ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ, ನಮ್ಮನ್ನು ವೈರಿಗಳಂತೆ ಯಾಕೆ ನೋಡ್ತೀರಿ: ಡಿ ಕೆ ಶಿವಕುಮಾರ್

Date:

ನಿನ್ನೆ ರಾತ್ರಿ ಮದುವೆಯೊಂದರಲ್ಲಿ ನಾನು ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ. ರಾಜ್ಯ ಹಾಗೂ ಪಕ್ಷದ ವಿಚಾರ ಮಾತನಾಡಿದ್ದೇವೆ. ನಾನು ಹಾಗೂ ಸತೀಶ್ ಜಾರಕಿಹೊಳಿ ಸಹೋದ್ಯೋಗಿಗಳು. ನಮ್ಮನ್ನು ವೈರಿಗಳಂತೆ ಯಾಕೆ ನೋಡುತ್ತೀರಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪ್ರಶ್ನಿಸಿದರು.

ಕೆಐಎಡಿಬಿಎ ನೂತನ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, “ನಾವು ಮಧ್ಯಾಹ್ನ ಸಚಿವ ಸಂಪುಟ ಸಭೆಯಲ್ಲಿ ಇರುತ್ತೇವೆ, ರಾತ್ರಿ ಊಟಕ್ಕೆ ಸೇರುತ್ತೇವೆ, ಬೆಳಗ್ಗೆ ತಿಂಡಿಗೆ ಸೇರುತ್ತೇವೆ. ಇವೆಲ್ಲ ಇದ್ದೇ ಇರುತ್ತವೆ. ರಾಜಕೀಯದಲ್ಲಿ ಸ್ನೇಹ, ಬಾಂಧವ್ಯ, ನೆಂಟಸ್ಥನ ಇದ್ದೇ ಇರುತ್ತದೆ” ಎಂದರು.

“ಈಗ ನಾನು ಹಾಗೂ ಎಂ.ಬಿ. ಪಾಟೀಲ್ ಅವರು ಸುಮಾರು ಒಂದು ಗಂಟೆ ಕಾಲ ಮಾತಾಡಿದ್ದೇವೆ. ರಾಜ್ಯಕ್ಕೆ ಬಂಡವಾಳ ಹೂಡಿಕೆದಾರರನ್ನು ಹೇಗೆ ಆಕರ್ಷಿಸಬೇಕು. ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಹೇಗೆ ನಮಗೆ ಸ್ಪರ್ಧೆ ನೀಡುತ್ತಿದೆ. ತೆಲಂಗಾಣದಲ್ಲಿ ಸದ್ಯದಲ್ಲೇ ಜಾಗತಿಕ ಸಮಾವೇಶ ನಡೆಯಲಿದ್ದು, ಜಾಗತಿಕ ಮಟ್ಟದಲ್ಲಿ ನಾವು ಹೇಗೆ ಸ್ಪರ್ಧೆ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಈ ರೀತಿ ರಾಜ್ಯದ ಪ್ರಗತಿ ಬಗ್ಗೆ ಚರ್ಚೆ ಮಾಡುವುದು ಸಹಜ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಕೆಆರ್ ಡಿಬಿ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಮಾತನಾಡಿ, “ಕರ್ನಾಟಕದಲ್ಲಿ ಉದ್ಯಮ ಮಾಡುವವರನ್ನು ಗೌರವಿಸಬೇಕು, ಅವರ ವ್ಯವಹಾರ, ಅಧಿಕಾರಿಗಳ ಭೇಟಿಗೆ ಅನುಕೂಲ, ಅವರ ಕಡತಗಳ ತ್ವರಿತ ವಿಲೇವಾರಿ ಉದ್ದೇಶಕ್ಕೆ ರಾಜ್ಯ ಸರ್ಕಾರವು ಎಂ.ಬಿ ಪಾಟೀಲ್ ಅವರ ನೇತೃತ್ವದಲ್ಲಿ ಕೆಕೆಆರ್ ಡಿಬಿ ನೂತನ ಕಚೇರಿ ನಿರ್ಮಿಸಿದೆ. ಇಷ್ಟು ದಿನ ಬಾಡಿಗೆ ಕಟ್ಟಡದಲ್ಲಿ ಇದ್ದರು, ಈಗ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಈ ಕಚೇರಿಯಿಂದ ವಿಧಾನಸೌಧಕ್ಕೆ, ಬಸ್ ಹಾಗೂ ರೈಲ್ವೇ ನಿಲ್ದಾಣಕ್ಕೆ ಸಮೀಪವಾಗಿದ್ದು, ಇಲ್ಲಿ ಕಚೇರಿ ನಿರ್ಮಿಸಲಾಗಿದೆ” ಎಂದು ತಿಳಿಸಿದರು.

