ಸಂಘ ಪರಿವಾರದ ಮೋದಿ ವಕ್ತಾರಿಕೆ ಲಜ್ಜೆಗೇಡಿತನದ ಪರಮಾವಧಿ: ಬಿ ಕೆ ಹರಿಪ್ರಸಾದ್‌ ವಾಗ್ದಾಳಿ

Date:

ಮಹಾತ್ಮಾ ಗಾಂಧಿಯ ಹತ್ಯೆಯ ಪಿತೂರಿ ಮತ್ತು ಹತ್ಯೆಯ ಸಂಭ್ರಮದಿಂದ ಹಿಡಿದು ಭಾರತದ ಸಂವಿಧಾನಕ್ಕೆ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಹಾಗೂ ಸೌಹಾರ್ದತಯ ಪರಂಪರೆಗೆ ಸಂಘ ಪರಿವಾರ ಮಾಡಿರುವ ಪ್ರಮಾದಗಳನ್ನು ಮರೆ ಮಾಚಿ ಪ್ರಧಾನಿ ನರೇಂದ್ರ ಮೋದಿ ಸಂಘದ ಮಾಧ್ಯಮ ವಕ್ತಾರಿಕೆ ಮಾಡುವುದು ಲಜ್ಜೆಗೇಡಿತನದ ಪರಮಾವಧಿ ಎಂದು ಎಐಸಿಸಿ ಮುಖಂಡ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಕಿಡಿಕಾರಿದ್ದಾರೆ.

“ಮನ್ ಕೀ ಬಾತ್‌ನಲ್ಲಿ ಆರ್.ಎಸ್.ಎಸ್ ಸಂಘಟನೆಯ ನೂರು ವರ್ಷದ ಕಾರ್ಯಕ್ರಮದ ವಕ್ತಾರಿಕೆ ಮಾಡುವ ಬದಲು ಪ್ರಧಾನಿ ನರೇಂದ್ರ ಮೋದಿ ಸಂಘದ ಅಧಿಕೃತ ಪತ್ರಿಕೆ ಆರ್ಗನೈಸರ್‌ಗೆ ಲೇಖನ ಬರೆದು ಬಿಡಲಿ. ಬರೆಯುವ ಮುನ್ನ ಪತ್ರಿಕೆಯಲ್ಲಿ ಈ ಹಿಂದೆ ದೇಶಕ್ಕೆ ಗಂಡಾಂತರ ತಂದಿರುವ ಸಂಘದ ಅಪಾಯಕಾರಿ ನಿಲುವುಗಳ ಬಗ್ಗೆಯೂ ಮನ್ ಕೀ ಬಾತ್ ಅಲ್ಲೇ ಮಾತಾಡಲಿ” ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಸ್ವತಂತ್ರ ಚಳುವಳಿಯಲ್ಲಿ ಭಾಗವಹಿಸದೇ, ಬ್ರಿಟಿಷರ ಗುಲಾಮಗಿರಿಯ ಸಹಾಯಧನ ಪಡೆದವರು ದೇಶದ ಸೇವೆ ಮಾಡಿದ್ದೇವೆ ಎಂದು ಹೇಳುವುದು ಸ್ವತಂತ್ರ ಹೋರಾಟಗಾರರನ್ನೇ ಅವಮಾನಿಸಿದಂತೆ. ದೇಶದ ಶಾಂತಿ, ಸುವ್ಯವಸ್ಥೆ ಹಾಗೂ ಭದ್ರತೆಗೆ ಸಂಘ ಮಾಡಿರುವ ಗಂಡಾಂತರಗಳ ಇತಿಹಾಸವೇ ಇದೆ” ಎಂದು ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಾಂಧಿಯ ಹತ್ಯೆಯ ನಂತರ ಸರ್ಧಾರ್ ಪಟೇಲ್ ಅವರು ಸಂಘವನ್ನೇ ಬ್ಯಾನ್ ಮಾಡುವಾಗ ಹೇಳಿದ ಮಾತುಗಳನ್ನಾದರೂ ಮನ್ ಕೀ ಬಾತ್ ಅಲ್ಲಿ ಮಾತಾಡುವ ಎದೆಗಾರಿಕೆ ಇದೆಯಾ? ದೇಶದ ಸೌಹಾರ್ದತೆಯ ಸೌಂದರ್ಯವನ್ನು ಹಾಳು ಮಾಡಿ, ಪ್ರಕೃತಿ ವಿಕೋಪದ ಸೇವೆಯನ್ನೇ ಪ್ರಧಾನಿಗಳು ಪ್ರದರ್ಶನ ಮಾಡುವುದು ಹಾಸ್ಯಾಸ್ಪದ” ಎಂದು ಹರಿಹಾಯ್ದಿದ್ದಾರೆ.

“ಸ್ವಯಂ ಘೋಷಿತ ನಿಸ್ವಾರ್ಥ ಸೇವೆಯ ಹೆಸರಿನಲ್ಲಿ ದೇಶಕ್ಕೆ ಅಪಾಯವಾಗಿರುವ ಸಂಘಟನೆಯನ್ನು ಹೊಗಳಲು ಪ್ರಧಾನಿ ಸ್ಥಾನವನ್ನು ಬಳಸಿಕೊಂಡಿರುವುದು ಅಕ್ಷಮ್ಯ ಮಾತ್ರವಲ್ಲ ಅಪರಾಧ ಕೂಡ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...