಆಗಿ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ “ವಿಶ್ವ ಜ್ಞಾನಿ ಅಂಬೇಡ್ಕರ್ ಸಭಾ ಭವನ” ಲೋಕಾರ್ಪಣೆ ಆಗುತ್ತಿರುವುದು ಸ್ವಾಗತಾರ್ಹ ಎಂದರು.

ಎಲ್ಲರಿಗೂ ಸಮಾನ ಅವಕಾಶಗಳು ಸಿಗದೇ ಇದ್ದುದರಿಂದ ಅಸಮಾನತೆ ಸೃಷ್ಟಿಯಾಗಿದೆ. ವಿದ್ಯೆ ಯಾರಪ್ಪನ ಮನೆ ಆಸ್ತಿ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ಅವಕಾಶ ಸಿಕ್ಕಾಗ ವಿದ್ವಾಂಸರಾಗುತ್ತಾರೆ, ಜ್ಞಾನಿ ಆಗುತ್ತಾರೆ. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ ಎಂದರು.

ನಿಮ್ಮ ಸಹವಾಸ ಸರಿಯಾಗಿರಲಿ

ಸಮಾಜದ ಪರವಾಗಿ ಇರುವವರ ಜೊತೆ ನಿಮ್ಮ ಸಹವಾಸ ಇರಲಿ. ಸಮಾಜ ಬದಲಾವಣೆಯ ವಿರೋಧಿಗಳ, ಸನಾತನಿಗಳ ಸಹವಾಸ ಬೇಡ ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...