ಕಲಬುರಗಿ ಜಿಲ್ಲೆಯಲ್ಲಿ ಕುಂಭದ್ರೋಣ ಮಳೆ, ಜನ ಜೀವನ ಅಸ್ತವ್ಯಸ್ತ

Date:

ಕಲಬುರಗಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಎಲ್ಲೆಡೆ ಪ್ರವಾಹ ಉಂಟಾಗಿದೆ. ಕಲಬುರಗಿ ತಾಲ್ಲೂಕಿನ ಹಲವು ಸೇತುವೆಗಳು ಜಲಾವೃತಗೊಂಡಿವೆ. ಇದರಿಂದ ಹಲವು ಗ್ರಾಮಗಳ ಸಂಪರ್ಕ‌ ಕಡಿದುಕೊಂಡಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.

ಜಿಲ್ಲೆಯಾದ್ಯಂತ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಹಿನ್ನೆಲೆ ದಸರಾ ರಜೆ ನಡುವೆಯೂ ಕೆಲವು ಆಡಳಿತ ಮಂಡಳಿಯವರು ಶಾಲೆ ನಡೆಸುತ್ತಿದ್ದು, ಮಕ್ಕಳ ಹಿತದೃಷ್ಟಿಯಿಂದ ಸದರಿ ಶಾಲೆಗಳಿಗೆ ಸೆಪ್ಟೆಂಬರ್ 27 ಮತ್ತು 28 ರಂದು ರಜೆ ಘೋಷಿಸಿ ಡಿ.ಡಿ.ಪಿ.ಐ ಸೂರ್ಯಕಾಂತ ಮದಾನೆ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಕಲಬುರಗಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿರುತ್ತದೆ. ಪ್ರಯುಕ್ತ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಶಾಲೆಗಳಿಗೆ ಈಗಾಗಲೇ ದಸರಾ ರಜೆ ಇದ್ದು ಜಿಲ್ಲೆಯ ಕೆಲವು ಶಾಲೆಗಳ ಆಡಳಿತ ಮಂಡಳಿಯವರು ದಸರಾ ರಜೆಯಿಂದ ವಿನಾಯತಿ ಪಡೆದುಕೊಂಡು ಶಾಲೆಗಳನ್ನು ನಡೆಸುತ್ತಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

    ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

    ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

    ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...