ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ನಿಧನ

Date:

ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ(63) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರು ಸಂಜೆವಾಣಿ ಪತ್ರಿಕೆ ಮತ್ತು ಇಂದು ಸಂಜೆ ಪತ್ರಿಕೆಗಳ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದರು.

ಚಳಿಗಾಲದ ಅಧಿವೇಶನದ ವರದಿ ಮಾಡಲು ಬೆಳಗಾವಿಗೆ ತೆರಳಿದ್ದ ದೊಡ್ಡಬೊಮ್ಮಯ್ಯ, ಶನಿವಾರ ಬೆಳಗ್ಗೆ ಬೆಂಗಳೂರಿಗೆ ಮರಳಿದ್ದರು. ತಮ್ಮ ಮನೆಗೆಂದು ಬಿಎಂಟಿಸಿ ಬಸ್‌ನಲ್ಲಿ ತೆರಳುವಾಗಲೇ ಹೃದಯಾಘಾತವಾಗಿದ್ದು, ಸಾವನ್ನಪ್ಪಿದ್ದಾರೆ.

ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ್ಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ, ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ ಕೆಲಸ ಮಾಡಿದ್ದರು. ಸುಮಾರು 30 ವರ್ಷ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಅವರು, ಅಪಾರವಾದ ಆತ್ಮೀಯ ಬಳಗವನ್ನು ಗಳಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೊಡ್ಡಬೊಮ್ಮಯ್ಯ ಅವರು ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದರು. ಪ್ರೆಸ್‌‍ ಕ್ಲಬ್‌ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಅವರ ನಿಧನಕ್ಕೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್‌‍ಕ್ಲಬ್‌ ಆಫ್ ಬೆಂಗಳೂರು, ವರದಿಗಾರರ ಕೂಟ ಶೋಕ ವ್ಯಕ್ತಪಡಿಸಿವೆ.

ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...