BREAKING NEWS | ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

Date:

ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಶುಕ್ರವಾರ (ಮೇ 16) ಸಂಜೆ ಐದು ಗಂಟೆಗೆ ಪ್ರಕಟವಾಗಲಿದೆ. ಪರೀಕ್ಷಾ ಶುಲ್ಕ ಇಲ್ಲದೆಯೇ ಎರಡನೇ ಬಾರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಏಪ್ರಿಲ್ 24ರಿಂದ ಮೇ 8ರವರೆಗೆ ಪರೀಕ್ಷೆ ನಡೆದಿತ್ತು.

ಪರೀಕ್ಷೆಯಲ್ಲಿಅನುತ್ತೀರ್ಣರಾಗಿದ್ದ 1.70 ಲಕ್ಷ ವಿದ್ಯಾರ್ಥಿಗಳ ಪೈಕಿ 1.57 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡಿದ್ದರು. ಸುಮಾರು ಶೇಕಡ 92.4ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಇದನ್ನು ಓದಿದ್ದೀರಾ? ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಸುಮಾರು 70 ಸಾವಿರ ವಿದ್ಯಾರ್ಥಿಗಳು ಮೊದಲ ಪರೀಕ್ಷೆಯಲ್ಲಿ ಬಂದ ಫಲಿತಾಂಶ ಸಮಾಧಾನವಾಗದೆ ಫಲಿತಾಂಶ ವೃದ್ಧಿಗಾಗಿ ಮತ್ತೆ ಪರೀಕ್ಷೆಗೆ ಹಾಜರಾಗಿದ್ದರು. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ – karresults.nic.inನಲ್ಲಿ ನೋಡಬಹುದು.

ಶುಕ್ರವಾರ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ 1.94 ಲಕ್ಷ ವಿದ್ಯಾರ್ಥಿಗಳಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದಾರೆ. ಮೊದಲ ಮತ್ತು ಎರಡನೇ ಪರೀಕ್ಷೆ ಫಲಿತಾಂಶ ಸೇರಿಸಿ ಒಟ್ಟಾರೆಯಾಗಿ ದ್ವಿತೀಯ ಪಿಯುಸಿ ಫಲಿತಾಂಶ ಶೇ. 77.96 ಆಗಿದೆ.

ಇನ್ನು ಫಲಿತಾಂಶ ವೃದ್ಧಿಗಾಗಿ ಮತ್ತೆ ಪರೀಕ್ಷೆಗೆ ಹಾಜರಾಗಿದ್ದ 71,964 ವಿದ್ಯಾರ್ಥಿಗಳಲ್ಲಿ 41,719 ವಿದ್ಯಾರ್ಥಿಗಳು ಮೊದಲ ಪರೀಕ್ಷೆಗಿಂತ ಅಧಿಕ ಅಂಕ ಪಡೆದಿದ್ದಾರೆ.

ಇದನ್ನು ಓದಿದ್ದೀರಾ? ಬ್ರೇಕಿಂಗ್‌ ನ್ಯೂಸ್ | ಶುಕ್ರವಾರ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಎಂಜನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣದ ಪ್ರವೇಶಕ್ಕೆ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಸಿಇಟಿ ಫಲಿತಾಂಶಕ್ಕೂ ಮುನ್ನವೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆ-2 ಫಲಿತಾಂಶ ಪ್ರಕಟಿಸಿದೆ.

ಕೆಎಸ್‌ಇಎಬಿ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 3 ಅನ್ನು ಜೂನ್ 9ರಿಂದ 21ರವರೆಗೆ ನಡೆಸುತ್ತದೆ. ಆ ಪರೀಕ್ಷೆಗೂ ಯಾವುದೇ ಶುಲ್ಕವಿಲ್ಲ. ಇನ್ನು ದ್ವಿತೀಯ ಪಿಯುಸಿ ಮೊದಲ ಪರೀಕ್ಷೆ ಫಲಿತಾಂಶ ಏಪ್ರಿಲ್ 8ರಂದು ಮಧ್ಯಾಹ್ನ 12.30ರ ಸುಮಾರಿಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...