ಗ್ರಾಮೀಣ ಸೇವೆಯಲ್ಲಿದ್ದ ವೈದ್ಯರ ವೇತನ ಕಡಿತ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Date:

ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷದ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕೆಂಬ ನಿಯಮದಡಿ ಸೇವೆಗೆ ನಿಯೋಜನೆಗೊಂಡಿದ್ದ ವೈದ್ಯರ ಮಾಸಿಕ ವೇತನವನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದೆ. ತಮಗೆ ಅನ್ಯಾಯವಾಗಿದೆ ಎಂದು ವೈದ್ಯರು ಸಲ್ಲಿಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿರುವ ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಸರ್ಕಾರಿ ಕೋಟಾದ ಅಡಿಯಲ್ಲಿ ಎಂಬಿಬಿಎಎಸ್ ಪ್ರವೇಶ ಪಡೆದು 2024 ಮತ್ತು 2025ನೇ ಸಾಲಿನಲ್ಲಿ ಕೋರ್ಸ್‌ಗಳನ್ನು ಪೂರ್ಣಗೊಳಿಸಿ, ಗ್ರಾಮೀಣ ಸೇವೆಗೆ ನಿಯೋಜನೆ ಗೊಂಡಿದ್ದ 38 ವೈದ್ಯರು ಸರ್ಕಾರದ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿದಾರರಲ್ಲಿ ಒಬ್ಬರಾದ ಉತ್ತರಕನ್ನಡ ಜಿಲ್ಲೆ ಮುಂಡಗೋಡ ತಾಲೂಕು ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯ ಶಶಿಕುಮಾರ್ ಅವರು, “ರಾಜ್ಯದ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಮುಗಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಒಂದು ವರ್ಷದ ಕಡ್ಡಾಯ ಸರ್ಕಾರಿ ಸೇವೆಗೆ ನಿಯೋಜನೆಗೊಂಡು ಸೇವೆ ಸಲ್ಲಿಸುತ್ತಿದ್ದೇವೆ. ನಮಗೆ ಮಾಸಿಕ 62 ಸಾವಿರ ರೂ. ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ನಿಯೋಜನೆಗೊಂಡ ವೈದ್ಯರಿಗೆ ಮಾಸಿಕ ವೇತನ 75 ಸಾವಿರ ರೂ. ವೇತನ ನಿಗದಿ ಮಾಡಿ, 2025ರ ಆಗಸ್ಟ್ 18ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಅಕ್ಟೋಬರ್ ವೇಳೆಗೆ ವೇತನವನ್ನು 60 ಸಾವಿರ ರೂ.ಗಳಿಗೆ ಇಳಿಸಲಾಗಿದೆ” ಎಂದು ಆರೋಪಿಸಿದ್ದಾರೆ. ತಮಗೆ ಮೂಲ ವೇತನ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿದೆ. ಪ್ರತಿವಾದಿಗಳಾದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ. ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...