ಭ್ರಷ್ಟಾಚಾರ ವರದಿ ಅಧ್ಯಯನ ಮಾಡಿ ಅಶೋಕ್ ಅವರು ಅಧಿವೇಶನದಲ್ಲಿ ಪ್ರಸ್ತಾಪಿಸಲಿ

63% ಭ್ರಷ್ಟಾಚಾರ ರಾಜ್ಯದಲ್ಲಿದೆ ಎಂಬ ಉಪಲೋಕಾಯುಕ್ತ ಅವರ ವರದಿ ಬಗ್ಗೆ ಆರ್.ಅಶೋಕ್ ಅವರು ಮಾತನಾಡಿರುವ ಬಗ್ಗೆ ಕೇಳಿದಾಗ, “ಪಾಪ, ಆರ್.ಅಶೋಕ್ ಅವರಿಗೆ ಅದು ಯಾರ ಕಾಲದ ವರದಿ ಎಂದು ಗೊತ್ತಿಲ್ಲ. ಅವರು ಮೊದಲು ಈ ವರದಿ ಯಾರ ಕಾಲದ್ದು ಎಂದು ಓದಿಕೊಳ್ಳಲಿ. ಅವರು ಈ ವಿಚಾರವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಲಿ, ಅಲ್ಲಿಯೇ ಉತ್ತರ ನೀಡುತ್ತೇವೆ” ಎಂದು ತಿರುಗೇಟು ನೀಡಿದರು.

ದೆಹಲಿಗೆ ಸರ್ವಪಕ್ಷ ನಿಯೋಗ ಹೋಗುವ ದಿನಾಂಕ ನಿಗದಿಯಾಯಿತೇ ಎಂದು ಕೇಳಿದಾಗ, “ಈ ಬಗ್ಗೆ ಇನ್ನು ಚರ್ಚೆ ಮಾಡಬೇಕಿದೆ. ಕೇಂದ್ರ ಸಚಿವರು ಸಂಸತ್ ಅಧಿವೇಶನದಲ್ಲಿ ಕಾರ್ಯನಿರತರಾಗಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಡಿ. 8ರಂದು ನಡೆಸಲು ತೀರ್ಮಾನಿಸಲಾಗಿದ್ದ ಸಭೆ ಮುಂದೂಡಿದ್ದೇವೆ. ಅವರು ಈ ಬಗ್ಗೆ ಪತ್ರವನ್ನು ಬರೆದಿದ್ದರು. ಪ್ರಧಾನಮಂತ್ರಿಗಳು ಪ್ರಹ್ಲಾದ್ ಜೋಷಿ ಅವರೊಂದಿಗೆ ಸಭೆ ಇಟ್ಟುಕೊಂಡಿದ್ದಾರೆ. ಅಂದು ನಿರ್ಮಲಾ ಸೀತಾರಾಮನ್ ಅವರು ಮಸೂದೆ ಮಂಡನೆ ಮಾಡಬೇಕಿದೆ. ಸೋಮಣ್ಣ ಅವರು ಕೂಡ ಅಂದು ಸಭೆಯಲ್ಲಿ ಭಾಗವಹಿಸಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಅವರಿಗೆ ಹಾಗೂ ನಮಗೆ ಅನುಕೂಲವಾಗುವ ದಿನಾಂಕವನ್ನು ನಿಗದಿ ಮಾಡಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...