ಅಮರೇಶ ನುಗಡೋಣಿ ಅವರ ‘ದಡ ಸೇರಿಸು ತಂದೆ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾದೆಮಿ ಪ್ರಶಸ್ತಿ

Date:

ಕನ್ನಡದ ಹಿರಿಯ ಕಥೆಗಾರ ಅಮರೇಶ ನುಗಡೋಣಿ ಅವರ ‘ದಡ ಸೇರಿಸು ತಂದೆ’ ಕಥಾಸಂಕಲನಕ್ಕೆ 2025ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾದೆಮಿ ಪ್ರಶಸ್ತಿ ಲಭಿಸಿದೆ.

​ಸೋಮವಾರ ನವದೆಹಲಿಯಲ್ಲಿ ಅಕಾದೆಮಿಯು ಕನ್ನಡವೂ ಸೇರಿದಂತೆ ಒಟ್ಟು 24 ಭಾರತೀಯ ಭಾಷೆಗಳ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಿದೆ. ಪ್ರಶಸ್ತಿಯು 1 ಲಕ್ಷ ರೂ. ನಗದು ಬಹುಮಾನ, ತಾಮ್ರದ ಫಲಕ ಹಾಗೂ ಸನ್ಮಾನ ಪತ್ರವನ್ನು ಒಳಗೊಂಡಿದೆ. ಇದೇ ಮಾರ್ಚ್ 31ರಂದು ನವದೆಹಲಿಯಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾದೆಮಿ ತಿಳಿಸಿದೆ.

ಕನ್ನಡ ವಿಭಾಗದ ಕೃತಿ ಆಯ್ಕೆಗಾಗಿ ರಚಿಸಲಾಗಿದ್ದ ತ್ರಿಸದಸ್ಯ ತೀರ್ಪುಗಾರರ ಮಂಡಳಿಯಲ್ಲಿ ಹಿರಿಯ ಸಾಹಿತಿಗಳಾದ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ. ಜಯಲಲಿತ ಮತ್ತು ಸಹನಾ ಕಾಂತಬೈಲು ಕಾರ್ಯನಿರ್ವಹಿಸಿದ್ದರು. ಸುದೀರ್ಘ ಪರಿಶೀಲನೆಯ ಬಳಿಕ ಮಂಡಳಿಯು ನುಗಡೋಣಿ ಅವರ ಕೃತಿಯನ್ನು ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

‘ದಡ ಸೇರಿಸು ತಂದೆ’ ಅಮರೇಶ ನುಗಡೋಣಿ ಅವರ ಆರನೇ ಕಥಾಸಂಕಲನ. ಪಲ್ಲವ ಪ್ರಕಾಶನ 2020ರಲ್ಲಿ ಹೊರತಂದಿರುವ ಈ ಕೃತಿಯಲ್ಲಿ ಒಟ್ಟು ಎಂಟು ಕಥೆಗಳಿವೆ. ಮರ್ಯಾದಾ ಹತ್ಯೆ, ಗುಂಪು ಹಲ್ಲೆ (ಮಾಬ್ ಲಿಂಚಿಂಗ್) ಸೇರಿದಂತೆ ಸಮಕಾಲೀನ ಗ್ರಾಮೀಣ ಭಾರತದ ತಲ್ಲಣಗಳನ್ನು, ಸಮಾಜದಲ್ಲಿ ದಿನೇದಿನೇ ಕುಸಿಯುತ್ತಿರುವ ಮಾನವೀಯ ಮೌಲ್ಯಗಳನ್ನು ಈ ಕಥೆಗಳು ಅತ್ಯಂತ ಮಾರ್ಮಿಕವಾಗಿ ಹಾಗೂ ನೈಜವಾಗಿ ಕಟ್ಟಿಕೊಡುತ್ತವೆ.

​ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ನುಗಡೋಣಿಯವರಾದ ಲೇಖಕರು, ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಇವರ ‘ಸವಾರಿ’ ಕಥೆಯನ್ನಾಧರಿಸಿ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ನಿರ್ದೇಶಿಸಿದ್ದ ‘ಕನಸೆಂಬ ಕುದುರೆಯನೇರಿ’ ಚಲನಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ದೊರೆತಿತ್ತು.

​ಇತರೆ ಭಾಷೆಗಳ ಪುರಸ್ಕೃತರು:
ಕನ್ನಡದ ಜೊತೆಗೆ ಇಂಗ್ಲಿಷ್ (ಕ್ರಿಮ್ಸನ್ ಸ್ಪ್ರಿಂಗ್ – ಕಾದಂಬರಿ), ಮಲಯಾಳಂ (ಮಾಯಾಮನುಷ್ಯರ್ – ಕಾದಂಬರಿ), ಪಂಜಾಬಿ (ಸೇಫ್ಟಿ ಕಿಟ್ – ಕಥಾಸಂಕಲನ), ಬಂಗಾಳಿ (ಶ್ರೇಷ್ಠ ಕಬಿತಾ – ಕವಿತೆ), ಸಂಸ್ಕೃತ (ಪ್ರಸ್ಥಾನಚತುಷ್ಟಯೇ ಬ್ರಹ್ಮಘೋಷಃ), ತೆಲುಗು (ಅನಿಮೇಷ) ಹಾಗೂ ಉರ್ದು (ಸಫರ್ ಜಾರಿ ಹೈ) ಸೇರಿದಂತೆ ಒಟ್ಟು 24 ಭಾಷೆಗಳ ಸಾಹಿತಿಗಳಿಗೆ ಈ ಬಾರಿಯ ಕೇಂದ್ರ ಸಾಹಿತ್ಯ ಅಕಾದೆಮಿ ಪ್ರಶಸ್ತಿ ಒಲಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...